AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಠಾಕ್ರೆ ಬಣಕ್ಕೆ ಮುಖಭಂಗ: ನಿಜವಾದ ಶಿವಸೇನಾ ಯಾವುದೆಂದು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಅನುಮತಿ

ಶಿವಸೇನಾ ಪಕ್ಷದ ಬಿಲ್ಲು-ಬಾಣ ಚುನಾವಣಾ ಚಿಹ್ನೆಯಾಗಿ ನೀಡುವಂತೆ ಶಿಂಧೆ ಪಾಳೆಯದ ಮನವಿಯನ್ನು ಮುಂದುವರಿಸಲು ಮಂಗಳವಾರ ಸುಪ್ರೀಂಕೋರ್ಟ್‌ನ ಸಂವಿಧಾನ ಪೀಠವು ಚುನಾವಣಾ ಆಯೋಗಕ್ಕೆ ಅನುಮತಿ ನೀಡಿದೆ.

ಠಾಕ್ರೆ ಬಣಕ್ಕೆ ಮುಖಭಂಗ: ನಿಜವಾದ ಶಿವಸೇನಾ ಯಾವುದೆಂದು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಅನುಮತಿ
ಏಕನಾಥ್ ಶಿಂಧೆ ಮತ್ತು ಉದ್ಧವ್ ಠಾಕ್ರೆImage Credit source: India Today
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 27, 2022 | 5:57 PM

Share

ದೆಹಲಿ: ಶಿವಸೇನಾದ ಯಾವ ಬಣ “ನಿಜ”ವಾದ ಶಿವಸೇನಾ (Shivsena) ಎಂದು ನಿರ್ಧರಿಸಲು ಭಾರತದ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ (Supreme Court) ಅನುಮತಿ ನೀಡಿದೆ. ನ್ಯಾಯಾಲಯದ ಈ ನಿರ್ಧಾರ ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆಯಾಗಿದೆ. ಉದ್ಧವ್ ಠಾಕ್ರೆ ನೇತೃತ್ವ ಸರ್ಕಾರದಲ್ಲಿ ಬಂಡಾಯವೆದ್ದಿದ್ದ ಶಿಂಧೆ ಬಣ, ಠಾಕ್ರೆ ಸರ್ಕಾರವನ್ನು ಪತನ ಮಾಡಿ ಬಿಜೆಪಿಯೊಂದಿಗೆ ಸೇರಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೇರಿತ್ತು. ಶಿವಸೇನಾ ಪಕ್ಷದ ಬಿಲ್ಲು-ಬಾಣ ಚುನಾವಣಾ ಚಿಹ್ನೆಯಾಗಿ ನೀಡುವಂತೆ ಶಿಂಧೆ ಪಾಳೆಯದ ಮನವಿಯನ್ನು ಮುಂದುವರಿಸಲು ಮಂಗಳವಾರ ಸುಪ್ರೀಂಕೋರ್ಟ್‌ನ ಸಂವಿಧಾನ ಪೀಠವು ಚುನಾವಣಾ ಆಯೋಗಕ್ಕೆ  ಅನುಮತಿ ನೀಡಿದೆ. ಇದಕ್ಕಿಂತ ಮೊದಲು ಈ ಕಾನೂನು ಹೋರಾಟದಲ್ಲಿ ಗೆಲುವು ನಮ್ಮದೇ ಎಂದು ಠಾಕ್ರೆ ವಿಶ್ವಾಸ ವ್ಯಕ್ತಪಡಿಸಿದ್ದರು. ನನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ಭರವಸೆ ಇದೆ, ನಾವೇ ಗೆಲ್ಲುತ್ತೇವೆ ಎಂದು ಒಸ್ಮನಾಬಾದ್​​  ಶಿವಸೇನಾ ಕಾರ್ಯಕರ್ತರಲ್ಲಿ ಹೇಳಿದ್ದಾರೆ. ಠಾಕ್ರೆ ಸರ್ಕಾರ ಪತನವಾಗುವ ಮುನ್ನ ಒಸ್ಮನಾಬಾದ್ ಹೆಸರನ್ನು ಧಾರಾಶಿವ್ ಎಂದು ಬದಲಿಸಲಾಗಿತ್ತು. ಮುಂಬೈಯ ಮಾತೋಶ್ರೀಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಏಕನಾಥ್ ಶಿಂಧೆ ಮತ್ತು 39 ಶಾಸಕರು ಬಂಡಾಯವೆದ್ದ ನಂತರ ಉದ್ಧವ್ ಠಾಕ್ರೆ ನೇತೃತ್ವದ ಮಹಾ ಅಘಾಡಿ ಸರ್ಕಾರ ಪತನವಾಗಿತ್ತು. ಶಿಂಧೆ ಜೂನ್ 30ರಂದು ಮಹಾ ಸಿಎಂ ಆಗಿ ಮತ್ತು ಬಿಜೆಪಿಯ ದೇವೆಂದ್ರ ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಆಗಸ್ಟ್ 23 ರಂದು, ಠಾಕ್ರೆ ಮತ್ತು ಶಿಂಧೆ ನೇತೃತ್ವದ ಬಣಗಳು ಪಕ್ಷಾಂತರ, ವಿಲೀನ ಮತ್ತು ಅನರ್ಹತೆಗೆ ಸಂಬಂಧಿಸಿದ ಹಲವಾರು ಸಾಂವಿಧಾನಿಕ ಪ್ರಶ್ನೆಗಳನ್ನು ಎತ್ತಿಕೊಂಡು ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಐವರು ನ್ಯಾಯಾಧೀಶರ ಪೀಠಕ್ಕೆ ನೀಡಿತ್ತು.

‘ನಿಜವಾದ’ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಶಿಂಧೆ ಬಣದ ಮನವಿಗೆ ಯಾವುದೇ ಆದೇಶ ನೀಡದಂತೆ ಠಾಕ್ರೆ ಬಣ  ಚುನಾವಣಾ ಆಯೋಗವನ್ನು (ECI) ಕೇಳಿಕೊಂಡಿತ್ತು. ಅನರ್ಹತೆ, ಸ್ಪೀಕರ್ ಮತ್ತು ರಾಜ್ಯಪಾಲರ ಅಧಿಕಾರ ಮತ್ತು ನ್ಯಾಯಾಂಗ ಪರಾಮರ್ಶೆಗೆ ಸಂಬಂಧಿಸಿದ ಸಂವಿಧಾನದ 10ನೇ ಶೆಡ್ಯೂಲ್‌ಗೆ ಸಂಬಂಧಿಸಿದ ಪ್ರಮುಖ ಸಾಂವಿಧಾನಿಕ ವಿಷಯಗಳನ್ನು ಅರ್ಜಿಗಳ ಬ್ಯಾಚ್ ಪ್ರಸ್ತಾಪಿಸುತ್ತದೆ ಎಂದು ಅಂದಿನ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ಹೇಳಿತ್ತು. ಸಂವಿಧಾನದ 10ನೇ ಶೆಡ್ಯೂಲ್ ತಮ್ಮ ರಾಜಕೀಯ ಪಕ್ಷಗಳಿಂದ ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರ ಪಕ್ಷಾಂತರವನ್ನು ತಡೆಗಟ್ಟಲು ಒದಗಿಸುತ್ತದೆ ಮತ್ತು ಪಕ್ಷಾಂತರಗಳ ವಿರುದ್ಧ ಕಠಿಣ ನಿಬಂಧನೆಗಳನ್ನು ಒಳಗೊಂಡಿದೆ.

ಏಕನಾಥ್ ಶಿಂಧೆ ಅವರಿಗೆ ನಿಷ್ಠರಾಗಿರುವ  ಪಕ್ಷದ ಶಾಸಕರು ಮತ್ತೊಂದು ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳುವ ಮೂಲಕ ಸಂವಿಧಾನದ 10 ನೇ ಶೆಡ್ಯೂಲ್ ಅಡಿಯಲ್ಲಿ ಅನರ್ಹತೆಯಿಂದ ತಮ್ಮನ್ನು ರಕ್ಷಿಸಿಕೊಳ್ಳಬಹುದು ಎಂದು ಠಾಕ್ರೆ ಬಣ ಈ ಹಿಂದೆ ಹೇಳಿತ್ತು. ಸ್ವಂತ ಪಕ್ಷದ ವಿಶ್ವಾಸ ಕಳೆದುಕೊಂಡಿರುವ ನಾಯಕನಿಗೆ ಪಕ್ಷಾಂತರ ನಿಷೇಧ ಕಾನೂನು ಅಸ್ತ್ರವಲ್ಲ ಎಂದು ಶಿಂಧೆ ಗುಂಪು ಪ್ರತಿಪಾದಿಸಿತ್ತು.

Published On - 5:25 pm, Tue, 27 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?