Gyanvapi Mosque Case: ಜ್ಞಾನವಾಪಿ ಮಸೀದಿಯಲ್ಲಿ ‘ಶಿವಲಿಂಗ’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ.

Gyanvapi Mosque Case: ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ವೈಜ್ಞಾನಿಕ ಸಮೀಕ್ಷೆಗೆ ಅನುಮತಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 19, 2023 | 4:51 PM

ದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ‘ಶಿವಲಿಂಗ’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಕಳೆದ ವರ್ಷ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಕಂಡುಬಂದಿರುವ ಶಿವಲಿಂಗದ ಕುರಿತು ವೈಜ್ಞಾನಿಕ ಸಮೀಕ್ಷೆಯನ್ನು ಮಾಡದಂತೆ ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ನಾವು ಈ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Gyanvapi Mosque case: ಏ.14ಕ್ಕೆ ಜ್ಞಾನವಾಪಿ ಮಸೀದಿ ವಿಚಾರಣೆ, ಮಸೀದಿ ಆವರಣದೊಳಗೆ ಶುಚಿಗೊಳಿಸಲು ಅವಕಾಶ

ಶಿವಲಿಂಗದ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸುವ ಬಗ್ಗೆ ಮೇ 12 ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಈ ಬಗ್ಗೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಆದೇಶದ ಪರಿಣಾಮಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಅವಕಾಶ ಮಾಡಬೇಕು, ಈಗಾಗಲೇ ಹೈಕೋರ್ಟ್​​ ನೀಡಲಾಗಿರುವ ಆದೇಶವನ್ನು ತಡೆಹಿಡಿದು, ಮುಂದಿನ ತಿಂಗಳು ಈ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ಮತ್ತು ಕಾರ್ಬನ್ ಡೇಟಿಂಗ್‌ಗೆ ಹೈಕೋರ್ಟ್ ಆದೇಶದ ವಿರುದ್ಧ ಮಸೀದಿ ಸಮಿತಿಯ ಮನವಿಯ ಕುರಿತು ಪೀಠವು ಕೇಂದ್ರ, ಉತ್ತರ ಪ್ರದೇಶ ಸರ್ಕಾರ ಮತ್ತು ಹಿಂದೂ ಸಂಘಟನೆ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ. ಶಿವಲಿಂಗದ ಉದ್ದೇಶಿತ ವೈಜ್ಞಾನಿಕ ಸಮೀಕ್ಷೆಯನ್ನು ಸದ್ಯಕ್ಕೆ ಮುಂದೂಡಲು ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡೂ ಒಪ್ಪಿಕೊಂಡಿವೆ.

Published On - 3:50 pm, Fri, 19 May 23