ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಎರಡು ಬೆರಳಿನ ಪರೀಕ್ಷೆ (Two Finger Test) ಮಾಡದಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ. ಇದು ಅವೈಜ್ಞಾನಿಕ ಕ್ರಮ ಎಂದು ಹೇಳಿದೆ. ಈ ರೀತಿಯ ಪರೀಕ್ಷೆಯಿಂದ ತಪ್ಪಿತಸ್ಥರೆಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಬಗ್ಗೆ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ. ಎರಡು ಬೆರಳಿನ ಪರೀಕ್ಷೆ ಇಂದಿಗೂ ನಡೆಯುತ್ತಿರವುದು ವಿಷಾದನೀಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಅತ್ಯಾಚಾರ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಈ ಕ್ರಮವನ್ನು ನಿರಕಾರಿಸಿದೆ.
ಅತ್ಯಾಚಾರದಿಂದ ಬದುಕುಳಿದವರನ್ನು ಪರೀಕ್ಷಿಸುವ ಅವೈಜ್ಞಾನಿಕ ವಿಧಾನವು ಅತ್ಯಾಚಾರಗೊಂಡ ಮಹಿಳೆಯನ್ನು ಮರು-ಆಘಾತಗೊಳಿಸುತ್ತದೆ ಎಂದು ಹೇಳಿದೆ. 2013ರಲ್ಲಿ ಸುಪ್ರೀಂ ಕೋರ್ಟ್ ಈ ಅಭ್ಯಾಸವನ್ನು ಅಸಾಂವಿಧಾನಿಕ ಎಂದು ಪರಿಗಣಿಸಿತ್ತು ಮತ್ತು ಪರೀಕ್ಷೆಯನ್ನು ನಡೆಸಬಾರದು ಎಂದು ಹೇಳಿತ್ತು.
ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿರುವ ಪ್ರಕಾರ ಕೇವಲ ಲೈಂಗಿಕವಾಗಿ ಸಕ್ರಿಯವಾಗಿರುವ ಕಾರಣ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಮಹಿಳೆ ಹೇಳಿದಾಗ ಅದನ್ನು ನಂಬಲು ಸಾಧ್ಯವಿಲ್ಲ ಎಂದು ಸೂಚಿಸುವುದು ಪಿತೃಪ್ರಭುತ್ವ ಮತ್ತು ಲೈಂಗಿಕತೆಯಾಗಿದೆ ಎಂದು ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದಲ್ಲಿ ಬದುಕುಳಿದವರನ್ನು ಎರಡು ಬೆರಳಿನ ಪರೀಕ್ಷೆ ಒಳಪಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವಂತೆ ಪೀಠ ಕೇಂದ್ರ ಆರೋಗ್ಯ ಸಚಿವಾಲಯಗಳಿಗೆ ನಿರ್ದೇಶನ ನೀಡಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಆರೋಗ್ಯ ಇಲಾಖೆಗಳಿಗೆ ಎರಡು ಬೆರಳಿನ ಪರೀಕ್ಷೆ ನಡೆಸದಂತೆ ಕೇಂದ್ರ ಸರ್ಕಾರ ಸೂಚನೆ ನೀಡಬೇಕು ಎಂದು ಸುಪ್ರೀಂ ನಿರ್ದೇಶನ ನೀಡಿದ್ದಾರೆ.
Published On - 12:08 pm, Mon, 31 October 22