AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಕೋವಿಡ್-19 ನಿಯಮ ಪಾಲನೆ, ಆಸ್ಪತ್ರೆಗಳ ಸುರಕ್ಷೆ ಬಗ್ಗೆ ವರದಿ ಕೇಳಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್​
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 09, 2020 | 2:58 PM

Share

ದೆಹಲಿ: ಮಾಸ್ಕ್ ಧರಿಸುವುದೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ರೂಪಿಸಿರುವ ನಿಯಮಗಳ ಅನುಷ್ಠಾನ, ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷಾ ನಿಯಮಗಳ ಪಾಲನೆ ಬಗ್ಗೆ ಮಾಹಿತಿ ನೀಡಬೇಕೆಂದು ಸುಪ್ರೀಂಕೋರ್ಟ್​ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿದೆ ಮತ್ತು ಕೊರೊನಾ ಸೋಂಕಿನಿಂದ ಮೃತರಾದವರ ದೇಹವನ್ನು ಗೌರವದಿಂದ ಕಾಣುವುದನ್ನು ಖಾತ್ರಿಪಡಿಸುವ ಬಗ್ಗೆ ಸುಪ್ರೀಂಕೋರ್ಟ್​ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿತು.

ಗುಜರಾತ್​ನ ರಾಜ್​ಕೋಟ್​ ಪಟ್ಟಣದ ಕೋವಿಡ್-19 ಆಸ್ಪತ್ರೆಯಲ್ಲಿ ಈಚೆಗೆ ಸಂಭವಿಸಿದ್ದ ಅಗ್ನಿ ದುರಂತದಿಂದ ಕೆಲ ರೋಗಿಗಳು ಮೃತಪಟ್ಟಿದ್ದರು. ದೇಶದ ವಿವಿಧೆಡೆ ಸ್ಥಾಪಿಸಿರುವ ಕೋವಿಡ್-19 ಆಸ್ಪತ್ರೆಗಳಲ್ಲಿ ಅಗ್ನಿಸುರಕ್ಷಾ ನಿಯಮಗಳಿಗೆ ಸಂಬಂಧಿಸಿದ ಚರ್ಚೆಯನ್ನು ಇದು ಹುಟ್ಟುಹಾಕಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮತ್ತು ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ದಿನಗಳ ಒಳಗೆ ವಿಸ್ತೃತ ಪ್ರಮಾಣಪತ್ರ ಸಲ್ಲಿಸುವಂತೆ ನ್ಯಾಯಮೂರ್ತಿ ಅಶೋಕ್​ ಭೂಷಣ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿತು. ನ್ಯಾಯಮೂರ್ತಿ ಆರ್​.ಎಸ್.ರೆಡ್ಡಿ ಮತ್ತು ಎಂ.ಆರ್.ಶಾ ಈ ನ್ಯಾಯಪೀಠದಲ್ಲಿರುವ ಇತರ ನ್ಯಾಯಾಧೀಶರು.

ಈ ಕುರಿತು ಉಳಿದೆಲ್ಲಾ ರಾಜ್ಯಗಳು ಶುಕ್ರವಾರದ ಒಳಗೆ ಸುಪ್ರೀಂಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠವು, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿತು.

ರಾಜ್​ಕೋಟ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವಿಚಾರಣೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಡಿ.ಎ.ಮೆಹ್ತಾ ಸಮಿತಿಯು ಅಹಮದಾಬಾದ್​ ಬೆಂಕಿ ದುರಂತದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನ್ಯಾಯಪೀಠವು ನಿರ್ದೇಶನ ನೀಡಿತು.

ಕೋವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಐವರು ಕೊರೊನಾ ಸೋಂಕಿತರು ಬಲಿ..

Published On - 2:56 pm, Wed, 9 December 20

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ