ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

| Updated By: ಸಾಧು ಶ್ರೀನಾಥ್​

Updated on: Oct 27, 2021 | 11:51 AM

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಇದರಿಂದ ಸುಪ್ರೀಂ ಕೋರ್ಟ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ:  ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ
ಸುಪ್ರೀಂ ಕೋರ್ಟ್
Follow us on

ನವದೆಹಲಿ: ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಇದರಿಂದ ಸುಪ್ರೀಂ ಕೋರ್ಟ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ. ಸ್ವತಂತ್ರ ಸದಸ್ಯರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದರಿಂದ ಸುಪ್ರೀಂ ಕೋರ್ಟ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ. ಸ್ವತಂತ್ರ ಸದಸ್ಯರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು. ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರಿ ಪರಿಣಾಮ ಬೀರುತ್ತೆ. ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗುತೂರಿಸುವಿಕೆಗೆ ಅವಕಾಶವಿಲ್ಲ. ಖಾಸಗಿತನದ ಹಕ್ಕು ಅನ್ನು ಅತಿಕ್ರಮಿಸುವ ಮೂಲಕ ಮಾಧ್ಯಮ ಸ್ವಾತಂತ್ರ್ಯವನ್ನು ಕಡೆಗಣಿಸಲಾಗಲ್ಲ. ಖಾಸಗಿತನದ ಹಕ್ಕಿನಲ್ಲಿ ಮೂಗು ತೂರಿಸಲು ಮಸೂದೆ ಪಾಸ್ ಆಗಬೇಕು. ಸಾಂವಿಧಾನಿಕ ಅಗತ್ಯದ ಪರೀಕ್ಷೆ ಪಾಸ್ ಆಗಬೇಕು ಎಂದು ಸುಪ್ರೀಂಕೋರ್ಟ್​ ಸಿಜೆ ನೇತೃತ್ವದ ಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದೆ.

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್​ ಈ ಪ್ರಕರಣ ಆಧುನಿಕ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದೆ. ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ‘ಸುಪ್ರೀಂ’ ಪರಿಶೀಲಿಸಿದೆ. ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ನಮ್ಮ ಶ್ರಮ ಎಂದು ಸಿಜೆಐ ರಮಣ ಆದೇಶಿಸಿದ್ದಾರೆ.

ಇದನ್ನೂ ಓದಿ:
Pegasus row ಪೆಗಾಸಸ್ ವಿವಾದ ಬಗ್ಗೆ ವಿವರವಾದ ಅಫಿಡವಿಟ್ ಸಲ್ಲಿಸುವುದಿಲ್ಲ: ಸುಪ್ರೀಂಕೋರ್ಟ್​​ನಲ್ಲಿ ಕೇಂದ್ರ ಹೇಳಿಕೆ

ಹುಲಿ ಈಜಿ ದಡ ಸೇರುತ್ತಿರುವ ವಿಡಿಯೋ ಹೇಗಿದೆ ಗೊತ್ತಾ? | Tiger |Tv9Kannada|

(supreme Court appointed expert committee to look into Pegasus snooping controversy)

Published On - 11:13 am, Wed, 27 October 21