ವೈದ್ಯರ ಮೇಲೆ ಹಲ್ಲೆ ಎಸಗುವ ರಾಜಕಾರಣಿಗಳನ್ನು ಸುಮ್ಮನೆ ಬಿಡಬಾರದು, ಕಸ್ಟಡಿಗೆ ತೆಗೆದುಕೊಳ್ಳಬೇಕು: ಸುಪ್ರೀಂಕೋರ್ಟ್

ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ರಾಜಕಾರಣಿಗಳು ಹಲ್ಲೆ ಎಸಗುವ ಮತ್ತು ವಾಚಾಮಗೋಚರವಾಗಿ ನಿಂದಿಸುವ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಮಹಾರಾಷ್ಟ್ರದ ಪಾಲಗಡ್ ಜಿಲ್ಲೆಯಲ್ಲಿರುವ ರಿಲೀಫ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಶಿವಸೇನಾದ ರಾಜಕಾರಣಿಗಳು ಸಿಬ್ಬಂದಿ ಮೇಲೆ ಹಲ್ಲೆ ಎಸಗಿದ್ದರು. ಈ ಪ್ರಕರಣದ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್, ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವ ರಾಜಕಾರಣಿಗಳನ್ನು ಕಸ್ಟಡಿಗೆ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ವೈದ್ಯರ ಮೇಲೆ ಹಲ್ಲೆ ಎಸಗುವ ರಾಜಕಾರಣಿಗಳನ್ನು ಸುಮ್ಮನೆ ಬಿಡಬಾರದು, ಕಸ್ಟಡಿಗೆ ತೆಗೆದುಕೊಳ್ಳಬೇಕು: ಸುಪ್ರೀಂಕೋರ್ಟ್
ಸರ್ವೋಚ್ಚ ನ್ಯಾಯಾಲಯ
Image Credit source: PTI

Updated on: Sep 07, 2026 | 12:22 PM

ನವದೆಹಲಿ, ಸೆಪ್ಟೆಂಬರ್ 7: ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಮೇಲೆ ದೌರ್ಜನ್ಯ ಎಸಗುವ ಅಥವಾ ಹಲ್ಲೆ ನಡೆಸುವ ಜನಪ್ರತಿನಿಧಿಗಳು ಹಾಗೂ ರಾಜಕಾರಣಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾದವರನ್ನು ತಕ್ಷಣವೇ ವಶಕ್ಕೆ (Custody) ಪಡೆಯಬೇಕು ಮತ್ತು ಅವರು ಸಮಾಜದಲ್ಲಿ ಮುಕ್ತವಾಗಿ ಓಡಾಡಲು ಬಿಡಬಾರದು ಎಂದು ಪೀಠವು ಆಕ್ರೋಶ ವ್ಯಕ್ತಪಡಿಸಿದೆ.

ಮಹಾರಾಷ್ಟ್ರದಲ್ಲಿ ವೈದ್ಯರ ಮೇಲೆ ರಾಜಕಾರಣಿಗಳು ಹಲ್ಲೆ ನಡೆಸುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗಷ್ಟೇ ಪಾಲಗಡ್ ಜಿಲ್ಲೆಯಲ್ಲಿ (Palghar district) ದಹಿ ಹಂಡಿ ಉತ್ಸವದ ವೇಳೆ ಶಿವಸೇನಾ ಪಕ್ಷದ ಪುಡಾರಿಗಳು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ದೊಡ್ಡ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರ ಸುರಕ್ಷತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು (Supreme Court), ವೈದ್ಯಕೀಯ ಸಿಬ್ಬಂದಿಯ ರಕ್ಷಣೆ ಸರ್ಕಾರದ ಪ್ರಥಮ ಕರ್ತವ್ಯವಾಗಿದೆ ಎನ್ನುವ ಅಭಿಪ್ರಾಯವನ್ನು ಪುನರುಚ್ಚರಿಸಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 12 ಮಂದಿಯ ರಕ್ಷಣೆ

ಕಾನೂನಿನ ಮುಂದೆ ಎಲ್ಲರೂ ಸಮಾನರು: ಜನಪ್ರತಿನಿಧಿಗಳು ಅಥವಾ ರಾಜಕಾರಣಿಗಳಾಗಿದ್ದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಆಸ್ಪತ್ರೆಗಳಿಗೆ ನುಗ್ಗಿ ವೈದ್ಯರ ಮೇಲೆ ಹಲ್ಲೆ ನಡೆಸುವುದು ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ.

ಆರೋಪಿಗಳಿಗೆ ತಕ್ಷಣದ ಬಂಧನ: ಇಂತಹ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾದ ತಕ್ಷಣವೇ ಆರೋಪಿಗಳನ್ನು ವಶಕ್ಕೆ ಪಡೆದು ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು. ಅವರ ರಾಜಕೀಯ ಪ್ರಭಾವಕ್ಕೆ ಮಣಿದು ಪೊಲೀಸರು ಯಾವುದೇ ರಕ್ಷಣೆ ನೀಡಬಾರದು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಇದನ್ನೂ ಓದಿ: ‘ಇಸ್ರೋ ಪ್ರಾಮುಖ್ಯತೆ ತಗ್ಗಲ್ಲ, ಖಾಸಗೀಕರಣವೂ ಆಗಲ್ಲ’- ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಹೆಚ್ಚು ಗುರುತರ ಜವಾಬ್ದಾರಿ?

ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸುವುದು ಅತ್ಯಗತ್ಯ. ಹಿಂಸಾಚಾರ ನಡೆಸುವುದು ವೈದ್ಯಕೀಯ ವ್ಯವಸ್ಥೆಯ ಮೇಲೆ ಕಪ್ಪುಚುಕ್ಕೆಯಾಗಿದ್ದು, ಇಂತಹ ಘಟನೆಗಳನ್ನು ಕಠಿಣ ಹಸ್ತದಿಂದ ಹತೋಟಿಗೆ ತರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us