ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಮುಂದೂಡಿದೆ. ಜೂನ್ 26ರಂದು ಸುಪ್ರೀಂಕೋರ್ಟ್​ ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
ಅರವಿಂದ್ ಕೇಜ್ರಿವಾಲ್

Updated on: Jun 24, 2024 | 12:59 PM

ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್(Arvind Kejriwal) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಮುಂದೂಡಿದೆ. ಜೂನ್ 26ರಂದು ಸುಪ್ರೀಂಕೋರ್ಟ್​ ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರನ್ನು ಬಂಧಿಸಲಾಗಿದೆ. ಮಧ್ಯಂತರ ಜಾಮೀನಿನ ಮೇಲೆ ಒಮ್ಮೆ ಬಿಡುಗಡೆ ಮಾಡಲಾಗಿತ್ತು. ಈ ಹಿಂದೆ ದೆಹಲಿ ನ್ಯಾಯಾಲಯದಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿಗೆ ಜಾಮೀನು ನೀಡಲಾಗಿತ್ತು. ಆದರೆ ಅವರ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತನ್ನ ಆದೇಶ ನೀಡುವವರೆಗೆ ಜಾಮೀನಿಗೆ ತಡೆ ನೀಡಿದೆ.

ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಲೋಪ್‌ಸೈಡ್ ಮತ್ತು ಏಕಪಕ್ಷೀಯ ಎಂದು ವಾದಿಸಿದ್ದರು.

ಮತ್ತಷ್ಟು ಓದಿ:
ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ: ಸುಪ್ರೀಂ ಕೋರ್ಟ್​ ಮೊರೆ ಹೋದ ಅರವಿಂದ್ ಕೇಜ್ರಿವಾಲ್

ದಾಖಲೆಗಳನ್ನು ಪರಿಗಣಿಸದೆಯೇ ನಿರ್ಧಾರ ಕೈಗೊಳ್ಳಲಾಗಿದೆ. ದಾಖಲೆಗಳನ್ನು ಪರಿಗಣಿಸದೆ ಅವು ಸಂಬಂಧಿತ ಅಥವಾ ಅಪ್ರಸ್ತುತ ಎಂದು ಹೇಗೆ ತೀರ್ಮಾನಿಸುತ್ತೀರಿ ಎಂದು ಇಡಿ ಪರ ವಕೀಲ ರಾಜು ವಾದಿಸಿದ್ದರು.
ಕೇಜ್ರಿವಾಲ್‌ಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಶುಕ್ರವಾರ ಹೈಕೋರ್ಟ್‌ ನ್ಯಾಯಮೂರ್ತಿ ಸುಧೀರ್‌ಕುಮಾರ್ ಜೈನ್ ಮಧ್ಯಂತರ ತಡೆ ನೀಡಿದ್ದರು.

ಇದಕ್ಕೂ ಮುನ್ನ ವಿಚಾರಣಾ ನ್ಯಾಯಾಲಯ ಗುರುವಾರ ಕೇಜ್ರಿವಾಲ್‌ಗೆ ಜಾಮಿನು ನೀಡಿತ್ತು. ಕೇಜ್ರಿವಾಲ್‌ ಅವರ ಅಪರಾಧದ ಬಗ್ಗೆ ನೇರ ಸಾಕ್ಷ್ಯ ನೀಡಲು ಇ ಡಿ ವಿಫಲವಾಗಿದ್ದು ಇನ್ನೊಬ್ಬ ಆರೋಪಿ ವಿಜಯ್ ನಾಯರ್ ಕೇಜ್ರಿವಾಲ್ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅದು ಸಾಬೀತುಪಡಿಸಿಲ್ಲ ಎಂಬುದಾಗಿ ವಿಚಾರಣಾ ನ್ಯಾಯಾಲಯವಾದ ರೌಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ನಿಯಾಯ್ ಬಿಂದು ತಿಳಿಸಿದ್ದರು.

ಜಾಮೀನು ಪ್ರಶ್ನಿಸಿ ಇ ಡಿ ತಕ್ಷಣವೇ ದೆಹಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಪ್ರಕರಣದ ತುರ್ತು ವಿಚಾರಣೆ ನಡೆದು ಜಾಮಿನು ಆದೇಶಕ್ಕೆ ಜಾರಿಗೆ ಎರಡು ದಿನಗಳ ಕಾಲ ಮಧ್ಯಂತರ ತಡೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್‌ ಅವರು ಪ್ರಸ್ತುತ ಮೇಲ್ಮನವಿ ಸಲ್ಲಿಸಿದ್ದಾರೆ.
ಕೆಲ ಮದ್ಯ ಮಾರಾಟಗಾರರಿಗೆ ನೆರವಾಗುವ ಉದ್ದೇಶದಿಂದ ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಪಿತೂರಿ ನಡೆಸಿದ್ದರು ಎಂಬ ಕಾರಣ ನೀಡಿ ಮಾರ್ಚ್‌ 21ರಂದು ಜಾರಿ ನಿರ್ದೇಶನಾಲಯಅವರನ್ನು ಬಂಧಿಸಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 12:52 pm, Mon, 24 June 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us