ವ್ಯಕ್ತಿ ಅಪರಾಧಿಯಾದರೂ ಆಸ್ತಿ ಕೆಡವಲು ಸಾಧ್ಯವಿಲ್ಲ: ಬುಲ್ಡೋಜರ್ ಕ್ರಮ ವಿರುದ್ಧ ಸುಪ್ರೀಂಕೋರ್ಟ್ ಗರಂ

ಅವರು ಅಪರಾಧಿಯಾಗಿದ್ದರೂ ಸಹ, ಕಾನೂನಿನಿಂದ ಸೂಚಿಸಲಾದ ಕಾರ್ಯವಿಧಾನವನ್ನು ಅನುಸರಿಸದೆ ಅದನ್ನು ಮಾಡಲಾಗುವುದಿಲ್ಲ" ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಕೆಡವುವಿಕೆ ಕ್ರಮದ ವಿರುದ್ಧದ ಅರ್ಜಿಗಳ ವಿಚಾರಣೆ ವೇಳೆ ಹೇಳಿದೆ. ಆದಾಗ್ಯೂ, ಸಾರ್ವಜನಿಕ ರಸ್ತೆಗಳಿಗೆ ಅಡ್ಡಿಪಡಿಸುವ ಯಾವುದೇ ಅಕ್ರಮ ರಚನೆಯನ್ನು ರಕ್ಷಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ವ್ಯಕ್ತಿ ಅಪರಾಧಿಯಾದರೂ ಆಸ್ತಿ ಕೆಡವಲು ಸಾಧ್ಯವಿಲ್ಲ: ಬುಲ್ಡೋಜರ್ ಕ್ರಮ ವಿರುದ್ಧ ಸುಪ್ರೀಂಕೋರ್ಟ್ ಗರಂ
ಬುಲ್ಡೋಜರ್
Follow us
ರಶ್ಮಿ ಕಲ್ಲಕಟ್ಟ
|

Updated on:Sep 02, 2024 | 5:41 PM

ದೆಹಲಿ ಸೆಪ್ಟೆಂಬರ್ 02: ಬುಲ್ಡೋಜರ್ ನ್ಯಾಯ (bulldozer justice) ಎಂದು ಕರೆಯಲ್ಪಡುವ ಕ್ರಮದ ವಿರುದ್ಧ ಸುಪ್ರೀಂಕೋರ್ಟ್ (Supreme Court) ಗರಂ ಆಗಿದ್ದು, ಅಪರಾಧದ ಆರೋಪ ಹೊತ್ತಿರುವ ವ್ಯಕ್ತಿಗೆ ಸೇರಿದ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿದೆ. ಗಂಭೀರ ಅಪರಾಧಗಳ ಆರೋಪಿಗಳ ಮನೆಗಳ ವಿರುದ್ಧ ಅಧಿಕಾರಿಗಳು ಆಗಾಗ್ಗೆ ಕೈಗೊಳ್ಳುವ ಬುಲ್ಡೋಜರ್ ಕ್ರಮ ವಿರುದ್ಧದ ಮನವಿಗಳನ್ನು ಆಲಿಸಿದ ನ್ಯಾಯಾಲಯ, ವ್ಯಕ್ತಿಯನ್ನು ಅಪರಾಧಿಯೆಂದು ನಿರ್ಣಯಿಸಿದರೂ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿದೆ.

ಆದಾಗ್ಯೂ, ಸಾರ್ವಜನಿಕ ರಸ್ತೆಗಳಿಗೆ ಅಡ್ಡಿಪಡಿಸುವ ಯಾವುದೇ ಅಕ್ರಮ ರಚನೆಯನ್ನು ರಕ್ಷಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಒಬ್ಬ ಆರೋಪಿಯಾಗಿರುವ ಮಾತ್ರಕ್ಕೆ ನೀವು ಮನೆಯನ್ನು ಹೇಗೆ ಕೆಡವುತ್ತೀರಿ? ಎಂದು ಸುಪ್ರೀಂ ಕೋರ್ಟ್ ಅಧಿಕಾರಿಗಳನ್ನು ಪ್ರಶ್ನಿಸಿದ್ದು ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ನೀಡಲು ಪ್ರಸ್ತಾಪಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ಅವರು ಅಪರಾಧಿಯಾಗಿದ್ದರೂ ಸಹ, ಕಾನೂನಿನಿಂದ ಸೂಚಿಸಲಾದ ಕಾರ್ಯವಿಧಾನವನ್ನು ಅನುಸರಿಸದೆ ಅದನ್ನು ಮಾಡಲಾಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಕೆಡವುವಿಕೆ ಕ್ರಮದ ವಿರುದ್ಧದ ಅರ್ಜಿಗಳ ವಿಚಾರಣೆ ವೇಳೆ ಹೇಳಿದೆ.

“ನಾವು ಪ್ಯಾನ್-ಇಂಡಿಯಾ ಆಧಾರದ ಮೇಲೆ ಕೆಲವು ಮಾರ್ಗಸೂಚಿಗಳನ್ನು ಹಾಕಲು ಪ್ರಸ್ತಾಪಿಸುತ್ತೇವೆ, ಇದರಿಂದಾಗಿ ಎದ್ದಿರುವ ಸಮಸ್ಯೆಗಳ ಬಗ್ಗೆ ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ” ಎಂದು ಪೀಠ ಹೇಳಿದೆ. ಒಬ್ಬರ ಮಗ ದಂಗೆಕೋರ ಆಗಿರಬಹುದು, ಆತನ ಅಪ್ಪನ ಮನೆ ಕೆಡವಿದರೆ? ಇದು ದಾರಿಯಲ್ಲ ಎಂದು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರು ಹೇಳಿರುವುದಾಗಿ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಟ್ಟಡವು ಕಾನೂನುಬಾಹಿರವಾಗಿದ್ದರೆ ಮಾತ್ರ ಅಂತಹ ನೆಲಸಮವನ್ನು ಮಾಡಬಹುದು. ಅಂತಹ ಪ್ರಕರಣಗಳನ್ನು ತಪ್ಪಿಸಲು ಏಕೆ ನಿರ್ದೇಶನಗಳನ್ನು ರವಾನಿಸಬಾರದು ಎಂದು ನ್ಯಾಯಮೂರ್ತಿ ವಿಶ್ವನಾಥನ್ ಕೇಳಿದ್ದಾರೆ.

“ಮೊದಲ ನೋಟಿಸ್ ನೀಡಿ, ಉತ್ತರಿಸಲು ಸಮಯ ಕೊಡಿ, ಕಾನೂನು ಪರಿಹಾರಗಳನ್ನು ಹುಡುಕುವ ಸಮಯ ನೀಡಿ, ಮತ್ತು ನಂತರ ಕೆಡವಿ ಎಂದು ಅವರು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Swati Maliwal case: ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್‌ಗೆ ಸುಪ್ರೀಂಕೋರ್ಟ್ ಜಾಮೀನು

ಕಳೆದ ಕೆಲವು ವರ್ಷಗಳಿಂದ, ಹಲವಾರು ರಾಜ್ಯ ಸರ್ಕಾರಗಳು ಗಂಭೀರ ಅಪರಾಧಗಳಲ್ಲಿ ಭಾಗಿಯಾದವರ ಮನೆಗಳು ಮತ್ತು ಆಸ್ತಿಗಳನ್ನು ನೆಲಸಮಗೊಳಿಸಿವೆ. ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸೆಪ್ಟೆಂಬರ್ 17 ರಂದು ವಿಚಾರಣೆಗೆ ಮುಂದೂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Mon, 2 September 24

ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್