ಬಿಹಾರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ನಕಾರ, ಜು. 10ಕ್ಕೆ ವಿಚಾರಣೆ
ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ನಡೆಸುವ ಭಾರತೀಯ ಚುನಾವಣಾ ಆಯೋಗದ (ECI) ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ನಗರಗಳು ತ್ವರಿತವಾಗಿ ಬೆಳವಣಿಗೆ ಆಗಿರುವುದು, ವಲಸೆ ಹೆಚ್ಚಿರುವುದು, ಯುವ ಜನರು ಮತದಾನಕ್ಕೆ ಅರ್ಹರಾಗಿರುವುದು ಮತ್ತು ವಿದೇಶಿ ಅಕ್ರಮ ವಲಸಿಗರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದರಿಂದ ಪರಿಶೀಲನೆ ಪ್ರಕ್ರಿಯೆ ಅಗತ್ಯವಾಗಿತ್ತು ಎಂದು ಚುನಾವಣಾ ಆಯೋಗ ಹೇಳಿತ್ತು.

ಬಿಹಾರ, ಜುಲೈ 07: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ನಡೆಸುವ ಭಾರತೀಯ ಚುನಾವಣಾ ಆಯೋಗದ (ECI) ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ನಗರಗಳು ತ್ವರಿತವಾಗಿ ಬೆಳವಣಿಗೆ ಆಗಿರುವುದು, ವಲಸೆ ಹೆಚ್ಚಿರುವುದು, ಯುವ ಜನರು ಮತದಾನಕ್ಕೆ ಅರ್ಹರಾಗಿರುವುದು ಮತ್ತು ವಿದೇಶಿ ಅಕ್ರಮ ವಲಸಿಗರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದರಿಂದ ಪರಿಶೀಲನೆ ಪ್ರಕ್ರಿಯೆ ಅಗತ್ಯವಾಗಿತ್ತು ಎಂದು ಚುನಾವಣಾ ಆಯೋಗ ಹೇಳಿತ್ತು.
ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಪರಿಶೀಲಿಸಲು ಒಪ್ಪಿಕೊಂಡಿದೆ ಮತ್ತು ಮುಂದಿನ ವಿಚಾರಣೆಯನ್ನು ಜುಲೈ 10 ಕ್ಕೆ ನಿಗದಿಪಡಿಸಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸಲ್ಲಿಸಲಾದ ವಿವಿಧ ಅರ್ಜಿಗಳ ತ್ವರಿತ ವಿಚಾರಣೆಯನ್ನು ಕೋರಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಪ್ರಸ್ತಾಪಿಸಿದರು.
ಪ್ರಕರಣವನ್ನು ಶೀಘ್ರ ವಿಚಾರಣೆಗೆ ಪಟ್ಟಿ ಮಾಡಬೇಕೆಂದು ಸಿಬಲ್ ಒತ್ತಾಯಿಸಿದರು. ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕುರಿತು ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಬಿಹಾರದ ಮಾಜಿ ಶಾಸಕ ಮುಜಾಹಿದ್ ಆಲಂ ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ಪರಿಷ್ಕರಣೆಗೆ ಆದೇಶಿಸಿದ್ದು, ಬಿಹಾರದಲ್ಲಿ ತಕ್ಷಣ ಜಾರಿಗೆ ತರಲಾಗಿದೆ.
ಚುನಾವಣಾ ಆಯೋಗದ ಆದೇಶವು ಸಂವಿಧಾನದ 14, 19, 21, 325 ಮತ್ತು 326ನೇ ವಿಧಿಗಳು ಹಾಗೂ 1950ರ ಪ್ರಜಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳ ನಿಯಮ 21ಎ ನಿಬಂಧನೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ವಾದಿಸಿದೆ.
ಮತ್ತಷ್ಟು ಓದಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಸ್ಪರ್ಧೆ? ಪಕ್ಷದ ನಾಯಕ ಹೇಳಿದ್ದೇನು?
ಬಿಹಾರದಲ್ಲಿ ಮತದಾರರ ಪಟ್ಟಿಯ ಸಂಪೂರ್ಣ ಪರಿಷ್ಕರಣೆಗೆ ಚುನಾವಣಾ ಆಯೋಗದ ನಿರ್ದೇಶನವನ್ನು ಪ್ರಶ್ನಿಸಿ ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಂಬ ಸರ್ಕಾರೇತರ ಸಂಸ್ಥೆ ಕೂಡ ಅರ್ಜಿ ಸಲ್ಲಿಸಿದೆ. ಜೂನ್ 24 ರಂದು ಚುನಾವಣಾ ಆಯೋಗವು ಅನರ್ಹ ಹೆಸರುಗಳನ್ನು ತೆಗೆದುಹಾಕಿ ಮತ್ತು ಅರ್ಹ ನಾಗರಿಕರನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರಿಸುವ ಉದ್ದೇಶದಿಂದ ಬಿಹಾರದಲ್ಲಿ ಎಸ್‌ಐಆರ್ ನಡೆಸಲು ನಿರ್ದೇಶನಗಳನ್ನು ನೀಡಿತ್ತು.
ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯಲಿದೆ. ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‌ಐಆರ್) ಕೈಗೊಳ್ಳುವ ಚುನಾವಣ ಆಯೋಗದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಆಯೋಗ ಈ ಆದೇಶವನ್ನು ಪ್ರಶ್ನಿಸಿ ಲಾಲು ನೇತೃತ್ವದ ಆರ್‌ಜೆಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಅನಧಿಕೃತ, ಮೃತ, ವಲಸೆ ಹೋಗಿರುವ ಮತದಾರರ ಕೈ ಬಿಡುವ ಉದ್ದೇಶದೊಂದಿಗೆ ಜೂ.24ರಂದು ಪರಿಷ್ಕರಣೆ ಬಗ್ಗೆ ಆದೇಶ ಹೊರಡಿಸಿದ್ದ ಆಯೋಗವು ಜು.25ರೊಳಗೆ ದಾಖಲೆಗಳನ್ನು ಸಲ್ಲಿಸುವಂತೆ ಮತದಾರರಿಗೆ ಸೂಚಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ