AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಹೈಕೋರ್ಟ್​ಗಳಿಗೆ 68 ನ್ಯಾಯಮೂರ್ತಿಗಳ ನೇಮಕಕ್ಕೆ ಕಾನೂನು ಸಚಿವರಿಗೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಮನವಿ

ಕರ್ನಾಟಕ, ಅಲಹಾಬಾದ್, ರಾಜಸ್ಥಾನ, ಕೊಲ್ಕತ್ತಾ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ, ಮದ್ರಾಸ್, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಕೇರಳ, ಛತ್ತಿಸ್​ಗಢ ಮತ್ತು ಅಸ್ಸಾಂ ಹೈಕೋರ್ಟ್​ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿದೆ.

12 ಹೈಕೋರ್ಟ್​ಗಳಿಗೆ 68 ನ್ಯಾಯಮೂರ್ತಿಗಳ ನೇಮಕಕ್ಕೆ ಕಾನೂನು ಸಚಿವರಿಗೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಮನವಿ
ಸಮಾರಂಭದಲ್ಲಿ ಕಾನೂನು ಸಚಿವ, ಎನ್​.ವಿ ರಮಣ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 04, 2021 | 3:53 PM

Share

ನವದೆಹಲಿ: ಕರ್ನಾಟಕ, ಕೊಲ್ಕತ್ತಾ, ಪಂಜಾಬ್, ಕೇರಳ ಸೇರಿದಂತೆ ಭಾರತದ 12 ರಾಜ್ಯಗಳ ಹೈಕೋರ್ಟ್​ಗಳಿಗೆ 68 ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ ರಮಣ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿತ್ತು. ಇದೇ ಮೊದಲ ಬಾರಿಗೆ ದಾಖಲೆಯ ಪ್ರಮಾಣದ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಇಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದ ವೇದಿಕೆ ಮೇಲೂ ಪುನರುಚ್ಛಾರ ಮಾಡಿದ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ, ನಾವು ನೀಡಿರುವ ಶಿಫಾರಸುಗಳನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರ ಜಾರಿಗೆ ತರಲಿದೆ ಎಂಬ ವಿಶ್ವಾಸವಿದೆ. ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳ ನೇಮಕದ ಸಂದರ್ಭದಲ್ಲೇ 68 ಹೈಕೋರ್ಟ್​ ನ್ಯಾಯಮೂರ್ತಿಗಳ ನೇಮಕಾತಿಯನ್ನು ಕೂಡ ಪೂರ್ಣಗೊಳಿಸುವ ವಿಶ್ವಾಸವಿದೆ. ಇದೇ ವೇದಿಕೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರೆಣ್ ರಿಜಿಜು ಕೂಡ ಇದ್ದಾರೆ. ಅವರು ಈ ಕುರಿತು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬಹಳ ಕಿರಿಯ ಮತ್ತು ಪ್ರತಿಭಾವಂತ ಕಾನೂನು ಸಚಿವರಿದ್ದಾರೆ. ಅವರ ಮುಂದಾಳತ್ವದಲ್ಲಿ ಕೆಲಸಗಳು ಅತ್ಯಂತ ತ್ವರಿತಗತಿಯಲ್ಲಿ ಆಗಲಿದೆ ಎಂಬ ನಿರೀಕ್ಷೆಯಿದೆ. ನಾನು ಮೊದಲು ಕಾನೂನು ಸಚಿವ ಕಿರೆಣ್ ರಿಜಿಜು ಅವರನ್ನು ಭೇಟಿಯಾದಾಗ ಅವರು ಕಾಲೇಜು ವಿದ್ಯಾರ್ಥಿ ಎಂದುಕೊಂಡಿದ್ದೆ. ಅವರು ನೋಡಲು ಇನ್ನೂ ವಿದ್ಯಾರ್ಥಿಯಂತೇ ಇದ್ದಾರೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ತಮಾಷೆ ಮಾಡಿದ್ದಾರೆ.

ಕರ್ನಾಟಕ, ಅಲಹಾಬಾದ್, ರಾಜಸ್ಥಾನ, ಕೊಲ್ಕತ್ತಾ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ, ಮದ್ರಾಸ್, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಕೇರಳ, ಛತ್ತಿಸ್​ಗಢ ಮತ್ತು ಅಸ್ಸಾಂ ಹೈಕೋರ್ಟ್ ಗಳಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿದೆ.

ಆಗಸ್ಟ್ 25 ಮತ್ತು ಸೆಪ್ಟೆಂಬರ್ 1 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಮೂರು ಜನರ ಕೊಲಿಜಿಯಂ ಏಕಕಾಲದಲ್ಲಿ 68 ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಿತ್ತು. ಈ 68 ನ್ಯಾಯಮೂರ್ತಿಗಳ ಪೈಕಿ 10 ಮಹಿಳಾ ನ್ಯಾಯಮೂರ್ತಿಗಳ ಹೆಸರನ್ನು ಕೂಡ ಶಿಫಾರಸು ಮಾಡಲಾಗಿತ್ತು. ಇದರಲ್ಲಿ ಬಾರ್ ಅಸೋಸಿಯೇಷನ್​ನಿಂದ ಬಂದ 44 ಹೆಸರುಗಳು, ನ್ಯಾಯಾಂಗ ಸೇವೆಯಿಂದ ಬಂದ 24 ಹೆಸರುಗಳಿದ್ದವು.

ಭಾರತದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ದಾಖಲೆಯ 68 ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ. ರಮಣ, ನ್ಯಾಯಮೂರ್ತಿ ಯು.ಯು. ಲಲಿತ್ ಮತ್ತು ನ್ಯಾಯಮೂರ್ತಿ ಎ.ಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಕೊಲಿಜಿಯಂ ಭಾರತದ 12 ಹೈಕೋರ್ಟ್‌ಗಳಿಗೆ 68 ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡಿದೆ. ಹೈಕೋರ್ಟ್​ಗಳಲ್ಲಿ ಸುಮಾರು 60 ಲಕ್ಷ ಕೇಸುಗಳ ವಿಚಾರಣೆ ಬಾಕಿ ಉಳಿದಿರುವುದರಿಂದ ತ್ವರಿತವಾಗಿ ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು: ಸುಪ್ರೀಂಕೋರ್ಟ್​ಗೆ ನೇಮಕವಾದ 9 ನ್ಯಾಯಮೂರ್ತಿಗಳಿಂದ ಒಟ್ಟಿಗೇ ಪ್ರಮಾಣವಚನ ಸ್ವೀಕಾರ

ಸುಪ್ರೀಂಕೋರ್ಟ್​ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರಾ ಕರ್ನಾಟಕ ಮೂಲದ ನ್ಯಾ. ಬಿ.ವಿ.ನಾಗರತ್ನ?

(Supreme Court Collegium clears 68 Judges name for 12 High Courts CJI NV Ramana requests Law Minister)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ