AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಬೀದಿ ನಾಯಿಗಳಿಗೆ ಲಸಿಕೆ, ಸಂತಾನಹರಣ ಚಿಕಿತ್ಸೆ ಮಾಡಿಸಿ ಹೊರಗೆ ಬಿಡಬಹುದು: ಸುಪ್ರೀಂಕೋರ್ಟ್​

Supreme Court Verdict on Stray Dogs: ಬೀದಿ ನಾಯಿಗಳಿಗೆ  ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.  ದೆಹಲಿ ಹಾಗೂ ಎನ್​​ಸಿಆರ್​ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ ಎಂದು ಸುಪ್ರೀಂಕೋರ್ಟ್​​ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು.

ದೆಹಲಿ: ಬೀದಿ ನಾಯಿಗಳಿಗೆ ಲಸಿಕೆ, ಸಂತಾನಹರಣ ಚಿಕಿತ್ಸೆ ಮಾಡಿಸಿ ಹೊರಗೆ ಬಿಡಬಹುದು: ಸುಪ್ರೀಂಕೋರ್ಟ್​
ನಾಯಿಗಳುImage Credit source: OpIndia
ನಯನಾ ರಾಜೀವ್
|

Updated on:Aug 22, 2025 | 2:17 PM

Share

ನವದೆಹಲಿ, ಆಗಸ್ಟ್​ 22: ಬೀದಿ ನಾಯಿ(Stray Dog)ಗಳಿಗೆ  ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.  ದೆಹಲಿ ಹಾಗೂ ಎನ್​​ಸಿಆರ್​ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ ಎಂದು ಸುಪ್ರೀಂಕೋರ್ಟ್​​ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಕೆಲ ದಿನಗಳ ಹಿಂದೆ ನಿರ್ದೇಶಿಸಿತ್ತು.

ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸುವ ಅಥವಾ ರೇಬೀಸ್ ಸೋಂಕಿಗೆ ಒಳಗಾದ ನಾಯಿಗಳಿಗೆ ಮೊದಲು ಲಸಿಕೆ ಹಾಕಬೇಕು ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠ ಹೇಳಿದೆ.ದೆಹಲಿ-ಎನ್‌ಸಿಆರ್ ಪ್ರದೇಶವನ್ನು ಬೀದಿ ಬೀದಿಗಳಿಂದ ಹೊರಹಾಕಲು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು. 2024 ರಲ್ಲಿ ಕನಿಷ್ಠ 37 ಲಕ್ಷ ನಾಯಿ ಕಡಿತ ಮತ್ತು 54 ಶಂಕಿತ ರೇಬೀಸ್ ಸಾವುಗಳು ದಾಖಲಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳಿಗೆ ಆಹಾರ ನೀಡಬಾರದು. ಯಾವುದೇ ಉಲ್ಲಂಘನೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕೋರ್ಟ್ ಆದೇಶವನ್ನು ವಿರೋಧಿಸಿ ನಗರದಲ್ಲಿ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಹಾಗೂ ಶ್ವಾನ ಪ್ರಿಯರು ಶಾಂತಿಯುತ ಪ್ರತಿಭಟನೆ ನಡೆಸಿದ್ದರು.ಬೀದಿ ನಾಯಿಗಳು ನೆರೆಹೊರೆಯ ಭಾಗವಾಗಿದೆ. ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವ ಬದಲು, ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ಲಸಿಕೆ ನೀಡಿ. ಬೀದಿ ನಾಯಿಗಳನ್ನು ಬೀದಿಗಳಲ್ಲಿಯೇ ಬದುಕಲು ಬಿಡಿ ಎಂದು ಒತ್ತಾಯಿಸಿದ್ದರು.

ಇದೀಗ ಇಂದು ಸುಪ್ರೀಂಕೋರ್ಟ್​ ನೀಡಿರುವ ನಿರ್ದೇಶನದಲ್ಲಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಬಿಡದೆ, ಅವುಗಳಿಗೆ ಕೇವಲ ಲಸಿಕೆ ಹಾಗೂ ಸಂತಾನ ಹರಣ ಚಿಕಿತ್ಸೆ ಮಾಡಿಸಿ ಮತ್ತೆ ಅಲ್ಲಿಯೇ ತಂದು ಬಿಡಿ ಎಂದು ಹೇಳಿದೆ.

ಮತ್ತಷ್ಟು ಓದಿ: Video: ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ

ನ್ಯಾ.ಜೆಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು, ಆ.11ರಂದು ದೆಹಲಿ-ಎನ್‌ಸಿಆರ್ ಸುತ್ತಮುತ್ತಲಿನ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಈ ನಿರ್ದೇಶನಗಳಿಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಮಧ್ಯಂತರ ಅರ್ಜಿಯ ಆದೇಶವನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಕಾಯ್ದಿರಿಸಿತ್ತು.

ಬೀದಿ ನಾಯಿಗಳ ಸಂಪೂರ್ಣ ಸಮಸ್ಯೆಗೆ ಸ್ಥಳೀಯ ಅಧಿಕಾರಿಗಳ ನಿಷ್ಕ್ರಿಯತೆಯೇ ಕಾರಣ ಎಂದು ಹೇಳಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಬೀದಿ ನಾಯಿ ಕಡಿತವು ವಿಶೇಷವಾಗಿ ಮಕ್ಕಳಲ್ಲಿ ರೇಬೀಸ್‌ಗೆ ಕಾರಣವಾದ ಬಗ್ಗೆ ದಾಖಲಾದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ಜು.28 ರಂದು ಪ್ರಾರಂಭವಾಗಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿತ್ತು.

ಸುಪ್ರೀಂಕೋರ್ಟ್​ ಸೂಚಿಸಿರುವ ಪ್ರಮುಖ ಮಾರ್ಪಾಡುಗಳು ಸಂತಾನ ಹರಣ, ರೇಬಿಸ್ ಚುಚ್ಚುಮದ್ದು ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ, ರೇಬಿಸ್ ಲಸಿಕೆ ಹಾಕಿದ ನಂತರ ಅವುಗಳನ್ನು ಮತ್ತೆ ಅದೇ ಪ್ರದೇಶಕ್ಕೆ ಬಿಡಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸೋಂಕಿಗೆ ಒಳಗಾಗಿರುವ ನಾಯಿಗಳನ್ನು ಬಿಡುವಂತಿಲ್ಲ ರೇಬೀಸ್ ಸೋಂಕಿಗೆ ಒಳಗಾದ ಅಥವಾ ಆಕ್ರಮಣಕಾರಿ ನಡವಳಿಕೆಯನ್ನು ತೋರಿಸುವ ನಾಯಿಗಳನ್ನು ಬಿಡುಗಡೆ ಮಾಡಬಾರದು, ಅವುಗಳನ್ನು ಪ್ರತ್ಯೇಕವಾಗಿ ಇಡಲಾಗುವುದು ಎಂದು ಅದು ನಿರ್ದೇಶಿಸಿದೆ.

ಸಾರ್ವಜನಿಕವಾಗಿ ಊಟ ತಿಂಡಿ ನೀಡುವಂತಿಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ.

ಎಲ್ಲಿ ಆಹಾರ ಕೊಡಬಹುದು ಪ್ರತಿ ಪುರಸಭೆಯ ವಾರ್ಡ್‌ನಲ್ಲಿ ಬೀದಿ ಪ್ರಾಣಿಗಳಿಗೆ ಆಹಾರ ನೀಡುವ ಗೊತ್ತುಪಡಿಸಿದ ಪ್ರದೇಶಗಳನ್ನು ರಚಿಸುವಂತೆ ಅದು ಎಂಸಿಡಿಗೆ ನಿರ್ದೇಶನ ನೀಡಿತು.

ಎಂಸಿಡಿ ಮೂಲಕ ದತ್ತು ಸ್ವೀಕಾರಕ್ಕೆ ಅವಕಾಶ ಪ್ರಾಣಿ ಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲು ಎಂಸಿಡಿಗೆ ಅರ್ಜಿ ಸಲ್ಲಿಸಬಹುದು.

ರಾಷ್ಟ್ರವ್ಯಾಪಿ ನೀತಿ ರಾಷ್ಟ್ರೀಯ ಬೀದಿ ನಾಯಿ ನೀತಿಯ ಕುರಿತು ಸಲಹೆಗಳನ್ನು ಕೋರಿ ನ್ಯಾಯಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಶುಸಂಗೋಪನಾ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಿದೆ. ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಬೀದಿ ನಾಯಿ ಸಂಬಂಧಿತ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:57 am, Fri, 22 August 25