ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲು ಕೈಗೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಸರ್ಕಾರ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿರುವ ದೆಹಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಪಟಾಕಿ ನಿಷೇಧಕ್ಕೆ ದೆಹಲಿ ಸರ್ಕಾರ ಮತ್ತು ಪೊಲೀಸರು ಪ್ರತಿಕ್ರಿಯೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಒತ್ತಾಯಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಓಕಾ ನೇತೃತ್ವದ ಉನ್ನತ ನ್ಯಾಯಾಲಯದ ಪೀಠವು ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸರಿಯಾಗಿ ಜಾರಿಗೊಳಿಸಲಾಗಿಲ್ಲ. ಪಟಾಕಿಗಳನ್ನು ನಿಷೇಧಿಸುವ ಆದೇಶವೇನಾಗಿದೆ? ಮತ್ತು ಅದನ್ನು ಹೇಗೆ ಕಾರ್ಯಗತಗೊಳಿಸಲಾಗುತ್ತಿದೆ? ಎಂದು ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ಸೂಚಿಸಿದೆ.
ಇದನ್ನೂ ಓದಿ: Viral Video: ದೀಪಾವಳಿಗೆ ಪಟಾಕಿ ಬದಲು ರಾಶಿ ರಾಶಿ ನೋಟು ಸುಟ್ಟು ಹಾಕಿದ ವ್ಯಕ್ತಿ
ದೀಪಾವಳಿಯ ನಂತರ ಮಾಲಿನ್ಯ ಹೆಚ್ಚಳದ ಬಗ್ಗೆ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ಹೊರಹಾಕಿದೆ.
ಪಟಾಕಿ ನಿಷೇಧ ಜಾರಿಯಾಗದಿರುವುದನ್ನು ಕೋರ್ಟ್ ಗಮನಿಸಿದೆ. “ಪಟಾಕಿಗಳ ನಿಷೇಧವನ್ನು (ದೆಹಲಿ ಎನ್‌ಸಿಆರ್‌ನಲ್ಲಿ) ಜಾರಿಗೆ ತರಲಾಗಿಲ್ಲ ಎಂದು ವ್ಯಾಪಕವಾದ ಸುದ್ದಿ ವರದಿಗಳಿವೆ. ಇದು ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಮುಖ ಕ್ರಮವಾಗಬೇಕಿತ್ತು” ಎಂದು ಸರ್ವೋಚ್ಛ ನ್ಯಾಯಾಲಯದ ಪೀಠ ಹೇಳಿದೆ.
Air pollution: Supreme Court observes that there are widespread reports in newspapers that ban on firecrackers was not implemented.
Supreme Court says it wants Delhi government to immediately respond as to why fire-cracker ban was hardly implemented. pic.twitter.com/bhrYs81JKM
— ANI (@ANI) November 4, 2024
ಈ ವರ್ಷ ನಿಷೇಧವನ್ನು ಜಾರಿಗೆ ತರಲು ತೆಗೆದುಕೊಂಡ ಕ್ರಮಗಳು ಮತ್ತು ಮುಂದಿನ ವರ್ಷ ನಿಷೇಧವನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಪ್ರಸ್ತಾಪಿಸಿದ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಎಪಿ ಸರ್ಕಾರ ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.
ಇದನ್ನೂ ಓದಿ: ಪಟಾಕಿ ಸಿಡಿಸುವುದರಲ್ಲಿ ಹುಡುಗಾಟ: ದೀಪಾವಳಿ ದಿನವೇ ಹಾರಿ ಹೋಯ್ತು ಯುವಕನ ಪ್ರಾಣಪಕ್ಷಿ
ಕಳೆದ 3 ವರ್ಷಗಳಲ್ಲಿ ದೆಹಲಿಯು ಈ ಬಾರಿ ಅತ್ಯಂತ ಕಲುಷಿತ ದೀಪಾವಳಿಯನ್ನು ದಾಖಲಿಸಿದೆ. ಗುರುವಾರದಂದು ದೀಪಾವಳಿಯಂದು ದೆಹಲಿ ನಗರದ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) 330ನಲ್ಲಿ ದಾಖಲಾಗಿದೆ. ಇದು 2023ರಲ್ಲಿ 218 ಮತ್ತು 2022ರಲ್ಲಿ 312 ಇತ್ತು.
ಪಟಾಕಿ ನಿಷೇಧಿಸಲು ದೆಹಲಿ ಸರ್ಕಾರ ಮಾಡಿದ್ದೇನು?:
ದೀಪಾವಳಿಯ ಸಮಯದಲ್ಲಿ ಮತ್ತು ನಂತರದ ಮಾಲಿನ್ಯದ ಉಲ್ಬಣವನ್ನು ಎದುರಿಸುವ ಪ್ರಯತ್ನದಲ್ಲಿ ದೆಹಲಿ ಸರ್ಕಾರವು ಸತತ 5ನೇ ವರ್ಷಕ್ಕೆ ಪಟಾಕಿಗಳ ಮೇಲೆ ನಿಷೇಧವನ್ನು ಜಾರಿಗೊಳಿಸಿತು. ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿತು. ನೆರೆಹೊರೆಗಳ ಮೇಲೆ ನಿಗಾ ಇಡಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ