Bullock Cart Race: ಎತ್ತಿನ ಬಂಡಿ ಓಟಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್; ಮಹಾರಾಷ್ಟ್ರದಲ್ಲಿ ಮತ್ತೆ ಆರಂಭವಾಗಲಿದೆ ಸ್ಪರ್ಧೆ

ಮಹಾರಾಷ್ಟ್ರದಲ್ಲಿ ಗೂಳಿ ರೇಸ್​​ಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಇದರಿಂದಾಗಿ ಏಳು ವರ್ಷಗಳ ನಂತರ ಮಹಾರಾಷ್ಟ್ರದಲ್ಲಿ ಮತ್ತೆ ಸ್ಪರ್ಧೆ ಆರಂಭವಾಗಲಿದೆ.

Bullock Cart Race: ಎತ್ತಿನ ಬಂಡಿ ಓಟಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್; ಮಹಾರಾಷ್ಟ್ರದಲ್ಲಿ ಮತ್ತೆ ಆರಂಭವಾಗಲಿದೆ ಸ್ಪರ್ಧೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on:Dec 16, 2021 | 1:05 PM

ನವದೆಹಲಿ: ಮಹಾರಾಷ್ಟ್ರದಲ್ಲಿ (Maharastra) ಗೂಳಿ ರೇಸ್‌ಗೆ ಸುಪ್ರೀಂಕೋರ್ಟ್ (Supreme Court) ಅನುಮತಿ ನೀಡಿದೆ. ಇದರಿಂದಾಗಿ ಏಳು ವರ್ಷದ ಬಳಿಕ ಮತ್ತೆ ಮಹಾರಾಷ್ಟ್ರದಲ್ಲಿ ಎತ್ತಿನ ಬಂಡಿ ಓಟದ ಸ್ಪರ್ಧೆಗಳು ನಡೆಯಲಿವೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳಿಗೆ ಮಾಡಿದ ತಿದ್ದುಪಡಿಗಳ ಆಧಾರದ ಮೇಲೆ ಮಹಾರಾಷ್ಟ್ರ ರಾಜ್ಯವು ರಾಜ್ಯದಲ್ಲಿ ಎತ್ತಿನ ಗಾಡಿ ಓಟವನ್ನು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. 2018ರಲ್ಲಿ ಬಾಂಬೆ ಹೈಕೋರ್ಟ್ ರಾಜ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಗಳನ್ನು ನಡೆಸುವುದರ ವಿರುದ್ಧ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಎಮ್ ಖಾನ್ವಿಲಾರ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಜಲ್ಲಿಕಟ್ಟುವಿನಂತಹ ಸಾಂಪ್ರದಾಯಿಕ ಪ್ರಾಣಿ ಕ್ರೀಡೆಗಳನ್ನು ನಿಷೇಧಿಸಿದ ಪ್ರಾಣಿ ಕಲ್ಯಾಣ ಮಂಡಳಿ ವಿರುದ್ಧ ಎ ನಾಗರಾಜ ಪ್ರಕರಣದ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಆದೇಶ ನೀಡಿದೆ. 

ಗೂಳಿ ಕಾಳಗದ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಿನ್ನೆ (ಬುಧವಾರ) ಸುಪ್ರೀಂ ಕೋರ್ಟ್ ನಲ್ಲಿ ನಡೆದಿತ್ತು . ಈ ಹಿಂದೆ ಇತರ ರಾಜ್ಯಗಳಿಗೂ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿತ್ತು. ಅವರಿಗೂ ಉತ್ತರಿಸಲು ಕಾಲಾವಕಾಶ ನೀಡಲಾಗಿತ್ತು. 2017 ರಲ್ಲಿ ಮುಂಬೈ ಹೈಕೋರ್ಟ್ ಎತ್ತಿನ ಬಂಡಿ ರೇಸ್ ನಿಷೇಧದ ತೆರವಿಗೆ ಒಪ್ಪಿರಲಿಲ್ಲ. ಇದನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ರಾಜ್ಯದ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ 2017ರ ಮಧ್ಯಂತರ ಆದೇಶದ ಅನ್ವಯ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಆದರೆ ಇದೇ ಸ್ಥಾನದಲ್ಲಿರುವ ಮಹಾರಾಷ್ಟ್ರಕ್ಕೆ ಯಾಕೆ ಅನುಮತಿ ಇಲ್ಲ ವಾದ ಮಂಡಿಸಿದ್ದರು.

ವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ರೇಸ್‌ಗಳಿಗೆ ಈಗ ಷರತ್ತುಬದ್ಧವಾಗಿ ಅನುಮತಿ ನೀಡಿದೆ. “ಒಂದು ದೇಶ, ಒಂದು ಜನಾಂಗ, ನಮಗೆ ಏಕರೂಪತೆ ಬೇಕು ಮತ್ತು ಒಂದೇ ನಿಯಮ ಇರಬೇಕು. ಬೇರೆ ರಾಜ್ಯಗಳಲ್ಲಿ ಓಟಗಳು ನಡೆಯುತ್ತಿದ್ದರೆ, ಮಹಾರಾಷ್ಟ್ರ ಏಕೆ ಅದಕ್ಕೆ ಅವಕಾಶ ನೀಡಬಾರದು” ಎಂದು ನ್ಯಾಯಮೂರ್ತಿ ಖಾನ್ವಿಲ್ಕರ್ ವಿಚಾರಣೆಯ ವೇಳೆ ಮೌಖಿಕವಾಗಿ ಹೇಳಿದರು. “ಇದು ಹಲವಾರು ವರ್ಷಗಳಿಂದ ನಡೆಯುತ್ತಿರುವ ಸಾಂಪ್ರದಾಯಿಕ ಕ್ರೀಡೆಯಾಗಿದೆ, ತೀರ್ಪು ಬಂದಿತು ಅದನ್ನು ನಿಲ್ಲಿಸಲಾಯಿತು. ತಿದ್ದುಪಡಿ ಬಂದಿತು- ನಿಯಂತ್ರಿತ ರೀತಿಯಲ್ಲಿ ಅನುಮತಿಸಲಾಗಿದೆ. ಇದು ಸಾಂಪ್ರದಾಯಿಕ ಕ್ರೀಡೆಯಾಗಿದೆ ಮತ್ತು ಮಹಾರಾಷ್ಟ್ರವನ್ನು ಹೊರತುಪಡಿಸಿ ದೇಶದೆಲ್ಲೆಡೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಮಾತ್ರ ನಿಲ್ಲಿಸುವುದರಲ್ಲಿ ಅರ್ಥವಿಲ್ಲ’’ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

ಈ ನಿರ್ಧಾರದಿಂದ 2014ರ ಬಳಿಕ ಮೊದಲ ಬಾರಿಗೆ ಅಧಿಕೃತವಾಗಿ ಮಹಾರಾಷ್ಟ್ರದಲ್ಲಿ ಮತ್ತೆ ಎತ್ತಿನಗಾಡಿ ಓಟ ಆರಂಭವಾಗಲಿದೆ. ಮಹಾರಾಷ್ಟ್ರದ ಗ್ರಾಮೀಣ ಭಾಗಗಳಲ್ಲಿ ಎತ್ತಿನ ಬಂಡಿಗಳ ಓಟಕ್ಕೆ ಬಹಳ ಆಕರ್ಷಣೆಯಿದೆ. ಆದರೆ ಓಟದ ವೇಳೆ ಪ್ರಾಣಿಗಳ ಹಿಂಸೆ ನಡೆಸಲಾಗುತ್ತದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ನಿಯಮಗಳ ಅನುಸಾರ ಓಟಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ:

ಆಶ್ಲೆ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಮತಾಂತರ ಯತ್ನ ಆರೋಪ, ಶಾಲೆ ವಿರುದ್ದ ಕ್ರಮಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಉದ್ಯೋಗಿಗಳಿಗೆ 2 ಉಚಿತ ಮನೆಗಳನ್ನು ನೀಡುವುದಾಗಿ ಘೋಷಿಸಿದ ಕಂಪನಿ; ಇದಕ್ಕೆ ಮೀಸಲಿಟ್ಟ ಹಣವೆಷ್ಟು?

Published On - 12:29 pm, Thu, 16 December 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್