AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪ್ರತಿಭಟನೆ ವೇಳೆ ಪೋಲಿಸ್ ದೌರ್ಜನ್ಯದ ಆರೋಪ; ವಿಚಾರಣಾ ಸಮಿತಿಗೆ 1 ತಿಂಗಳೊಳಗೆ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈನಲ್ಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಸಂಭವಿಸಿದ ಹಿಂಸಾಚಾರ ಮತ್ತು ಪೋಲಿಸ್ ಅತಿಯಾದ ಬಲಪ್ರಯೋಗದ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ವಿಚಾರಣಾ ಸಮಿತಿ ತನ್ನ ಮೊದಲ ಸತ್ಯಶೋಧನಾ ವರದಿಯನ್ನು 1 ತಿಂಗಳ ಒಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಈ ವಿಚಾರಣೆ ನಡೆಸಿತು. ಸಂತ್ರಸ್ತರ ಪರವಾಗಿ ಅರ್ಜಿದಾರರು ಸಲ್ಲಿಸಿರುವ ವಿಡಿಯೋಗಳು ಮತ್ತು ದಾಖಲೆಗಳನ್ನು ಸಮಿತಿಯು ಪರಿಶೀಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ದೆಹಲಿ ಪ್ರತಿಭಟನೆ ವೇಳೆ ಪೋಲಿಸ್ ದೌರ್ಜನ್ಯದ ಆರೋಪ; ವಿಚಾರಣಾ ಸಮಿತಿಗೆ 1 ತಿಂಗಳೊಳಗೆ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಆದೇಶ
ಸುಪ್ರೀಂ ಕೋರ್ಟ್
ಸುಷ್ಮಾ ಚಕ್ರೆ
|

Updated on: Nov 05, 2026 | 7:20 PM

Share

ನವದೆಹಲಿ, ನವೆಂಬರ್ 5: ನವದೆಹಲಿ, ನವೆಂಬರ್ 5: ದೆಹಲಿಯ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ದೌರ್ಜನ್ಯದ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ತನ್ನ ಮೊದಲ ವರದಿಯನ್ನು ಒಂದು ತಿಂಗಳ ಒಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಈ ವಿಚಾರಣೆ ನಡೆಸಿದ್ದು, ಸಮಿತಿಯು ಹೊಸ ದೂರುಗಳಿಗಾಗಿ ಅನಿರ್ದಿಷ್ಟಾವಧಿಯವರೆಗೆ ಕಾಯದೆ ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌. ಸುಭಾಷ್ ರೆಡ್ಡಿ ನೇತೃತ್ವದಲ್ಲಿ ಆಗಸ್ಟ್ 18ರಂದು ರಚನೆಯಾದ 5 ಸದಸ್ಯರ ಉನ್ನತ ಮಟ್ಟದ ಸಮಿತಿಯು, ಪ್ರತಿಭಟನಾಕಾರರ ವಿರುದ್ಧ ಪೋಲಿಸರು ನಡೆಸಿದರೆನ್ನಲಾದ ದೌರ್ಜನ್ಯ ಹಾಗೂ ಭದ್ರತಾ ಸಿಬ್ಬಂದಿಯ ಮೇಲಿನ ಹಿಂಸಾಚಾರದ ಕುರಿತು ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆ ಕಾಯ್ದೆ ಮರುಪರಿಶೀಲನೆ; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

ಪೆಲೆಟ್ ಗನ್‌ಗಳ ಬಳಕೆ, ಮಹಿಳಾ ಪ್ರತಿಭಟನಾಕಾರರ ಮೇಲಿನ ದಾಳಿ, ಕಿರುಕುಳ ಹಾಗೂ ಎರಡೂ ಕಡೆಗಳಿಂದ ನಡೆದ ಭಾರಿ ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟದ ಕುರಿತು ಸಮಿತಿಯು ಮೊದಲ ಹಂತದಲ್ಲಿ ಆದ್ಯತೆಯ ಮೇಲೆ ಪರಿಶೀಲಿಸಿ ಒಂದು ತಿಂಗಳೊಳಗೆ ಮಧ್ಯಂತರ ವರದಿ ಸಲ್ಲಿಸಬೇಕಾಗಿದೆ.

ಅರ್ಜಿದಾರರು ತಮ್ಮ ಬಳಿ ಇರುವ ತನಿಖೆಗೆ ಪೂರಕವಾದ ಮೆಮೊರಾಂಡಮ್‌ಗಳು, ವೀಡಿಯೊ ಸಾಕ್ಷ್ಯಾಧಾರಗಳು ಮತ್ತು ತಂತ್ರಾಂಶ ದಾಖಲೆಗಳನ್ನು ಸಮಿತಿಗೆ ನೇರವಾಗಿ ಇ-ಮೇಲ್ ಅಥವಾ ಡಿಜಿಟಲ್ ರೂಪದಲ್ಲಿ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ. ಅಲ್ಲದೆ ಸಂತ್ರಸ್ತರು ಅಥವಾ ಅವರ ಪರ ವಕೀಲರು ಪ್ರಮಾಣಪತ್ರಗಳೊಂದಿಗೆ ಮುಖತಃ ಹಾಜರಾಗಲು ಕೋರಿದೆ. ಮುಂದಿನ ಹಂತದ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 2ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ: ‘ಸರ್ಕಾರಿ ಉದ್ಯೋಗಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡರೆ ಸರಿಯಾಗಿ ಕೆಲಸ ಮಾಡುತ್ತಾರೆ’; ಸುಪ್ರೀಂ ಕೋರ್ಟ್ ಸಲಹೆ!

ನೀಟ್ ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಸಿಜೆಪಿ ನೇತೃತ್ವದಲ್ಲಿ ಜೂನ್‌ನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿತ್ತು. ಜುಲೈ 20ರಂದು ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಪೊಲೀಸರು ಹಾಗೂ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾಠಿಚಾರ್ಜ್, ಅಶ್ರುವಾಯು ಮತ್ತು ಪೆಲೆಟ್ ಗನ್‌ಗಳನ್ನು ಬಳಸಿದ್ದರು.

ಪರಿಸ್ಥಿತಿ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ:

ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಪ್ರತಿಭಟನೆಗೆ ಬೆಂಬಲ ಸೂಚಿಸಿ 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಜುಲೈ 23ರಂದು ಅಂತ್ಯಗೊಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು