ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ. ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ […]

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್
ಸುಪ್ರೀಂ​ ಕೋರ್ಟ್
Follow us
guruganesh bhat
|

Updated on: May 24, 2021 | 7:42 PM

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.

ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಾಮರ್ಶಿಸಿದ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ. ವಿಕೋಪ ನಿರ್ವಹಣಾ ನೀತಿ 2005ರ ಅನುಸಾರ ಕೊವಿಡ್​ನಿಂದ ವ್ಯಕ್ತಿ ನಿಧನರಾದಲ್ಲಿ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡಬೇಕು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ಕೊವಿಡ್​ನಿಂದ ಮೃತಪಟ್ಟ ವ್ಯಕ್ತಿಯ ಮರಣ ಪ್ರಮಾಣ ಪತ್ರದಲ್ಲಿ ಏಕರೂಪತೆ ತರದಿದ್ದಲ್ಲಿ ಪರಿಹಾರ ನೀಡಿದರೂ ಫಲಾನುಭವಿಗಳಿಗೆ ದೊರೆಯುವ ಸಾಧ್ಯತೆ ಕಡಿಮೆಯಾಗಲಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಈ ಎರಡೂ ವಿಷಯಗಳ ಕುರಿತು ತ್ವರಿತವಾಗಿ ತನ್ನ ನಿಲುವನ್ನು ತಿಳಿಸಲು ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಕೊವಿಡ್ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

(Supreme Court asks central govt to give compensation of 4 lakh to covid death familly)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್