ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಅಕ್ರಮವಾಗಿ ದತ್ತು ಪಡೆಯುವುದನ್ನು ನಿಲ್ಲಿಸಿ: ಸುಪ್ರೀಂಕೋರ್ಟ್

Supreme Court: ಜೆಜೆ ಕಾಯ್ದೆ 2015 (Juvenile Justice (Care and Protection of Children) ನಿಬಂಧನೆಗಳಿಗೆ ವಿರುದ್ಧವಾಗಿ ಯಾವುದೇ ಪೀಡಿತ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಅನುಮತಿಸಬಾರದು. ಅನಾಥ ಮಕ್ಕಳನ್ನು ದತ್ತು ಪಡೆಯಲು ವ್ಯಕ್ತಿಗಳಿಗೆ ಆಹ್ವಾನ ನೀಡುವುದು ಕಾನೂನಿಗೆ ವಿರುದ್ಧವಾಗಿದೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಅಕ್ರಮವಾಗಿ ದತ್ತು ಪಡೆಯುವುದನ್ನು ನಿಲ್ಲಿಸಿ: ಸುಪ್ರೀಂಕೋರ್ಟ್
ಸುಪ್ರೀಂ​ ಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 08, 2021 | 1:58 PM

ದೆಹಲಿ: ಕೊವಿಡ್-19ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ಅಕ್ರಮವಾಗಿ ದತ್ತು ತೆಗೆದುಕೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕಾನೂನುಬಾಹಿರವಾಗಿ ದತ್ತು ತೆಗೆದುಕೊಳ್ಳುವ ಎನ್‌ಜಿಒಗಳ ವಿರುದ್ಧ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. “ಜೆಜೆ ಕಾಯ್ದೆ 2015 (Juvenile Justice (Care and Protection of Children) ನಿಬಂಧನೆಗಳಿಗೆ ವಿರುದ್ಧವಾಗಿ ಯಾವುದೇ ಪೀಡಿತ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಅನುಮತಿಸಬಾರದು. ಅನಾಥ ಮಕ್ಕಳನ್ನು ದತ್ತು ಪಡೆಯಲು ವ್ಯಕ್ತಿಗಳಿಗೆ ಆಹ್ವಾನ ನೀಡುವುದು ಕಾನೂನಿಗೆ ವಿರುದ್ಧವಾಗಿದೆ. ಏಕೆಂದರೆ CARA (Central Adoption Resource Authority -ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ)ದ ಪಾಲ್ಗೊಳ್ಳುವಿಕೆ ಇಲ್ಲದೆ ಮಗುವನ್ನು ದತ್ತು ತೆಗೆದುಕೊಳ್ಳಲು ಅನುಮತಿಸಲಾಗುವುದಿಲ್ಲ. ಈ ಕಾನೂನುಬಾಹಿರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಏಜೆನ್ಸಿಗಳು, ವ್ಯಕ್ತಿಗಳ ವಿರುದ್ಧ ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಯಾವುದೇ ಎನ್‌ಜಿಒ, ಪೀಡಿತ ಮಕ್ಕಳ ಗುರುತನ್ನು ಬಹಿರಂಗಪಡಿಸುವ ಮೂಲಕ ಮತ್ತು ಆಸಕ್ತರನ್ನು ದತ್ತು ತೆಗೆದುಕೊಳ್ಳಲು ಆಹ್ವಾನಿಸುವುದು, ಹಣ ಸಂಗ್ರಹಿಸುವುದನ್ನು ತಡೆಯಲು ರಾಜ್ಯ ಸರ್ಕಾರಗಳು ಮತ್ತುಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಪೀಠ ಹೇಳಿದೆ.  ಕೊವಿಡ್ ಪೀಡಿತ ಮಕ್ಕಳ ಸಮಸ್ಯೆಗಳನ್ನು ಎದುರಿಸಲು ನ್ಯಾಯಾಲಯವು ಪ್ರಾರಂಭಿಸಿದ ಸುಮೋಟೋ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿದೆ.

ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ರಾಷ್ಟ್ರೀಯ ಮಂಡಳಿಗೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರು ಕೆಲವು ನಿರ್ಲಜ್ಜ ಸಂಸ್ಥೆಗಳು ಮತ್ತು ವ್ಯಕ್ತಿಗಳು ಅಕ್ರಮ ದತ್ತು ಸ್ವೀಕಾರದಲ್ಲಿ ತೊಡಗಿದ್ದಾರೆ. ಹಣವನ್ನು ಕೋರಿ ಸಾರ್ವಜನಿಕ ಜಾಹೀರಾತುಗಳನ್ನು ಪ್ರಕಟಿಸುತ್ತಿದ್ದಾರೆ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಪೀಡಿತ ಮಕ್ಕಳನ್ನು ಅಕ್ರಮವಾಗಿ ದತ್ತು ತೆಗೆದುಕೊಳ್ಳುವ ಬಗ್ಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಮತ್ತು ಶ್ರೀಮತಿ ಶೋಭಾ ಗುಪ್ತಾ ಅವರ ಕಾಳಜಿಯನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

30,000 ಕ್ಕೂ ಹೆಚ್ಚು ಮಕ್ಕಳು ಕನಿಷ್ಠ ಒಬ್ಬ ಪೋಷಕರನ್ನು ಕಳೆದುಕೊಂಡಿದ್ದಾರೆ ಜೂನ್ 6 ರವರೆಗೆ ಎನ್‌ಸಿಪಿಸಿಆರ್ (NCPCR) ಸಂಗ್ರಹಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಅನಾಥರಾಗಿದ್ದಾರೆ ಅಥವಾ ಒಂದು ಪೋಷಕರನ್ನು ಕಳೆದುಕೊಂಡಿದ್ದಾರೆ.ಇನ್ನು ಕೆಲವರನ್ನು ಕೊವಿಡ್ ಕಾರಣದಿಂದಾಗಿ ತೊರೆಯಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. (3,621 ಅನಾಥರು, 26,176 ಮಂದಿ ಒಬ್ಬ ಪೋಷಕರನ್ನು ಕಳೆದುಕೊಂಡಿದ್ದಾರೆ ಮತ್ತು 274 ಮಕ್ಕಳನ್ನು ತ್ಯಜಿಸಲಾಗಿದೆ).

ಸಾಂಕ್ರಾಮಿಕ ರೋಗದಲ್ಲಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಮಾಹಿತಿಯನ್ನು 2020 ರ ಮಾರ್ಚ್‌ನಿಂದ ಎನ್‌ಸಿಪಿಸಿಆರ್‌ನ ರಾಷ್ಟ್ರೀಯ ಪೋರ್ಟಲ್‌ “ಬಾಲ್ ಸ್ವರಾಜ್”ನಲ್ಲಿ ಅಪ್‌ಲೋಡ್ ಮಾಡುವಂತೆ ನ್ಯಾಯಾಲಯ ಈ ಹಿಂದೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು.

ವಕೀಲೆ ಶೋಭಾ ಗುಪ್ತಾ ಅವರು ‘ವಿ ದಿ ವುಮೆನ್ ಆಫ್ ಇಂಡಿಯಾ’ ಎಂಬ ಸಂಘಟನೆಯ ಪರವಾಗಿ ಸುಮೊಟೊ ಪ್ರಕರಣದಲ್ಲಿ ಅರ್ಜಿಯನ್ನು ಸಲ್ಲಿಸಿದರು. ಸಾರ್ವಜನಿಕ ಜಾಹೀರಾತುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಲ್ಲಿ ಅನಾಥ ಮಕ್ಕಳನ್ನು ದತ್ತು ಪಡೆಯಲು ಜನರನ್ನು ಆಹ್ವಾನಿಸಿದ್ದಾರೆ. ಅವುಗಳಲ್ಲಿ ಹೆಚ್ಚಿನವು ನಕಲಿ ಮತ್ತು ಯಾವುದೇ ಸಂದರ್ಭದಲ್ಲಿ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರದ (CARA) ಒಳಗೊಳ್ಳುವಿಕೆ ಇಲ್ಲದೆ ಯಾವುದೇ ದತ್ತು ಸ್ವೀಕಾರಕ್ಕೆ ಅನುಮತಿ ಇಲ್ಲ ಎಂದು ಶೋಭಾ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪೋಸ್ಟ್ ಗಳ ಪ್ರಸಾರವನ್ನು ತಡೆಯಲು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೂಡಲೇ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಅಂತಹ ಪೋಸ್ಟ್ ಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ಜೆಜೆ ಕಾಯ್ದೆ, 2015 ರ ಸೆಕ್ಷನ್ 108 ಅನ್ನು ಅವಲಂಬಿಸಿ ಪೀಡಿತ ಮಕ್ಕಳಿಗೆ ಅನುಕೂಲವಾಗುವಂತಹ ಕಾರ್ಯಾಚರಣೆಯಲ್ಲಿರುವ ಯೋಜನೆಗಳಿಗೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಶೋಭಾ ಗುಪ್ತಾ ಹೇಳಿದ್ದಾರೆ.

ಬಾಲಾಪರಾಧಿ ನ್ಯಾಯ ಕಾಯ್ದೆ ಮತ್ತು ಕಲ್ಯಾಣ ಯೋಜನೆಗಳ ನಿಬಂಧನೆಗಳಿಗೆ ವ್ಯಾಪಕ ಪ್ರಚಾರ ನೀಡಿ ಬಾಲಾಪರಾಧಿ ನ್ಯಾಯ ಕಾಯ್ದೆ 2015 ಮತ್ತು ಕಾಯಿದೆಯಡಿ ಘೋಷಿಸಲಾದ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ ಎಂದು ಗಮನಿಸಿದ ನ್ಯಾಯಾಲಯ, ಇದಕ್ಕೆ ವ್ಯಾಪಕ ಪ್ರಚಾರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತು.

ಜೆಜೆ ಕಾಯ್ದೆ, 2015 ರ ಸೆಕ್ಷನ್ 108ರ ನಿಬಂಧನೆಗಳನ್ನು ಟೆಲಿವಿಷನ್, ರೇಡಿಯೋ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಮಾಧ್ಯಮಗಳ ಮೂಲಕ ನಿಯಮಿತವಾಗಿ ವ್ಯಾಪಕ ಪ್ರಚಾರವನ್ನು ನೀಡುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಖಾತ್ರಿ ಪಡಿಸಬೇಕು. ಅಂತಹ ನಿಬಂಧನೆಗಳ ಬಗ್ಗೆ ಸಾರ್ವಜನಿಕರಿಗೆ, ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಅಥವಾ ಪಾಲಕರಿಗೆ ಅರಿವು ಮೂಡಿಸಬೇಕು. ಸರ್ಕಾರಗಳು ಘೋಷಿಸುವ ಹಲವಾರು ಪ್ರಯೋಜನಗಳಿಗೆ ತಮ್ಮ ಹಕ್ಕುಗಳ ಬಗ್ಗೆ ಮತ್ತು ಅರ್ಹತೆಯ ಬಗ್ಗೆ ಬಹುಪಾಲು ಜನರಿಗೆ ತಿಳಿದಿಲ್ಲ ಎಂಬುದು ನಿಜ.

ಜೆಜೆಆಕ್ಟ್, 2015 ರ ನಿಬಂಧನೆಗಳಿಗೆ ಮಾತ್ರವಲ್ಲದೆ ಕೇಂದ್ರ ಸರ್ಕಾರ,ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅನಾಥರಾದ ಮಕ್ಕಳಿಗೆ ಅನುಕೂಲವಾಗುವಂತೆ ಘೋಷಿಸಿರುವ ಹಲವಾರು ಯೋಜನೆಗಳಿಗೆ ವ್ಯಾಪಕ ಪ್ರಚಾರ ನೀಡುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

ಇದನ್ನೂ ಓದಿ:  ಕೊರೊನಾ ಮಧ್ಯೆ ಶಾಲೆ ಆರಂಭ: ದತ್ತು ಪಡೆದ ಶಾಲೆಗಳಲ್ಲಿ ಆದ ಬದಲಾವಣೆಗಳೇನು ಗೊತ್ತಾ?

(Supreme Court directed State Governments act against NGO which are induge in illegal adoption of children orphaned by COVID-19)

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು