14 ವರ್ಷದ ಅತ್ಯಾಚಾರ ಸಂತ್ರಸ್ತೆಯ 30 ವಾರಗಳ ಗರ್ಭಪಾತಕ್ಕೆ ಸುಪ್ರೀಂಕೋರ್ಟ್​ ಅನುಮತಿ

|

Updated on: Apr 22, 2024 | 2:14 PM

ಅತ್ಯಾಚಾರ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಪ್ರಕರಣದ ವಿಚಾರಣೆ ವೇಳೆ 14 ವರ್ಷದ ಅತ್ಯಾಚಾರ ಸಂತ್ರಸ್ತೆ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ನೀಡಿದೆ. 14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ 30ನೇ ವಾರದಲ್ಲಿ ಗರ್ಭಪಾತ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಇದೊಂದು ಅತ್ಯಾಚಾರ ಪ್ರಕರಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ

14 ವರ್ಷದ ಅತ್ಯಾಚಾರ ಸಂತ್ರಸ್ತೆಯ 30 ವಾರಗಳ ಗರ್ಭಪಾತಕ್ಕೆ ಸುಪ್ರೀಂಕೋರ್ಟ್​ ಅನುಮತಿ
ಗರ್ಭಿಣಿ
Follow us on

ಹದಿನಾಲ್ಕು ವರ್ಷದ ಅತ್ಯಾಚಾರ ಸಂತ್ರಸ್ತೆಯ 30 ವಾರಗಳ ಗರ್ಭಪಾತ(Abortion)ಕ್ಕೆ ಸುಪ್ರೀಂಕೋರ್ಟ್​(Supreme Court) ಅನುಮತಿ ನೀಡಿದೆ. ಬಾಂಬೆ ಹೈಕೋರ್ಟಿನ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸಿತು, 30 ವಾರಗಳ ಆಕೆಯ ಗರ್ಭವನ್ನು ಅಂತ್ಯಗೊಳಿಸಲು ಅವಕಾಶ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (ಸಿಜೆಐ) ನೇತೃತ್ವದ ಪೀಠ, ಸಂತ್ರಸ್ತೆಯ ಗರ್ಭಪಾತಕ್ಕಾಗಿ ವೈದ್ಯರ ತಂಡವನ್ನು ರಚಿಸುವಂತೆ ಮುಂಬೈನ ಲೋಕಮಾನ್ಯ ತಿಲಕ್ ಆಸ್ಪತ್ರೆಯ ಡೀನ್ ಅವರಿಗೆ ಸೂಚಿಸಿತು.

ವಾಸ್ತವವಾಗಿ, ಅರ್ಜಿಯಲ್ಲಿ, 14 ವರ್ಷದ ಅತ್ಯಾಚಾರ ಸಂತ್ರಸ್ತೆಯ ತಾಯಿಯು ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿದ್ದರು, ಇದರಲ್ಲಿ ಆಕೆಯ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ನಿರಾಕರಿಸಲಾಗಿತ್ತು.

ಏಪ್ರಿಲ್ 19 ರಂದು ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತ್ತು. ಬಲಿಪಶು ವೈದ್ಯಕೀಯ ಗರ್ಭಪಾತಕ್ಕೆ ಒಳಗಾಗಿದ್ದರೆ ಅಥವಾ ಹಾಗೆ ಮಾಡದಂತೆ ಸಲಹೆ ನೀಡಿದರೆ ಆಕೆಯ ದೈಹಿಕ ಮತ್ತು ಮಾನಸಿಕ ಸ್ಥಿತಿಯ ಮೇಲೆ ಯಾವ ಪರಿಣಾಮ ಬೀರಬಹುದು ಎಂಬುದರ ಕುರಿತು ವರದಿಯನ್ನು ಸಲ್ಲಿಸುವಂತೆ ಮುಂಬೈನ ಸಿಯಾನ್‌ನಲ್ಲಿರುವ ಆಸ್ಪತ್ರೆಯನ್ನು ಅದು ಕೇಳಿದೆ.

ಮತ್ತಷ್ಟು ಓದಿ: 12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಕೇರಳ ಹೈಕೋರ್ಟ್: ವರದಿ

ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ ಆಕ್ಟ್ (MTP) ಅಡಿಯಲ್ಲಿ, ವಿವಾಹಿತ ಮಹಿಳೆಯರಿಗೆ ಮತ್ತು ವಿಶೇಷ ವರ್ಗದ ಮಹಿಳೆಯರಿಗೆ ಗರ್ಭಧಾರಣೆಯ ಮುಕ್ತಾಯದ ಗರಿಷ್ಠ ಮಿತಿ 24 ವಾರಗಳು. ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ಅತ್ಯಾಚಾರ ಸಂತ್ರಸ್ತೆ ಹಾಗೂ ದಿವ್ಯಾಂಗ ಹಾಗೂ ಇತರೆ ದುರ್ಬಲ ಮಹಿಳೆಯರು ಒಳಗೊಂಡಂತೆ ವಿವಾಹಿತೆಯರ ಗರ್ಭಪಾತದ ಅವಧಿ 24 ವಾರಗಳನ್ನು ಮೀರಬಾರದು.

ಈ ಪ್ರಕರಣದ ತುರ್ತು ವಿಚಾರಣೆಯನ್ನು ಏಪ್ರಿಲ್ 19 ರಂದು ಸುಪ್ರೀಂ ಕೋರ್ಟ್ ನಡೆಸಿತ್ತು, ಇದರಲ್ಲಿ ನ್ಯಾಯಾಲಯವು ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಆದೇಶಿಸಿತ್ತು. ಸೋಮವಾರ ಬೆಳಗ್ಗೆ 10:30ಕ್ಕೆ ಆಸ್ಪತ್ರೆ ತನ್ನ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

ಗರ್ಭಧಾರಣೆ ಮುಂದುವರೆಸುವುದು ಸಂತ್ರಸ್ತೆಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವೈದ್ಯಕೀಯ ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅತ್ಯಾಚಾರ ಸಂತ್ರಸ್ತೆಯ ತಾಯಿ ಹೇಳಿಕೆ ಪ್ರಕಾರ ಫೆ.2023ರಲ್ಲಿ ಆಕೆ ಕಾಣೆಯಾಗಿ ಮೂರು ತಿಂಗಳ ಬಳಿಕ ರಾಜಸ್ಥಾನದಲ್ಲಿ ಪತ್ತೆಯಾಗಿದ್ದಳು. ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾರಣ ಆಕೆ ಗರ್ಭಿಣಿಯಾಗಿದ್ದಳು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ