ಭಯೋತ್ಪಾದಕ ಸಂಘಟನೆ ಸಿಮಿ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ

ಭಯೋತ್ಪಾದಕ ಸಂಘಟನೆ ಸಿಮಿ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 31, 2022 | 2:31 PM

ಭಯೋತ್ಪಾದಕ ಸಂಘಟನೆಯಾದ ಸ್ಟೂಡೆಂಟ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಪ್ರತಿ ಅಫಿಡವಿಟ್ ಸಲ್ಲಿಸಲು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಕೇಂದ್ರಕ್ಕೆ ಕೊನೆಯ ಅವಕಾಶವನ್ನು ನೀಡಿದೆ. ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ಪೀಠವು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ನ್ಯಾಯಾಲಯವು ಮುಂದಿನ ನವೆಂಬರ್ 1 ರಂದು ಪ್ರಕರಣದ ವಿಚಾರಣೆ ನಡೆಸಲಿದೆ. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ. 2001ರಲ್ಲಿ ಮೊದಲ ಬಾರಿಗೆ ಸಿಮಿ ಮೇಲೆ ನಿಷೇಧ ಹೇರಲಾಗಿದ್ದು, 2019ರಲ್ಲಿ ನವೀಕರಣಗೊಂಡಿರುವ ಕೊನೆಯ ನಿಷೇಧ 2024ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದರು.

ನಿಷೇಧವನ್ನು ವಿಸ್ತರಿಸಿದಾಗ ಅದು ಸರಳವಾದ ವಿಸ್ತರಣೆಯಲ್ಲ ಎಂದು ಪೀಠ ಹೇಳಿದೆ. ನ್ಯಾಯಮಂಡಳಿಯು ನಿಷೇಧವನ್ನು ಆದೇಶಿಸಿದಾಗ ಮತ್ತು ಎತ್ತಿಹಿಡಿಯುವಾಗ ಇದ್ದ ಅಂಶಗಳು ಮತ್ತು ವಸ್ತುಗಳು ಇನ್ನೂ ಅಸ್ತಿತ್ವದಲ್ಲಿವೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಬೇಕಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಕರಣದಲ್ಲಿ ಪ್ರತಿ ಅಫಿಡವಿಟ್ ಅನ್ನು ಸಲ್ಲಿಸಲು ಕೋರಿದರು. ಆದ್ದರಿಂದ ಪೀಠವು, ‘ಸಾಲಿಸಿಟರ್ ಜನರಲ್ ಅವರು ಪ್ರತಿ ಅಫಿಡವಿಟ್ ಸಲ್ಲಿಸಲು ಕೊನೆಯ ಅವಕಾಶವನ್ನು ಕೋರಿದ್ದಾರೆ. ಅದನ್ನು ನಾಲ್ಕು ವಾರಗಳಲ್ಲಿ ಸಲ್ಲಿಸಬೇಕು. ಯಾವುದೇ ರಿಜೋಯಿಂಡರ್  ಅಫಿಡವಿಟ್ ಸಲ್ಲಿಸಿದರೆ, ಅದನ್ನು ಎರಡು ವಾರಗಳಲ್ಲಿ ಸಲ್ಲಿಸಲಾಗುವುದು. ಕಕ್ಷಿದಾರರು ಸಂಕ್ಷಿಪ್ತ ಸಾರಾಂಶವನ್ನು ಸಲ್ಲಿಸಬೇಕಾಗಿದೆ ಮತ್ತು ಈ ವಿಷಯವನ್ನು ನವೆಂಬರ್ 1 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.

ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಮೇಲಿನ ನಿಷೇಧವನ್ನು 2019 ರಲ್ಲಿ ಕೇಂದ್ರವು ಇನ್ನೂ 5 ವರ್ಷಗಳ ಕಾಲ ವಿಸ್ತರಿಸಿತ್ತು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ ಸಿಮಿಯನ್ನು ನಿಷೇಧಿಸುವ ಅಧಿಸೂಚನೆಯನ್ನು ಕೇಂದ್ರವು ಅಂಗೀಕರಿಸಿದೆ. ಕೇಂದ್ರ ಸರ್ಕಾರವು ಸಿಮಿಯನ್ನು ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಿದ್ದು, ಅಧಿಸೂಚನೆಯು ಐದು ವರ್ಷಗಳ ಅವಧಿಗೆ ಜಾರಿಯಲ್ಲಿರುತ್ತದೆ.

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ