ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧದ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್​ ನಿರಾಕಾರ

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಈ ಬಗ್ಗೆ ಆದೇಶ ಹೊರಡಿಸಿದ್ದು, ಈ ಸಮಸ್ಯೆ ಈಗಾಗಲೇ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಆದ್ದರಿಂದ ಈ ಪ್ರಕರಣವನ್ನು ಪರಿಗಣಿಸಲು ನಿರಾಕರಿಸಲಾಗಿದೆ ಎಂದಿದೆ.

ಅಗ್ನಿಪಥ್ ನೇಮಕಾತಿ ಯೋಜನೆ ವಿರುದ್ಧದ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್​ ನಿರಾಕಾರ
ಸಂಗ್ರಹ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 10, 2022 | 1:00 PM

ನವದೆಹಲಿ: ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯನ್ನು (Agnipath Scheme) ಪರಿಚಯಿಸಿದ ನಂತರ ನಡೆದ ಪ್ರತಿಭಟನೆಗಳ ತನಿಖೆಗೆ ಕೋರಿ ವಕೀಲರೊಬ್ಬರು ಸಲ್ಲಿಸಿದ ಹೊಸ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿದಾರರು ಅಗ್ನಿಪಥ್ ನೇಮಕಾತಿ ಯೋಜನೆಯ ಸಿಂಧುತ್ವವನ್ನು ಪ್ರಶ್ನಿಸಲು ಮತ್ತು ಸೇನೆಯ ಮೇಲೆ ಅದರ ಪ್ರಭಾವವನ್ನು ಪರಿಶೀಲಿಸಲು ಕೋರಿದ್ದರು.

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಈ ಬಗ್ಗೆ ಆದೇಶ ಹೊರಡಿಸಿದ್ದು, ಈ ಸಮಸ್ಯೆ ಈಗಾಗಲೇ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಆದ್ದರಿಂದ ಈ ಪ್ರಕರಣವನ್ನು ಪರಿಗಣಿಸಲು ನಿರಾಕರಿಸಲಾಗಿದೆ ಎಂದಿದೆ. ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬ್ಯಾಚ್ ಅನ್ನು ದೆಹಲಿ ಹೈಕೋರ್ಟ್‌ಗೆ ಈ ವರ್ಷದ ಜುಲೈನಲ್ಲಿ ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು. ಇದೇ ರೀತಿಯ ಅರ್ಜಿಗಳು ಈಗಾಗಲೇ ಹೈಕೋರ್ಟ್‌ನಲ್ಲಿ ಬಾಕಿಯಿದ್ದು, ಹೈಕೋರ್ಟ್‌ನ ಅಭಿಪ್ರಾಯದ ಪ್ರಯೋಜನವನ್ನು ಹೊಂದಿರುತ್ತದೆ ಎಂದು ಸುಪ್ರೀಂ ಕೋರ್ಟ್ ಭಾವಿಸಿದ್ದರಿಂದ ವರ್ಗಾವಣೆಗೆ ನಿರ್ದೇಶನ ನೀಡಲಾಗಿದೆ.

ಇದನ್ನೂ ಓದಿ: Prophet Row: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎಎಸ್ ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ವಿಷಯದ ಕುರಿತು ಬಹುಸಂಖ್ಯೆಯ ರಿಟ್ ಅರ್ಜಿಗಳು ಅಪೇಕ್ಷಣೀಯ ಅಥವಾ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್