ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು.

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ
ಎನ್.ವಿ.ರಮಣ ಮತ್ತು ಎಸ್​.ಎ.ಬೋಬ್ಡೆ
Follow us
Lakshmi Hegde
|

Updated on: Mar 24, 2021 | 2:17 PM

ದೆಹಲಿ: ಸುಪ್ರೀಂಕೋರ್ಟ್​​ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೋಬ್ಡೆ ಏಪ್ರಿಲ್​ನಲ್ಲಿ ನಿವೃತ್ತಿಯಾಗಲಿದ್ದು, ಅವರ ನಂತರ ಸಿಜೆಐ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಸಹಜವಾಗಿಯೇ ಎದ್ದಿದೆ. ಈ ಮಧ್ಯೆ ಎಸ್​. ಎ.ಬೊಬ್ಡೆ ತಮ್ಮ ಉತ್ತರಾಧಿಕಾರಿಯನ್ನಾಗಿ ಎನ್​. ವಿ.ರಮಣ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಬೋಬ್ಡೆ 2019ರ ನವೆಂಬರ್​ 18ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ. ನಿಮ್ಮ ಉತ್ತರಾಧಿಕಾರಿಯನ್ನಾಗಿ ಯಾರ ಹೆಸರನ್ನು ಹೇಳುತ್ತೀರಿ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್​ ಪತ್ರ ಬರೆದಿದ್ದರು. ಇದಕ್ಕೆ ಉತ್ತರಿಸಿದ ಬೋಬ್ಡೆ ಎನ್​​ವಿ ರಮಣ ಹೆಸರನ್ನೇ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಸಿಜೆಐ ಹುದ್ದೆಗೆ ನ್ಯಾಯಮೂರ್ತಿ ರಮಣ (64) ಅವರ ಹೆಸರೇ ಬಲವಾಗಿ ಕೇಳಿಬರುತ್ತಿದ್ದು, ಇವರು ಮೂಲತಃ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯವರು. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. 2000 ರ ಜೂನ್​ 27ರಿಂದ-2013ರ ಸೆಪ್ಟೆಂಬರ್​ 1ರವರೆಗೆ ಆಂಧ್ರಪ್ರದೇಶ ಹೈಕೋರ್ಟ್​ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿದ್ದ ರಮಣ ಅವರನ್ನು, 2013ರ ಸೆಪ್ಟೆಂಬರ್​ 2ರಂದು ದೆಹಲಿ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಯಿತು. 2014ರ ಫೆಬ್ರವರಿ 16ರವರೆಗೆ ಇದೇ ಹುದ್ದೆಯಲ್ಲಿ ಮುಂದುವರಿದರು. ಈ ಮಧ್ಯೆ 2013ರ ಮಾರ್ಚ್​ 10ರಿಂದ ಮೇ 20ರವರೆಗೆ ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ಹುದ್ದೆಯನ್ನೂ ಎನ್​.ವಿ.ರಮಣ ಅವರೇ ನಿಭಾಯಿಸಿದ್ದರು.

ಅದಾದ ಬಳಿಕ 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. 2022ರ ಆಗಸ್ಟ್​ 22ಕ್ಕೆ ನಿವೃತ್ತಿಯಾಗಲಿದ್ದಾರೆ. ಇವರೀಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದರೆ ಒಂದು ವರ್ಷದವರೆಗೆ ಹುದ್ದೆಯಲ್ಲಿ ಮುಂದುವರಿಯಬಹುದಾಗಿದೆ. ಇನ್ನು ಬೋಬ್ಡೆಯವರ ನಂತರ ಇರುವ ಅತ್ಯಂತ ಹಿರಿಯ ನ್ಯಾಯಮೂರ್ತಿಗಳೂ ಎನ್​.ವಿ.ರಮಣ ಅವರೇ ಆಗಿದ್ದಾರೆ.

ವಿವಾದಕ್ಕೂ ಒಳಪಟ್ಟಿದ್ದರು ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ನ್ಯಾ. ರಮಣ ಅವರು ಆಂಧ್ರಪ್ರದೇಶ ಹೈಕೋರ್ಟ್​ನ ಕಾರ್ಯದಲ್ಲಿ, ಇಲ್ಲಿನ ನ್ಯಾಯಮೂರ್ತಿಗಳ ಸಭೆಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ತಮ್ಮ ಮೇಲಿನ ಆರೋಪಕ್ಕೆ ರಮಣ ಅವರು ಶಾಂತವಾಗಿಯೇ ಪ್ರತಿಕ್ರಿಯೆ ನೀಡಿದ್ದರು. ಎಲ್ಲ ಒತ್ತಡಗಳು, ಅಡೆತಡೆಗಳನ್ನು ಧೈರ್ಯವಾಗಿ ಎದುರಿಸುವ ಸ್ವಭಾವವನ್ನು ಪ್ರತಿ ನ್ಯಾಯಾಧೀಶರೂ ಅಳವಡಿಸಿಕೊಳ್ಳುವುದು ತುಂಬ ಮುಖ್ಯ ಎಂದಿದ್ದರು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ