ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ

ಕಳೆದ ಏಳೆಂಟು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿರುವ ಅವರಿಗೆ ವಿಶ್ರಾಂತಿ ಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ವಿರಾಮ ನೀಡಲು ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್
Follow us
TV9 Web
| Updated By: ganapathi bhat

Updated on:Apr 07, 2022 | 10:41 AM

ದೆಹಲಿ: ಕೊವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ವಿರಾಮವಿಲ್ಲದೆ ಶ್ರಮಿಸುತ್ತಿರುವ ವೈದ್ಯರಿಗೆ ವಿಶ್ರಾಂತಿ ಪಡೆದುಕೊಳ್ಳಲು ವ್ಯವಸ್ಥೆ ಮಾಡಿಕೊಡಿ ಎಂದು ಸುಪ್ರೀಂಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಆಸ್ಪತ್ರೆಗಳಲ್ಲಿ ಸತತವಾಗಿ ಕೆಲಸ ಮಾಡುವುದು ವೈದ್ಯರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಕಳೆದ ಏಳೆಂಟು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿರುವ ಅವರಿಗೆ ವಿಶ್ರಾಂತಿ ಬೇಕು ಎಂದು ನ್ಯಾಯಾಲಯ ತಿಳಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಎಸ್. ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ನ್ಯಾಯಪೀಠವು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಮ್ಮ ಸೂಚನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿತು. ನ್ಯಾಯಾಲಯದ ಸೂಚನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ತುಷಾರ್ ಮೆಹ್ತಾ ಪ್ರತಿಕ್ರಿಯಿಸಿದರು.

ಕೊವಿಡ್​ಗೆ ಸೂಕ್ತ ಚಿಕಿತ್ಸೆ ಮತ್ತು ಕೊರೊನಾದಿಂದ ಮರಣ ಹೊಂದಿದ ಶವಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ನ್ಯಾಯಪೀಠವು ಸ್ವಯಂ ಪ್ರೇರಿತವಾಗಿ ವಿಚಾರಣೆ ಆರಂಭಿಸಿದೆ.

ಈ ಸಂಬಂಧ ಗುಜರಾತ್ ನಡೆ ಬಗ್ಗೆ ಆಶ್ಚರ್ಯ ಸೂಚಿಸಿದೆ. ರಾಜ್ಯದಲ್ಲಿ ಮಾಸ್ಕ್ ಧರಿಸದೇ ಇರುವುದಕ್ಕೆ ₹ 90 ಕೋಟಿ ದಂಡ ವಿಧಿಸಿರುವ ಗುಜರಾತ್ ಸರ್ಕಾರ, ಕೊವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಆರೋಗ್ಯ ಮತ್ತು ಸುರಕ್ಷೆ ಖಾತ್ರಿಪಡಿಸಲು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಗುಜರಾತ್ ಸರ್ಕಾರಕ್ಕೆ ತಪರಾಕಿ ನೀಡಿತು.

ಕರ್ತವ್ಯ ಒತ್ತಡದಿಂದ ವೈದ್ಯ ಸಾವು ಆರೋಪ: ಸೂಕ್ತ ಪರಿಹಾರಕ್ಕೆ ವೈದ್ಯಾಧಿಕಾರಿಗಳ ಆಗ್ರಹ

Published On - 4:21 pm, Tue, 15 December 20

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ