ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಮಧ್ಯಂತರ ಜಾಮೀನು ನೀಡುವಂತೆ ದೆಹಲಿ ನ್ಯಾಯಾಲಯಕ್ಕೆ ಸುಪ್ರೀಂ ನಿರ್ದೇಶನ
ಅಸ್ಸಾಂ ಮತ್ತು ಉತ್ತರ ಪ್ರದೇಶದ ಲಕ್ನೋ ಮತ್ತು ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಅನೇಕ ಎಫ್‌ಐಆರ್‌ಗಳಲ್ಲಿ ಪರಿಹಾರ ಕೋರಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿತ್ತು
ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಅಸ್ಸಾಂ ಪೊಲೀಸರು ಬಂಧಿಸಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ (Supreme Court) ಗುರುವಾರ ದೆಹಲಿ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ, ದೆಹಲಿಯ ಕಾಂಪಿಟೆಂಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ, ಖೇರಾ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಖೇರಾ ಅವರು ಕಾಂಗ್ರೆಸ್ ಸರ್ವಸದಸ್ಯ ಅಧಿವೇಶನಕ್ಕಾಗಿ ರಾಯಪುರಕ್ಕೆ ತೆರಳುತ್ತಿದ್ದಾಗ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನದಿಂದ ಇಳಿಯಲು ಕೇಳಲಾಯಿತು. ಆನಂತರ ಅವರನ್ನು ದೆಹಲಿ ಪೊಲೀಸರ ಬಂಧಿಸಿದರು. ಮೋದಿ ವಿರುದ್ಧದ ಹೇಳಿಕೆಗಾಗಿ ಖೇರಾ ವಿರುದ್ಧ ಹಫ್ಲಾಂಗ್ ಪೊಲೀಸ್ ಠಾಣೆಯಲ್ಲಿ 153A (ಧಾರ್ಮಿಕ ಸಾಮರಸ್ಯವನ್ನು ಕದಡುವುದು) 153 ಬಿ (ಆರೋಪಗಳು, ರಾಷ್ಟ್ರೀಯ ಹಿತಾಸಕ್ತಿಗಳಿಗೆ ಹಾನಿಯುಂಟುಮಾಡುವ ಆರೋಪಗಳು), 500 (ಮಾನಹಾನಿಗಾಗಿ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಸ್ಸಾಂ ಮತ್ತು ಉತ್ತರ ಪ್ರದೇಶದ ಲಕ್ನೋ ಮತ್ತು ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಅನೇಕ ಎಫ್‌ಐಆರ್‌ಗಳಲ್ಲಿ ಪರಿಹಾರ ಕೋರಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿತ್ತು .ಖೇರಾ ಇತ್ತೀಚೆಗೆ ಉದ್ಯಮಿ ಗೌತಮ್ ಅದಾನಿ ವಿರುದ್ಧ ಟೀಕಾ ಪ್ರಹಾರ ಮಾಡುವಾಗ ಮೋದಿ ಹೆಸರಿನೊಂದಿಗೆ ಅದಾನಿ ಹೆಸರು ಸೇರಿಸಿ ವ್ಯಂಗ್ಯವಾಡಿದ್ದರು. ಆದಾಗ್ಯೂ, ಇದು ಬಾಯ್ತಪ್ಪಿನಿಂದ ಆಗಿದ್ದು ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬಾರದು ಎಂದು ಖೇರಾ ಹೇಳಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾರನ್ನು ಇಂಡಿಗೊ ವಿಮಾನದಿಂದ ಇಳಿಸಿದ ಪೊಲೀಸ್
ಖೇರಾ ಅವರ ಪಕ್ಷದ ಸಹೋದ್ಯೋಗಿ ಮತ್ತು ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಪತ್ರಿಕಾಗೋಷ್ಠಿಯಲ್ಲಿ ಬಳಸಿದ ಭಾಷೆ ತಪ್ಪಾಗಿದೆ. ಆದರೆ ನಾವು ಉದ್ದೇಶ ಪೂರ್ವಕ ಹೇಳಿದ್ದಲ್ಲ ಎಂದು ಎಂದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲದೆ, ಅರ್ಜಿದಾರರು ಬೇಷರತ್ ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ.
“ಅವರು (ಖೇರಾ) ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆಗಳನ್ನು ನೀಡಿದ್ದಾರೆ, ಅವರು ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಾಗದ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ.ಆದರೆ ನಾನು ವೈಯಕ್ತಿಕವಾಗಿ ಅದನ್ನು ಸಮರ್ಥಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ವಿವಿಧ ರಾಜ್ಯಗಳಲ್ಲಿನ ಬಹು ಎಫ್‌ಐಆರ್‌ಗಳು ಉದ್ದೇಶಪೂರ್ವಕ ಕಿರುಕುಳ ಎಂದು ವಾದಿಸಿದ ಸಿಂಘ್ವಿ ಮತ್ತು ಎಲ್ಲಾ ಎಫ್‌ಐಆರ್‌ಗಳನ್ನು ಒಂದು ನ್ಯಾಯವ್ಯಾಪ್ತಿಗೆ ಕ್ರೋಢೀಕರಿಸುವಂತೆ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ.
ನಿಮ್ಮ ಕಕ್ಷಿದಾರರಿಗೆ ರಕ್ಷಣೆ ನೀಡಲಾಗಿದೆ, ಅವರು ಮಾತುಗಳನ್ನು ಹಿಡಿತದಲ್ಲಿರಿಸಬೇಕು ಎಂದು ಚಂದ್ರಚೂಡ್ ಸಿಂಘ್ವಿ ಅವರಿಗೆ ಹೇಳಿದ್ದಾರೆ. ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸುವಂತೆ ಕೋರಿ ಸಲ್ಲಿಸಿದ ಮನವಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ