ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ 6 ವಾರದಲ್ಲಿ ಮಾರ್ಗಸೂಚಿ ರೂಪಿಸಿ, ಪರಿಹಾರದ ಮೊತ್ತ ನಿರ್ಧರಿಸಬೇಕು – ಸುಪ್ರೀಂಕೋರ್ಟ್​

ಮೃತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಅದರ ಮೊತ್ತವನ್ನು ನಿರ್ಧರಿಸುವುದು ಸರ್ಕಾರ, NDMA ವಿವೇಚನೆಗೆ ಬಿಟ್ಟದ್ದು. ಆದರೆ, ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಆ ಸಂಬಂಧ ಇನ್ನು ಆರು‌ ವಾರಗಳಲ್ಲಿ ಮಾರ್ಗಸೂಚಿ ರೂಪಿಸಬೇಕು: ಸರ್ವೋಚ್ಛ ನ್ಯಾಯಾಲಯ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ 6 ವಾರದಲ್ಲಿ ಮಾರ್ಗಸೂಚಿ ರೂಪಿಸಿ, ಪರಿಹಾರದ ಮೊತ್ತ ನಿರ್ಧರಿಸಬೇಕು - ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್
Follow us
TV9 Web
| Updated By: Skanda

Updated on:Jun 30, 2021 | 11:59 AM

ದೆಹಲಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಎಷ್ಟು ನೀಡಬೇಕು ಎನ್ನುವುದರ ಬಗ್ಗೆ ಪರಿಹಾರ ಮೊತ್ತವನ್ನು ಸರ್ಕಾರ ನಿರ್ಧರಿಸಲಿ ಎಂದು ಸರ್ವೋಚ್ಛ ನ್ಯಾಯಾಲಯದ ಜಸ್ಟೀಸ್ ಅಶೋಕ್ ಭೂಷಣ್ ಪೀಠ ಮಹತ್ತರ ಆದೇಶ ನೀಡಿದೆ. ಪರಿಹಾರದ ಬಗ್ಗೆ ಕರ್ತವ್ಯ ನಿರ್ವಹಣೆಯಲ್ಲಿ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್​ಡಿಎಂಎ) ವಿಫಲವಾಗಿದೆ. ಮಾರ್ಗಸೂಚಿ ರೂಪಿಸದೇ ಕರ್ತವ್ಯ ನಿರ್ವಹಿಸುವಲ್ಲಿ ಸರ್ಕಾರ ವಿಫಲಗೊಂಡಿದೆ ಎಂದು ಚಾಟಿ ಬೀಸಿರುವ ಸರ್ವೋಚ್ಛ ನ್ಯಾಯಾಲಯ, ಮುಂದಿನ ಆರು ವಾರದ ಒಳಗಾಗಿ ನಿರ್ದಿಷ್ಟ ಮಾರ್ಗಸೂಚಿ ರೂಪಿಸುವಂತೆ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಗೆ ಸೂಚಿಸಿದೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಅದರ ಮೊತ್ತವನ್ನು ನಿರ್ಧರಿಸುವುದು ಸರ್ಕಾರ, NDMA ವಿವೇಚನೆಗೆ ಬಿಟ್ಟದ್ದು. ಆದರೆ, ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಆ ಸಂಬಂಧ ಇನ್ನು ಆರು‌ ವಾರದಲ್ಲಿ ಮಾರ್ಗಸೂಚಿ ರೂಪಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ಜಸ್ಟೀಸ್ ಅಶೋಕ್ ಭೂಷಣ್ ಪೀಠ ಆದೇಶ ನೀಡಿದೆ.

ಕೊರೊನಾದಿಂದ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರದ ಅರ್ಜಿ ನೀಡಬೇಕು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆದಿದ್ದು, ಪರಿಹಾರ ನೀಡಲು ಕೇಂದ್ರ, ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲಾಗಿದೆ. ಆದರೆ, NDRF, SDRF ನಿಧಿಯಿಂದ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ನಿನ್ನೆ (ಜೂನ್​ 29) ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ರಾಷ್ಟ್ರೀಯ ಪೋರ್ಟಲ್ ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೊಚ್ಛ ನ್ಯಾಯಾಲಯ ಮಹತ್ತರ ಆದೇಶ ನೀಡಿತ್ತು. ಜುಲೈ 31ರ ಒಳಗೆ ಕೇಂದ್ರ ಸರ್ಕಾರ ಪೋರ್ಟಲ್ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು. ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ರಾಷ್ಟ್ರೀಯ ಪೋರ್ಟಲ್ ಮಾಡಬೇಕು. ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳು ಒಂದು ರಾಷ್ಟ್ರ, ಒಂದು ಪಡಿತರ ಚೀಟಿ (ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಜಾರಿಗೊಳಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್​ ನೀಡಿರುವ ಆದೇಶ ಇದಾಗಿದ್ದು, ಆದೇಶದನ್ವಯ ಜುಲೈ 31 ರ ಒಳಗೆ ಎಲ್ಲಾ ರಾಜ್ಯಗಳಲ್ಲಿ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ. ಅಲ್ಲದೇ, ಇದಕ್ಕೆ ಕೇಂದ್ರ ಸರ್ಕಾರ ಆಹಾರ ಧಾನ್ಯ ಹಂಚಿಕೆ ಮಾಡಬೇಕು ಎನ್ನುವುದನ್ನೂ ಸೂಚಿಸಲಾಗಿದೆ. ಇನ್ನು ಸಮುದಾಯ ಕಿಚನ್ ಸೌಲಭ್ಯದ ಬಗ್ಗೆ ಅಭಿಪ್ರಾಯ ತಿಳಿಸಿರುವ ಸರ್ವೋಚ್ಛ ನ್ಯಾಯಾಲಯ ಕೊರೊನಾ ಇರುವವರೆಗೂ ಸಮುದಾಯ ಕಿಚನ್ ಸೌಲಭ್ಯ ಮುಂದುವರಿಸಬೇಕು ಎಂಬ ಆದೇಶ ನೀಡಿದೆ.

ಇದನ್ನೂ ಓದಿ: ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​ 

ಕೊವಿಡ್ ನಿರ್ವಹಣೆಯ ಸ್ವಯಂ ಪ್ರೇರಿತ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್​

Published On - 11:37 am, Wed, 30 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್