AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ; ತರುಣ್ ತೇಜ್‌ಪಾಲ್‌ಗೆ 2 ವಾರಗಳೊಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶ

ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ‘ತೆಹಲ್ಕಾ’ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಎರಡು ವಾರಗಳ ಒಳಗಾಗಿ ಶರಣಾಗಬೇಕೆಂದು ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ. 2013ರಲ್ಲಿ ತಮ್ಮ ಸಹೋದ್ಯೋಗಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 2021ರಲ್ಲಿ ನೀಡಲಾಗಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿದ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು, ಆಗಸ್ಟ್ 6ರಂದು ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ತೀರ್ಪು ನೀಡಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಅತ್ಯಾಚಾರ ಪ್ರಕರಣ; ತರುಣ್ ತೇಜ್‌ಪಾಲ್‌ಗೆ 2 ವಾರಗಳೊಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶ
Tarun Tejpal Image Credit source: x
ಸುಷ್ಮಾ ಚಕ್ರೆ
|

Updated on: Aug 25, 2026 | 4:19 PM

Share

ನವದೆಹಲಿ, ಆಗಸ್ಟ್ 25: 2013ರ ಗೋವಾದ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ (Tarun Tejpal) ಅವರಿಗೆ 2 ವಾರಗಳ ಒಳಗಾಗಿ ಶರಣಾಗುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಶರಣಾಗತಿಯಿಂದ ವಿನಾಯಿತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ತರುಣ್ ತೇಜ್‌ಪಾಲ್ ಅವರು ಶರಣಾಗಿ, ಅದಕ್ಕೆ ಸಂಬಂಧಿಸಿದ ಶರಣಾಗತಿ ಪ್ರಮಾಣಪತ್ರವನ್ನು ಸಲ್ಲಿಸಿದ ನಂತರವಷ್ಟೇ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಪೀಠವು ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ನಿಗದಿಪಡಿಸಿದೆ.

ಸುಪ್ರೀಂ ಕೋರ್ಟ್ ನಿಯಮಗಳ ಪ್ರಕಾರ, ಶಿಕ್ಷೆಯ ಆದೇಶವನ್ನು ಸವಾಲು ಮಾಡುವ ಮೊದಲು ವ್ಯಕ್ತಿಯು ಶರಣಾಗುವುದು ಕಡ್ಡಾಯವಾಗಿದೆ. ನಿಯಮಗಳ ಪ್ರಕಾರ ಶರಣಾಗತಿಯ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಅಥವಾ, ಇದರ ಬದಲಾಗಿ ಶರಣಾಗತಿಯಿಂದ ವಿನಾಯಿತಿ ಕೋರಿ ಅರ್ಜಿಯನ್ನು ಮೇಲ್ಮನವಿಯೊಂದಿಗೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Tarun Tejpal: ತರುಣ್ ತೇಜ್‌ಪಾಲ್‌ಗೆ ಭಾರಿ ಆಘಾತ: 2013ರ ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ದೋಷಿ, ಹೈಕೋರ್ಟ್ ತೀರ್ಪು

ವಿಚಾರಣೆಯ ಸಮಯದಲ್ಲಿ, ಗೋವಾ ಸರ್ಕಾರದ ಪರವಾಗಿ ಹಾಜರಾದ ತುಷಾರ್ ಮೆಹ್ತಾ ಅವರು, ತರುಣ್ ತೇಜ್‌ಪಾಲ್ ಮೊದಲು ಶರಣಾಗತಿಯ ಪ್ರಮಾಣಪತ್ರವನ್ನು ಸಲ್ಲಿಸಿದರೆ ಮಾತ್ರ ಅವರ ಮೇಲ್ಮನವಿಯ ವಿಚಾರಣೆ ನಡೆಸಬಹುದು ಎಂದು ಹೇಳಿದರು. ಇಲ್ಲದಿದ್ದರೆ, ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಅವರು ಸುಪ್ರೀಂ ಕೋರ್ಟ್‌ನಿಂದ ಶರಣಾಗತಿಯಿಂದ ವಿನಾಯಿತಿ ಪಡೆಯಬೇಕಾಗುತ್ತದೆ ಎಂದು ಮೆಹ್ತಾ ಹೇಳಿದರು.

ಇದನ್ನು ವಿರೋಧಿಸಿದ ತೇಜ್‌ಪಾಲ್ ಪರ ವಕೀಲ ಕಪಿಲ್ ಸಿಬಲ್, ಬಾಂಬೆ ಹೈಕೋರ್ಟ್ ಈಗಾಗಲೇ ತರುಣ್ ತೇಜ್‌ಪಾಲ್ ಅವರ ಶಿಕ್ಷೆಗೆ ತಡೆ ನೀಡಿದೆ. ಆದ್ದರಿಂದ, ಅವರನ್ನು ಮತ್ತೆ ಶರಣಾಗುವಂತೆ ಕೇಳುವುದು ಸೂಕ್ತವಲ್ಲ ಎಂದು ವಾದಿಸಿದರು.

ಏನಿದು ಪ್ರಕರಣ?:

2013ರ ನವೆಂಬರ್ 7 ಮತ್ತು 8ರಂದು ಗೋವಾದ ಪಣಜಿಯಲ್ಲಿ ನಡೆದ ತೆಹೆಲ್ಕಾ ಮ್ಯಾಗಜಿನ್​ನ ಅಧಿಕೃತ ಕಾರ್ಯಕ್ರಮವೊಂದರಲ್ಲಿ, ಹೋಟೆಲ್ ಲಿಫ್ಟ್ ಒಳಗೆ ಆಗ ತೆಹಲ್ಕಾದ ಸಂಪಾದಕರಾಗಿದ್ದ ತರುಣ್ ತೇಜ್‌ಪಾಲ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳಾ ಪತ್ರಕರ್ತೆಯೊಬ್ಬರು ಆರೋಪಿಸಿದ್ದರು. ಆ ಆರೋಪಗಳ ಮೇಲೆ 2013ರ ನವೆಂಬರ್ 30ರಂದು ತರುಣ್ ತೇಜ್‌ಪಾಲ್ ಅವರನ್ನು ಬಂಧಿಸಲಾಯಿತು.

ಇದನ್ನೂ ಓದಿ: 2013ರ ಅತ್ಯಾಚಾರ ಪ್ರಕರಣ; ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ

2017ರ ಸೆಪ್ಟೆಂಬರ್ 29ರಂದು ಅವರ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕಾನೂನುಬಾಹಿರ ಬಂಧನ ಸೇರಿದಂತೆ ಭಾರತೀಯ ದಂಡ ಸಂಹಿತೆಯ (IPC) ವಿವಿಧ ವಿಭಾಗಗಳ ಅಡಿಯಲ್ಲಿ ದೋಷಾರೋಪಣೆ ಹೊರಿಸಲಾಯಿತು. ಆದರೆ, ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು. 2021ರ ಮೇ ತಿಂಗಳಲ್ಲಿ ಗೋವಾ ಸತ್ರ ನ್ಯಾಯಾಲಯವು ಪ್ರಾಸಿಕ್ಯೂಷನ್ ತನ್ನ ಪ್ರಕರಣವನ್ನು ಸಾಬೀತುಪಡಿಸಲು ವಿಫಲವಾಗಿದೆ ಎಂದು ಹೇಳಿ ತರುಣ್ ತೇಜ್‌ಪಾಲ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತು. ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಗೋವಾ ಸರ್ಕಾರವು ಬಾಂಬೆ ಹೈಕೋರ್ಟ್‌ನಲ್ಲಿ ಖುಲಾಸೆಯನ್ನು ಚಾಲೆಂಜ್ ಮಾಡಿತ್ತು.

2021ರಲ್ಲಿ ಗೋವಾ ಸತ್ರ ನ್ಯಾಯಾಲಯವು ನೀಡಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿ, ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ಆಗಸ್ಟ್ 6 ರಂದು ತೀರ್ಪು ನೀಡಿತ್ತು. ಬಾಂಬೆ ಹೈಕೋರ್ಟ್‌ನ ಗೋವಾ ಪೀಠದ ಈ ತೀರ್ಪನ್ನು ಪ್ರಶ್ನಿಸಿ ತರುಣ್ ತೇಜ್‌ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ