AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮವನ್ನು ಲೆಕ್ಕಿಸದೆ ದ್ವೇಷ ಭಾಷಣಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಎಲ್ಲಾ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ದೇಶಾದ್ಯಂತ ದ್ವೇಷದ ಅಪರಾಧಗಳ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

ಧರ್ಮವನ್ನು ಲೆಕ್ಕಿಸದೆ ದ್ವೇಷ ಭಾಷಣಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಎಲ್ಲಾ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:Apr 28, 2023 | 5:47 PM

Share

ದೆಹಲಿ: ಯಾವುದೇ ದೂರು ನೀಡದಿದ್ದರೂ ದ್ವೇಷದ ಭಾಷಣದ (Hate Speech) ಮೇಲೆ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸುವ 2022 ರ ಆದೇಶದ ವ್ಯಾಪ್ತಿಯನ್ನು ಸುಪ್ರೀಂಕೋರ್ಟ್ (Supreme Court) ಇಂದು ವಿಸ್ತರಿಸಿದೆ. ಅದೇ ವೇಳೆ ಪ್ರಕರಣಗಳನ್ನು ದಾಖಲಿಸುವಲ್ಲಿ ವಿಳಂಬವನ್ನು ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಿದೆ. ಇದನ್ನು ಗಂಭೀರ ಅಪರಾಧ ಎಂದು ಬಣ್ಣಿಸಿದ ಸುಪ್ರೀಂಕೋರ್ಟ್, ದ್ವೇಷದ ಭಾಷಣವು ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ದೇಶಾದ್ಯಂತ ದ್ವೇಷದ ಅಪರಾಧಗಳ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

ದ್ವೇಷ ಭಾಷಣ ಅಪರಾಧಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ದ್ವೇಷದ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಪೀಠವು ಈ ಹಿಂದೆ ಮಹಾರಾಷ್ಟ್ರ ರಾಜ್ಯದಿಂದ ಪ್ರತಿಕ್ರಿಯೆ ಕೇಳಿತ್ತು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಶಾಲಾ ಶಿಕ್ಷಕರ ನೇಮಕಾತಿ ಹಗರಣ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ಮರು ನಿಯೋಜಿಸುವಂತೆ ಸುಪ್ರೀಂ ಸೂಚನೆ

ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ಅಅಕ್ಟೋಬರ್ 21, 2022 ರಂದು ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಉತ್ತರಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯಿಸಲಾಗಿತ್ತು.

ಯಾರೇ ಈ ರೀತಿ ಹೇಳಲಿ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತೇವೆ ಇದರಿಂದಾಗಿ ಪೀಠಿಕೆಯಿಂದ ಕಲ್ಪಿಸಲ್ಪಟ್ಟಿರುವ ಭಾರತದ ಜಾತ್ಯತೀತ ಪಾತ್ರವನ್ನು ಸಂರಕ್ಷಿಸಲಾಗಿದ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Fri, 28 April 23

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು