‘ನಾವು ಚುನಾವಣೆ ನಿಯಂತ್ರಿಸಲು ಆಗಲ್ಲ…’- ಇವಿಎಂ ವಿವಿಪ್ಯಾಟ್ ಪ್ರಕರಣದಲ್ಲಿ ಸುಪ್ರೀಂ ವಿಚಾರಣೆ ಮುಕ್ತಾಯ; ತೀರ್ಪು ಕಾಯ್ದಿರಿಸಿದ ಕೋರ್ಟ್

Supreme Court reserves order on EVM VVPAT verification: ಇವಿಎಂನಲ್ಲಿ ಬಿದ್ದ ಮತಗಳನ್ನು ವಿವಿಪ್ಯಾಟ್ ಮತಗಳ ಮೂಲಕ ಪೂರ್ಣವಾಗಿ ಪರಿಶೀಲನೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಪೂರ್ಣಗೊಳಿಸಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಅರ್ಜಿದಾರರ ವಾದಗಳನ್ನು ಬಹುತೇಕ ಒಪ್ಪಲಿಲ್ಲ. ಚುನಾವಣೆಯನ್ನು ತಾವು ನಿಯಂತ್ರಿಸಲು ಆಗುವುದಿಲ್ಲ. ಚುನಾವಣಾ ಆಯೋಗವನ್ನೂ ತಾವು ನಿಯಂತ್ರಿಸಲು ಆಗಲ್ಲ ಎಂದು ನ್ಯಾಯಮೂರ್ತಿಗಳು ವಿಚಾರಣೆ ವೇಳೆ ಹೇಳಿರುವುದು ಗೊತ್ತಾಗಿದೆ.

‘ನಾವು ಚುನಾವಣೆ ನಿಯಂತ್ರಿಸಲು ಆಗಲ್ಲ...’- ಇವಿಎಂ ವಿವಿಪ್ಯಾಟ್ ಪ್ರಕರಣದಲ್ಲಿ ಸುಪ್ರೀಂ ವಿಚಾರಣೆ ಮುಕ್ತಾಯ; ತೀರ್ಪು ಕಾಯ್ದಿರಿಸಿದ ಕೋರ್ಟ್
ಚುನಾವಣೆ
Follow us
|

Updated on: Apr 24, 2024 | 3:44 PM

ನವದೆಹಲಿ, ಏಪ್ರಿಲ್ 24: ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಇವಿಎಂ ಮತ್ತು ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕು (EVM VVPAT vote verification) ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಮುಕ್ತಾಯಗೊಳಿಸಿದೆ. ಇದೂಗ ತೀರ್ಪನ್ನು ಕಾಯ್ದಿರಿಸಿದೆ. ಅರ್ಜಿ ವಿಚಾರಣೆ ವೇಳೆ ನಡೆದ ವಾದ ಪ್ರತಿವಾದದ ವೇಳೆ ನ್ಯಾಯಪೀಠದ ಜಡ್ಜ್​ಗಳು ಕೆಲವಿಷ್ಟು ಮಹತ್ವದ ಅನಿಸಿಕೆಗಳನ್ನು ತೋರ್ಪಡಿಸಿದ್ದುಂಟು. ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಬದಲು ಹಿಂದಿನ ಬ್ಯಾಲಟ್ ಪೇಪರ್ ವೋಟಿಂಗ್ ವ್ಯವಸ್ಥೆ ಬಗ್ಗೆ ಜಡ್ಜ್​ಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೆಯೇ, ವಿವಿಪ್ಯಾಟ್ ವಿಚಾರದಲ್ಲಿ ನ್ಯಾಯಾಧೀಶರು ಕಾಮೆಂಟ್ ಮಾಡಿದ್ದು, ಚುನಾವಣೆ ನಡೆಸಲೆಂದು ಬೇರೆ ಸ್ವಾಯತ್ತ ಸಂಸ್ಥೆ ಇದೆ. ಚುನಾವಣೆಯನ್ನು ಕೋರ್ಟ್ ನಿಯಂತ್ರಿಸಲು ಆಗಲ್ಲ ಎಂದೂ ಹೇಳಿದ್ದಾರೆ.

ಇವಿಎಂಗಳಲ್ಲಿ ಚಲಾಯಿಸಿದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್​ನೊಂದಿಗೆ ಪರಿಶೀಲನೆ ನಡೆಸಬೇಕು ಎಂದು ವಿವಿಧ ಅರ್ಜಿಗಳು ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಕೆ ಆಗಿದ್ದವು. ಅವೆಲ್ಲವನ್ನೂ ಒಟ್ಟು ಸೇರಿಸಿ ನ್ಯಾಯಪೀಠ ವಿಚಾರನೆ ನಡೆಸಿದೆ. ಈ ನ್ಯಾಯಪೀಠದಲ್ಲಿ ನ್ಯಾ| ಸಂಜೀವ್ ಖನ್ನ ಮತ್ತು ನ್ಯಾ| ದೀಪಂಕರ್ ದತ್ತ ಇದ್ದಾರೆ. ಅರ್ಜಿದಾರರ ಪರವಾಗಿ ಪ್ರಶಾಂತ್ ಭೂಷಣ್ ಮೊದಲಾದ ಹಿರಿಯ ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ: ಸಾವಿನ ನಂತರವೂ ಜನರನ್ನು ಲೂಟಿ ಮಾಡುವುದೇ ಕಾಂಗ್ರೆಸ್​ನ ಮಂತ್ರ: ಮೋದಿ

ವಿಚಾರಣೆ ಒಂದು ಹಂತದಲ್ಲಿ ನ್ಯಾಯಾಧೀಶರು ಪ್ರತಿಯೊಂದು ವಿವಿಪ್ಯಾಟ್ ಅನ್ನೂ ಪರಿಶೀಲನೆ ನಡೆಸಬೇಕೆಂಬ ವಾದವನ್ನು ಒಪ್ಪಲು ನಿರಾಕರಿಸಿದ್ದುಂಟು. ಇವಿಎಂನಲ್ಲಿ ಚಲಾವಣೆಯಾದ ಪ್ರತಿಯೊಂದು ಮತಕ್ಕೂ ವಿವಿಪ್ಯಾಟ್ ಜನರೇಟ್ ಮಾಡಿ ಅದನ್ನು ಮತ ಪೆಟ್ಟಿಗೆಗೆ ಹಾಕಿ ಆ ಮತವನ್ನು ಎಣಿಸುವ ಕೆಲಸ ಸಾಧುವಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದುಂಟು. ಹಾಗೆಯೇ, ಒಂದು ಚಿಹ್ನೆಗೆ ಚಲಾಯಿಸಿದ ಮತ ಬೇರೆ ಚಿಹ್ನಗೆ ಹೋಗುವಂತೆ ಇವಿಎಂ ಅನ್ನು ತಿರುಚಿರುವ ಒಂದೇ ಘಟನೆ ವರದಿಯಾಗಿಲ್ಲ. ಎಣಿಕೆ ಆಗುವ ಶೇ. 5ರಷ್ಟು ವಿವಿಪ್ಯಾಟ್​ಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದರೆ ಅದನ್ನು ಎತ್ತಿ ತೋರಿಸಬಹುದಲ್ಲ ಎಂದು ನ್ಯಾಯಮೂರ್ತಿ ದೀಪಂಕರ್ ದತ್ತ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದ್ದರು.

‘ಇಲ್ಲಿಯವರೆಗೂ ಇವಿಎಂ ತಿರುಚಿರುವ ಘಟನೆ ವರದಿಯಾಗಿಲ್ಲ. ನಾವು ಚುನಾವಣೆ ನಿಯಂತ್ರಿಸಲ್ಲ. ಬೇರೊಂದು ಸಾಂವಿಧಾನಿಕ ಪ್ರಾಧಿಕಾರವನ್ನು ನಿಯಂತ್ರಿಸಲು ಆಗಲ್ಲ… ಏನಾದರೂ ಸುಧಾರಣೆ ಆಗಬೇಕೆಂದಿದ್ದರೆ ಖಂಡಿತ ಮಾಡುತ್ತೇವೆ. ಕೋರ್ಟ್ ಎರಡು ಬಾರಿ ಮಧ್ಯಪ್ರವೇಶಿಸಿದೆ. ಒಮ್ಮೆ, ವಿವಿಪ್ಯಾಟ್ ಅನ್ನು ಕಡ್ಡಾಯ ಆಗಬೇಕು ಎಂದು ತಿಳಿಸಿದೆವು. ಮತ್ತೊಮ್ಮೆ, ವಿವಿಪ್ಯಾಟ್ ಪ್ರಮಾಣವನ್ನು ಶೇ 1ರಿಂದ ಶೇ. 5ಕ್ಕೆ ಹೆಚ್ಚಿಸಲು ಹೇಳಿದೆವು… ಆದರೆ, ಮತದಾನ ಪ್ರಕ್ರಿಯೆ ಉತ್ತಮಗೊಳಿಸಲು ಯಾವುದಾದರೂ ಸಲಹೆ ಇದ್ದರೆ ನೀಡಿ ಎಂದು ಕೋರ್ಟ್ ಕೇಳಿದಾಗೆಲ್ಲಾ ಬ್ಯಾಲಟ್ ಪೇಪರ್ ಬೇಕು ಎನ್ನುವ ಸಲಹೆಗಳೇ ಬರುತ್ತಿವೆ,’ ಎಂದು ನ್ಯಾಯಪೀಠದ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ