AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ವಿರುದ್ಧದ ಅವಹೇಳನಕಾರಿ ಆರೋಪದ ಪ್ರವೃತ್ತಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಎಚ್ಚರಿಕೆ

ನ್ಯಾಯಾಧೀಶರ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಮಾಡುವ ಹೆಚ್ಚುತ್ತಿರುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ತೆಲಂಗಾಣ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಅವರನ್ನು ದೂಷಿಸುವ ಅರ್ಜಿಗೆ ಸಹಿ ಹಾಕಿದ ವಕೀಲರು ಸಲ್ಲಿಸಿದ ಬೇಷರತ್ತಾದ ಕ್ಷಮೆಯಾಚನೆಯ ಬಳಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಾಧೀಶರ ವಿರುದ್ಧದ ಅವಹೇಳನಕಾರಿ ಆರೋಪದ ಪ್ರವೃತ್ತಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಎಚ್ಚರಿಕೆ
Justice Br Gavai
ಸುಷ್ಮಾ ಚಕ್ರೆ
|

Updated on:Nov 10, 2025 | 7:43 PM

Share

ನವದೆಹಲಿ, ನವೆಂಬರ್ 10: ಇತ್ತೀಚೆಗೆ ನ್ಯಾಯಾಧೀಶರ ವಿರುದ್ಧ ಮಾನನಷ್ಟ ಆರೋಪಗಳನ್ನು ಮಾಡುವ ಪ್ರವೃತ್ತಿ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (CJI BR Gavai) ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ತೀರ್ಪುಗಳು ತಮ್ಮ ಪರವಾಗಿಲ್ಲದಿದ್ದಾಗ ಈ ರೀತಿ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು ಸಾಮಾನ್ಯ ಎಂದು ಅವರು ಹೇಳಿದ್ದಾರೆ. ನವೆಂಬರ್ 23ರಂದು ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿಯವರ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ತಮಗೆ ಅನುಕೂಲಕರ ಆದೇಶಗಳನ್ನು ಪಡೆಯಲು ವಿಫಲವಾದಾಗ, ನ್ಯಾಯಾಧೀಶರ ವಿರುದ್ಧ ಮೊಕದ್ದಮೆ ಹೂಡುವವರು ಅವಾಚ್ಯ ಮತ್ತು ಹಗರಣದ ಆರೋಪಗಳನ್ನು ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದನ್ನು ನಾವು ಗಮನಿಸಿದ್ದೇವೆ” ಎಂದು ನ್ಯಾ. ಬಿ.ಆರ್ ಗವಾಯಿ ಪೀಠವು ಹೇಳಿದೆ.

ಇದನ್ನೂ ಓದಿ: ನೇಪಾಳದಲ್ಲಿ ಏನಾಗುತ್ತಿದೆ ನೋಡಿ, ನಮ್ಮ ಸಂವಿಧಾನದ ಬಗ್ಗೆ ಹೆಮ್ಮೆಪಡಿ; ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಶ್ಲಾಘನೆ

ಸುಪ್ರೀಂ ಕೋರ್ಟ್ ಈ ಹಿಂದೆ ಈ ಪ್ರಕರಣಕ್ಕೆ ಸಂಬಂಧಪಟ್ಟ ವಕೀಲರಿಗೆ ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶರ ಮುಂದೆ ಕ್ಷಮೆಯಾಚನೆ ಸಲ್ಲಿಸುವಂತೆ ನಿರ್ದೇಶಿಸಿತ್ತು. ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶರು ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದರು.

ಇಂದು ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಅವರು ಆಗಸ್ಟ್ 22ರಂದು ನೀಡಿದ ತಮ್ಮ ಆದೇಶದಲ್ಲಿ ಸಂಬಂಧಪಟ್ಟ ವಕೀಲರು ಸಲ್ಲಿಸಿದ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದೆ. “ನ್ಯಾಯಾಧೀಶರು ಅರ್ಜಿದಾರರು ಸಲ್ಲಿಸಿದ ಕ್ಷಮೆಯಾಚನೆಯನ್ನು ಸ್ವೀಕರಿಸುವ ಉದಾರತೆಯನ್ನು ತೋರಿಸಿದ್ದಾರೆ” ಎಂದು ಪೀಠವು ಹೇಳಿದೆ.

ಇದನ್ನೂ ಓದಿ: Justice Surya Kant: ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ. 24ಕ್ಕೆ ನ್ಯಾ. ಸೂರ್ಯಕಾಂತ್ ಅಧಿಕಾರ ಸ್ವೀಕಾರ

ಈ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ವಿರುದ್ಧ ಎನ್. ಪೆಡ್ಡಿ ರಾಜು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಆರೋಪಿಸಿತ್ತು. ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಉದಾರ ಮನಸಿನಿಂದ ರಾಜು ಅವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ ಎಂದು ಹಿರಿಯ ವಕೀಲ ಸಂಜಯ್ ಹೆಗ್ಡೆ ನ್ಯಾಯಾಲಯಕ್ಕೆ ತಿಳಿಸಿದ ನಂತರ ಈ ಪ್ರಕರಣವನ್ನು ಮುಕ್ತಾಯಗೊಳಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Mon, 10 November 25

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ