AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕವಿತಾಗೆ ಜಾಮೀನು ನೀಡಿದ್ದಕ್ಕೆ ಟೀಕೆ ಮಾಡಿದ ತೆಲಂಗಾಣ ಸಿಎಂಗೆ ಸುಪ್ರೀಂಕೋರ್ಟ್ ತರಾಟೆ

ಅವರು ಹೇಳಿದ್ದನ್ನು ನೀವು ಪತ್ರಿಕೆಯಲ್ಲಿ ಓದಿದ್ದೀರಾ? ಅವರು ಹೇಳಿರುವುದನ್ನು ಓದಿ. ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ನೀಡುವ ಹೇಳಿಕೆಯೇ ಇದು?. ಅವರ ಹೇಳಿಕೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು. ಇದು ಮುಖ್ಯಮಂತ್ರಿಯೊಬ್ಬರು ಮಾಡಬೇಕಾದ ಹೇಳಿಕೆಯೇ? ಸಾಂವಿಧಾನಿಕ ಅಧಿಕಾರಿಯೊಬ್ಬರು ಈ ರೀತಿ ಮಾತನಾಡುತ್ತಿದ್ದಾರೆಯೇ? ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರಿಗೆ ಹೇಳಿದೆ.

ಕವಿತಾಗೆ ಜಾಮೀನು ನೀಡಿದ್ದಕ್ಕೆ ಟೀಕೆ ಮಾಡಿದ ತೆಲಂಗಾಣ ಸಿಎಂಗೆ ಸುಪ್ರೀಂಕೋರ್ಟ್ ತರಾಟೆ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 29, 2024 | 8:01 PM

Share

ದೆಹಲಿ ಆಗಸ್ಟ್ 29: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಕೆ ಕವಿತಾಗೆ (K Kavitha ) ಜಾಮೀನು ನೀಡಿದ್ದಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ಮಾಡಿದ ಟೀಕೆಗಳಿಗೆ ಸುಪ್ರೀಂಕೋರ್ಟ್ (Supreme Court)  ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರಂತಹ ಇತರರಿಗೆ ಜಾಮೀನು ನಿರಾಕರಿಸಲಾಗಿದೆ. ಆದರೆ ಕವಿತಾ ಅವರು ಕೇವಲ ಐದು ತಿಂಗಳ ನಂತರ ಜಾಮೀನು ಪಡೆದದ್ದು ಹೇಗೆ ಎಂದು ರೆಡ್ಡಿ ಸಾರ್ವಜನಿಕವಾಗಿ ಪ್ರಶ್ನಿಸಿದ್ದರು.

2024ರ ಲೋಕಸಭಾ ಚುನಾವಣೆಯಲ್ಲಿ ಬಿಆರ್‌ಎಸ್ ಬಿಜೆಪಿ ಗೆಲುವಿಗೆ ಶ್ರಮಿಸಿದ್ದು ಸತ್ಯ. ಬಿಆರ್‌ಎಸ್ ಮತ್ತು ಬಿಜೆಪಿ ನಡುವಿನ ಡೀಲ್‌ನಿಂದಾಗಿ ಕವಿತಾಗೆ ಜಾಮೀನು ಸಿಕ್ಕಿದೆ ಎಂಬ ಮಾತು ಕೂಡ ಇದೆ ಎಂದು ತೆಲಂಗಾಣ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದ ವೇಳೆ ಆರೋಪಿಸಿದ್ದರು.

ತೆಲಂಗಾಣ ಸಿಎಂ ಹೇಳಿಕೆಗೆ ಸುಪ್ರೀಂಕೋರ್ಟ್ ಹೇಳಿದ್ದೇನು?

ರೆಡ್ಡಿಯವರ ಹೇಳಿಕೆಯಿಂದ ಕೆರಳಿದ ಸುಪ್ರೀಂಕೋರ್ಟ್, ಇದು ನ್ಯಾಯಾಂಗದ ಬಗ್ಗೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು ಎಂದು ಹೇಳಿದೆ.  “ಅವರು ಹೇಳಿದ್ದನ್ನು ನೀವು ಪತ್ರಿಕೆಯಲ್ಲಿ ಓದಿದ್ದೀರಾ? ಅವರು ಹೇಳಿರುವುದನ್ನು ಓದಿ. ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ನೀಡುವ ಹೇಳಿಕೆಯೇ ಇದು?. ಅವರ ಹೇಳಿಕೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು. ಇದು ಮುಖ್ಯಮಂತ್ರಿಯೊಬ್ಬರು ಮಾಡಬೇಕಾದ ಹೇಳಿಕೆಯೇ? ಸಾಂವಿಧಾನಿಕ ಅಧಿಕಾರಿಯೊಬ್ಬರು ಈ ರೀತಿ ಮಾತನಾಡುತ್ತಿದ್ದಾರೆಯೇ? ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರಿಗೆ ಹೇಳಿದೆ.

“ರಾಜಕೀಯ ಪೈಪೋಟಿಯಲ್ಲಿ ಅವರು ನ್ಯಾಯಾಲಯವನ್ನು ಏಕೆ ಎಳೆಯಬೇಕು? ನಾವು ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ಮಾಡಿ ಆದೇಶಗಳನ್ನು ನೀಡುತ್ತೇವೆಯೇ?. ರಾಜಕಾರಣಿಗಳಿಂದ ಅಥವಾ ಯಾರಾದರೂ ನಮ್ಮ ಆದೇಶಗಳನ್ನು ಟೀಕಿಸಿದರೆ ನಮಗೆ ತೊಂದರೆಯಾಗುವುದಿಲ್ಲ. ನಾವು ಆತ್ಮಸಾಕ್ಷಿ ಮತ್ತು ಪ್ರಮಾಣ ವಚನದಂತೆ ನಮ್ಮ ಕರ್ತವ್ಯವನ್ನು ಮಾಡುತ್ತೇವೆ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ‘ಬಂಗಾಳವನ್ನು ಸುಟ್ಟರೆ…’; ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು

ಸಂಸ್ಥೆಗಳ ಬಗ್ಗೆ ಪರಸ್ಪರ ಗೌರವವನ್ನು ಹೊಂದುವುದು ಮತ್ತು ಒಂದು ತೋಳಿನ ಅಂತರವನ್ನು ಕಾಯ್ದುಕೊಳ್ಳುವುದು ಮೂಲಭೂತ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

“ನಾವು ಯಾವಾಗಲೂ ಶಾಸಕಾಂಗದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುತ್ತೇವೆ, ಆಗ ಅವರಿಂದಲೂ ಅದನ್ನು ನಿರೀಕ್ಷಿಸಲಾಗುತ್ತದೆ. ನಾವು ರಾಜಕೀಯ ಪರಿಗಣನೆಗಳ ಮೇಲೆ ಆದೇಶಗಳನ್ನು ನೀಡುತ್ತೇವೆಯೇ?” ಎಂದು ನ್ಯಾಯಮೂರ್ತಿಗಳಾದ ಪಿ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಕೇಳಿದೆ. ರೆಡ್ಡಿ ಆರೋಪಿಯಾಗಿರುವ 2015ರ ವೋಟಿಗಾಗಿ ನಗದು ಹಗರಣ ಪ್ರಕರಣದ ವಿಚಾರಣೆಯನ್ನು ತೆಲಂಗಾಣದಿಂದ ಭೋಪಾಲ್‌ಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ