ದೀಪಾವಳಿಗೆ ಪಟಾಕಿ ನಿಷೇಧವೇಕೆ ಜಾರಿಯಾಗಲಿಲ್ಲ?; ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ದೆಹಲಿಯಲ್ಲಿ ಅತಿಯಾದ ವಾಯುಮಾಲಿನ್ಯ ಉಂಟಾಗಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧ ಏಕೆ ಜಾರಿಯಾಗಲಿಲ್ಲ? ಎಂದು ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿ, ನೋಟಿಸ್ ಜಾರಿ ಮಾಡಿದೆ. 1 ವಾರದೊಳಗೆ ಸಂಪೂರ್ಣ ಪಟಾಕಿ ನಿಷೇಧವನ್ನು ಜಾರಿ ಮಾಡಲು ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ದೀಪಾವಳಿಗೆ ಪಟಾಕಿ ನಿಷೇಧವೇಕೆ ಜಾರಿಯಾಗಲಿಲ್ಲ?; ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಪಟಾಕಿ
Follow us
ಸುಷ್ಮಾ ಚಕ್ರೆ
|

Updated on: Nov 04, 2024 | 4:40 PM

ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲು ಕೈಗೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಸರ್ಕಾರ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿರುವ ದೆಹಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಪಟಾಕಿ ನಿಷೇಧಕ್ಕೆ ದೆಹಲಿ ಸರ್ಕಾರ ಮತ್ತು ಪೊಲೀಸರು ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಓಕಾ ನೇತೃತ್ವದ ಉನ್ನತ ನ್ಯಾಯಾಲಯದ ಪೀಠವು ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸರಿಯಾಗಿ ಜಾರಿಗೊಳಿಸಲಾಗಿಲ್ಲ. ಪಟಾಕಿಗಳನ್ನು ನಿಷೇಧಿಸುವ ಆದೇಶವೇನಾಗಿದೆ? ಮತ್ತು ಅದನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತಿದೆ? ಎಂದು ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ: Viral Video: ದೀಪಾವಳಿಗೆ ಪಟಾಕಿ ಬದಲು ರಾಶಿ ರಾಶಿ ನೋಟು ಸುಟ್ಟು ಹಾಕಿದ ವ್ಯಕ್ತಿ

ದೀಪಾವಳಿಯ ನಂತರ ಮಾಲಿನ್ಯ ಹೆಚ್ಚಳದ ಬಗ್ಗೆ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ಹೊರಹಾಕಿದೆ.

ಪಟಾಕಿ ನಿಷೇಧ ಜಾರಿಯಾಗದಿರುವುದನ್ನು ಕೋರ್ಟ್ ಗಮನಿಸಿದೆ. “ಪಟಾಕಿಗಳ ನಿಷೇಧವನ್ನು (ದೆಹಲಿ ಎನ್‌ಸಿಆರ್‌ನಲ್ಲಿ) ಜಾರಿಗೆ ತರಲಾಗಿಲ್ಲ ಎಂದು ವ್ಯಾಪಕವಾದ ಸುದ್ದಿ ವರದಿಗಳಿವೆ. ಇದು ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಮುಖ ಕ್ರಮವಾಗಬೇಕಿತ್ತು” ಎಂದು ಸರ್ವೋಚ್ಛ ನ್ಯಾಯಾಲಯದ ಪೀಠ ಹೇಳಿದೆ.

ಈ ವರ್ಷ ನಿಷೇಧವನ್ನು ಜಾರಿಗೆ ತರಲು ತೆಗೆದುಕೊಂಡ ಕ್ರಮಗಳು ಮತ್ತು ಮುಂದಿನ ವರ್ಷ ನಿಷೇಧವನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಪ್ರಸ್ತಾಪಿಸಿದ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಎಪಿ ಸರ್ಕಾರ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

ಇದನ್ನೂ ಓದಿ: ಪಟಾಕಿ ಸಿಡಿಸುವುದರಲ್ಲಿ ಹುಡುಗಾಟ: ದೀಪಾವಳಿ ದಿನವೇ ಹಾರಿ ಹೋಯ್ತು ಯುವಕನ ಪ್ರಾಣಪಕ್ಷಿ

ಕಳೆದ 3 ವರ್ಷಗಳಲ್ಲಿ ದೆಹಲಿಯು ಈ ಬಾರಿ ಅತ್ಯಂತ ಕಲುಷಿತ ದೀಪಾವಳಿಯನ್ನು ದಾಖಲಿಸಿದೆ. ಗುರುವಾರದಂದು ದೀಪಾವಳಿಯಂದು ದೆಹಲಿ ನಗರದ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) 330ನಲ್ಲಿ ದಾಖಲಾಗಿದೆ. ಇದು 2023ರಲ್ಲಿ 218 ಮತ್ತು 2022ರಲ್ಲಿ 312 ಇತ್ತು.

ಪಟಾಕಿ ನಿಷೇಧಿಸಲು ದೆಹಲಿ ಸರ್ಕಾರ ಮಾಡಿದ್ದೇನು?:

ದೀಪಾವಳಿಯ ಸಮಯದಲ್ಲಿ ಮತ್ತು ನಂತರದ ಮಾಲಿನ್ಯದ ಉಲ್ಬಣವನ್ನು ಎದುರಿಸುವ ಪ್ರಯತ್ನದಲ್ಲಿ ದೆಹಲಿ ಸರ್ಕಾರವು ಸತತ 5ನೇ ವರ್ಷಕ್ಕೆ ಪಟಾಕಿಗಳ ಮೇಲೆ ನಿಷೇಧವನ್ನು ಜಾರಿಗೊಳಿಸಿತು. ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿತು. ನೆರೆಹೊರೆಗಳ ಮೇಲೆ ನಿಗಾ ಇಡಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!