AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಪೂರೈಕೆಗಾಗಿ 12 ಸದಸ್ಯರ ಟಾಸ್ಕ್​ಫೋರ್ಸ್ ರಚಿಸಿದ ಸುಪ್ರೀಂ; ಕರ್ನಾಟಕದ ಡಾ.ದೇವಿ ಪ್ರಸಾದ್ ಶೆಟ್ಟಿಗೂ ಸ್ಥಾನ

Supreme Court On Medical Oxygen: ವಿವಿಧ ರಾಜ್ಯಗಳು ಮತ್ತು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿವೆ.

ಆಕ್ಸಿಜನ್ ಪೂರೈಕೆಗಾಗಿ 12 ಸದಸ್ಯರ ಟಾಸ್ಕ್​ಫೋರ್ಸ್ ರಚಿಸಿದ ಸುಪ್ರೀಂ; ಕರ್ನಾಟಕದ ಡಾ.ದೇವಿ ಪ್ರಸಾದ್ ಶೆಟ್ಟಿಗೂ ಸ್ಥಾನ
ಸುಪ್ರೀಂಕೋರ್ಟ್ ಟಾಸ್ಕ್​ಫೋರ್ಸ್​ನ ಸದಸ್ಯ ಡಾ.ದೇವಿ ಪ್ರಸಾದ್ ಶೆಟ್ಟಿ
guruganesh bhat
|

Updated on:May 08, 2021 | 6:10 PM

Share

ದೆಹಲಿ: ದೇಶದ ವಿವಿಧ ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್​ನ ಸಮರ್ಪಕ ಮತ್ತು ತ್ವರಿತ ಪೂರೈಕೆಗಾಗಿ 12 ಸದಸ್ಯರ ರಾಷ್ಟ್ರೀಯ ಟಾಸ್ಕ್​ಫೋರ್ಸ್​ನ್ನು ಸುಪ್ರೀಂಕೋರ್ಟ್ ರಚಿಸಿದೆ. ಕೇಂದ್ರ ಸಂಪುಟ ಕಾರ್ಯದರ್ಶಿ ಈ ಟಾಸ್ಕ್​ಫೋರ್ಸ್​ನ ನೇತೃತ್ವ ವಹಿಸಲಿದ್ದು, ಬೆಂಗಳೂರಿನ ಡಾ.ದೇವಿ ಪ್ರಸಾದ್ ಶೆಟ್ಟಿ ಅವರಿಗೂ ಟಾಸ್ಕ್​ಫೋರ್ಸ್​ನಲ್ಲಿ ಸ್ಥಾನ ಲಭಿಸಿದೆ. ದೇಶಾದ್ಯಂತ ಆಕ್ಸಿಜನ್, ಡ್ರಗ್ಸ್‌ ಹಂಚಿಕೆಯ ಉಸ್ತುವಾರಿಯನ್ನು ಈ ಟಾಸ್ಕ್​ಫೋರ್ಸ್ ನಿಭಾಯಿಸಲಿದೆ.

ಸುಪ್ರೀಂಕೋರ್ಟ್​ನ ನ್ಯಾಯಾಧೀಶರು ಈ ಟಾಸ್ಕ್​ಫೋರ್ಸ್ ರಚಿಸುವ ಮುನ್ನ ಪ್ರತಿ ಸದಸ್ಯರ ಬಳಿಯೂ ವೈಯಕ್ತಿಕವಾಗಿ ಮಾತನಾಡಿದ್ದಾರೆ. ತದನಂತರವೇ ಪ್ರತಿ ಸದಸ್ಯರನ್ನೂ ಟಾಸ್ಕ್​ಫೋರ್ಸ್​ಗೆ ನೇಮಿಸಿದ್ದಾರೆ ಎಂದು ಹೇಳಲಾಗಿದೆ. ಟಾಸ್​ಫೋರ್ಸ್​ನ ಎಲ್ಲ ಸದಸ್ಯರೂ ಯಾರ ಮಧ್ಯಪ್ರವೇಶವೂ ಇಲ್ಲದೇ, ತಮ್ಮ ವರದಿಯನ್ನು ನೇರವಾಗಿ ಸುಪ್ರೀಂಕೋರ್ಟ್​ಗೆ ಸಲ್ಲಿಸಲಿದ್ದಾರೆ. ಇನ್ನು ಒಂದೇ ವಾರದಲ್ಲಿ ಟಾಸ್ಕ್​ಫೋರ್ಸ್​ ತನ್ನ ಕೆಲಸ ಆರಂಭಿಸಲಿದೆ ಎಂದು ವರದಿಯಾಗಿದೆ.

ಟಾಸ್ಕ್​ಫೋರ್ಸ್​ಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ದೇಶದ ಎಲ್ಲ ರಾಜ್ಯ ಸರ್ಕಾರಗಳು ಮತ್ತು ಆಸ್ಪತ್ರೆಗಳೂ ಟಾಸ್ಕ್​ಫೋರ್ಸ್​ನ ಕೆಲಸ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

ಪಶ್ಚಿಮ ಬಂಗಾಳದ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ.ಬವತೋಶ್ ವಿಶ್ವಾಸ್ ಟಾಸ್ಕ್​ಫೋರ್ಸ್​ನ ನೇತೃತ್ವ ವಹಿಸಲಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯ ಎಂಡಿ ಡಾ.ನರೇಶ್ ತೆಹ್ರಾನ್, ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆ, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು, ಮುಂಬೈನ ಫೋರ್ಟಿಸ್ ಆಸ್ಪತ್ರೆಯ ವೈದ್ಯರುಗಳನ್ನು ಸಹ ಟಾಸ್ಕ್​ಫೋರ್ಸ್ ಒಳಗೊಂಡಿದೆ.

ಇಂದು ಟಾಸ್ಕ್​ಪೋರ್ಸ್ ರಚಿಸುವ ಮುನ್ನ ನಡೆದ ವಿಚಾರಣೆಯಲ್ಲಿ ದೇಶಕ್ಕೆ ಎದುರಾಗಲಿರುವ ಕೊವಿಡ್ ಮೂರನೇ ಅಲೆಯನ್ನು ತಡೆಯಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆಯೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಯಾವುದೇ ಕೊವಿಡ್​ 19 ಕೇಂದ್ರಗಳಿಗೆ ದಾಖಲಾಗಲು ಕೊರೊನಾ ಪಾಸಿಟಿವ್ ವರದಿ ಕಡ್ಡಾಯವಲ್ಲ;  ನೀತಿ ಪರಿಷ್ಕರಿಸಿದ ಕೇಂದ್ರ  

Explainer: ಮಕ್ಕಳಿಗೆ ಸಮಸ್ಯೆ ತಂದೊಡ್ಡುವ ಕೊರೊನಾ 3ನೇ ಅಲೆ ಎದುರಿಸಲು ಸಿದ್ಧತೆ ಹೇಗಿರಬೇಕು? ತಜ್ಞರ ಅಭಿಪ್ರಾಯ ಇಲ್ಲಿದೆ

(supreme court constitutes 12 member committee to look into medical oxygen dr devi prasad shetty also a member from karnataka)

Published On - 5:33 pm, Sat, 8 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ