AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆಯಂತೆ ಅವಿವಾಹಿತೆಗೂ ಗರ್ಭಪಾತದ ಹಕ್ಕಿದೆ: ಸುಪ್ರೀಂಕೋರ್ಟ್​

ತನ್ನ ಮಹತ್ವದ ನಿರ್ಧಾರವೊಂದರಲ್ಲಿ, 24 ವಾರಗಳ ಗರ್ಭಿಣಿಯಾಗಿರುವ ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ವಿವಾಹಿತ ಮಹಿಳೆಯಂತೆ ಅವಿವಾಹಿತೆಗೂ ಗರ್ಭಪಾತದ ಹಕ್ಕಿದೆ: ಸುಪ್ರೀಂಕೋರ್ಟ್​
Supreme court
TV9 Web
| Edited By: |

Updated on: Jul 22, 2022 | 10:12 AM

Share

ತನ್ನ ಮಹತ್ವದ ನಿರ್ಧಾರವೊಂದರಲ್ಲಿ, 24 ವಾರಗಳ ಗರ್ಭಿಣಿಯಾಗಿರುವ ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಲಿವ್-ಇನ್ ರಿಲೇಷನ್​ಶಿಪ್​ನಲ್ಲಿರುವಾಗ ಗರ್ಭಿಣಿಯಾಗಿದ್ದ ಅವಿವಾಹಿತ ಮಹಿಳೆಯೊಬ್ಬರು ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಆಕೆಯ ಮನವಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಗರ್ಭಪಾತದಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲವೆಂಬುದನ್ನು ಖಾತರಿಪಡಿಸಿಕೊಂಡು ಗರ್ಭಪಾತ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಹೇಳಿದೆ.

ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯಲ್ಲಿ ಗಂಡ ಎಂಬ ಬದಲು ಸಂಗಾತಿ ಎಂಬ ಪದ ಬಳಸಲಾಗಿದೆ. ಇದು ಈ ಕಾಯ್ದೆಯಲ್ಲಿ ಅವಿವಾಹಿತ ಮಹಿಳೆಯನ್ನು ಕೂಡ ಒಳಗೊಳ್ಳಲು ಇರುವ ಶಾಸನದ ಉದ್ದೇಶವನ್ನು ತೋರಿಸುತ್ತದೆ ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಇಂತಹ ಪರಿಸ್ಥಿತಿಯಲ್ಲಿ ಅವಿವಾಹಿತ ಮಹಿಳೆಯರೂ ಈ ಕಾಯ್ದೆಯ ವ್ಯಾಪ್ತಿಗೆ ಬರುತ್ತಾರೆ. ಅರ್ಜಿದಾರ ಮಹಿಳೆ ಅವಿವಾಹಿತ ಮಹಿಳೆ ಎಂಬ ಕಾರಣಕ್ಕೆ ಕಾಯ್ದೆಯ ಪ್ರಯೋಜನವನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಶಾಸಕಾಂಗವು ಮಾಡಿದ ಕಾನೂನಿನ ಉದ್ದೇಶವು ಕೇವಲ ವೈವಾಹಿಕ ಸಂಬಂಧದಿಂದ ಅನಪೇಕ್ಷಿತ ಗರ್ಭಧಾರಣೆಯ ವಿಷಯಕ್ಕೆ ಸೀಮಿತವಾಗಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಹಿಳೆಯ ಗರ್ಭಪಾತಕ್ಕೆ ಅವಕಾಶ ನೀಡಿದ್ದು, ದೆಹಲಿಯ ಏಮ್ಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ್ದು ವೈದ್ಯಕೀಯ ಮಂಡಳಿ ಸ್ಥಾಪಿಸಿ ಮಹಿಳೆಗೆ ಯಾವುದೇ ಅಪಾಯವಾಗದಂತೆ ಗರ್ಭಪಾತ ಮಾಡಿಸಲು ಸೂಚಿಸಿದೆ.

ವಿವಾಹಿತರು ಮತ್ತು ಅವಿವಾಹಿತರು ಎಂಬ ಭೇದವಿದ್ದರೆ ಮಾಡಿದ ಕಾನೂನಿನ ಉದ್ದೇಶ ಈಡೇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಗಮನಾರ್ಹ ಸಂಗತಿಯೆಂದರೆ, ಅರ್ಜಿದಾರರು ಅವಿವಾಹಿತ ಮಹಿಳೆಯಾಗಿದ್ದು, ಸಮ್ಮತಿಯ ಸಂಬಂಧದಿಂದ ಗರ್ಭಿಣಿಯಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್