AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿರನ್ನು ವಜಾ ಮಾಡಲು ವಿಚಾರಣೆ ಪ್ರಕ್ರಿಯೆ ಕಡ್ಡಾಯವಲ್ಲ: ಸುಪ್ರೀಂಕೋರ್ಟ್

ಕಾರ್ಮಿಕನನ್ನು ಕೆಲಸದಿಂದ ವಜಾ ಅಥವಾ ಕರ್ತವ್ಯದಿಂದ ಬಿಡುಗಡೆ ಮಾಡುವ ಮೊದಲು ವಿಚಾರಣೆ ನಡೆಸಲು ಸಾಧ್ಯವಾಗದಿದ್ದರೂ ಉದ್ಯೋಗದಾತರು ತಮ್ಮ ನಿರ್ಧಾರಕ್ಕೆ ಪೂರಕವಾದ ಪುರಾವೆಗಳನ್ನು ಕಾರ್ಮಿಕ ನ್ಯಾಯಾಲಯಗಳಿಗೆ ಸಲ್ಲಿಸಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕಾರ್ಮಿರನ್ನು ವಜಾ ಮಾಡಲು ವಿಚಾರಣೆ ಪ್ರಕ್ರಿಯೆ ಕಡ್ಡಾಯವಲ್ಲ: ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
TV9 Web
| Edited By: |

Updated on:Apr 06, 2022 | 8:44 PM

Share

ದೆಹಲಿ: ವಿಚಾರಣೆ ನಡೆಸದೇ ಕಾರ್ಮಿಕನನ್ನು ಕೆಲಸದಿಂದ ವಜಾ ಮಾಡಿದರೂ, ಆಡಳಿತ ಮಂಡಳಿ ಅಥವಾ ಉದ್ಯೋಗದಾತರು ತಮ್ಮ ಕ್ರಮವನ್ನು ಕಾರ್ಮಿಕ ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯವಾದರೆ ಅಂಥ ಪ್ರಕರಣಗಳಲ್ಲಿ ನ್ಯಾಯಾಲಯಗಳು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕಾರ್ಮಿಕನನ್ನು ಕೆಲಸದಿಂದ ವಜಾ ಅಥವಾ ಕರ್ತವ್ಯದಿಂದ ಬಿಡುಗಡೆ ಮಾಡುವ ಮೊದಲು ವಿಚಾರಣೆ ನಡೆಸಲು ಸಾಧ್ಯವಾಗದಿದ್ದರೂ ಉದ್ಯೋಗದಾತರು ತಮ್ಮ ನಿರ್ಧಾರಕ್ಕೆ ಪೂರಕವಾದ ಪುರಾವೆಗಳನ್ನು ಕಾರ್ಮಿಕ ನ್ಯಾಯಾಲಯಗಳಿಗೆ ಸಲ್ಲಿಸಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಹರಿದ್ವಾರದ ಜೈ ಭಾರತ್ ಜೂನಿಯರ್ ಹೈಸ್ಕೂಲ್​ನ ಸಹಶಿಕ್ಷಕಿಯೊಬ್ಬರು ಸತತವಾಗಿ ಕರ್ತವ್ಯಕ್ಕೆ ಗೈರುಹಾಜರಾದ ಕಾರಣ ಆಡಳಿತ ಮಂಡಳಿಯು ಅವರನ್ನು ಕೆಲಸದಿಂದ ವಜಾ ಮಾಡಿತ್ತು. ಬಳಿಕ, ಕೆಲಸದಿಂದ ವಜಾಗೊಂಡ ಶಿಕ್ಷಕಿಯ ವಿರುದ್ಧದ ಆರೋಪಕ್ಕೆ, ಶಾಲಾ ಆಡಳಿತ ಮಂಡಳಿಯ ಬಳಿ ಸೂಕ್ತ ಸಾಕ್ಷ್ಯಾಧಾರಗಳು ಇದ್ದುದರಿಂದ ಕಾರ್ಮಿಕ ನ್ಯಾಯಾಲಯವು ಸಹಶಿಕ್ಷಕಿಗೆ ಯಾವುದೇ ಪರಿಹಾರ ನೀಡುವಂತೆ ಶಾಲೆಗೆ ಆದೇಶಿಸಿರಲಿಲ್ಲ.

ಬಳಿಕ, ಕಾರ್ಮಿಕ ನ್ಯಾಯಾಲಯದ ತೀರ್ಪಿಗೆ ಪ್ರತಿಯಾಗಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿತ್ತು. ಕೆಲಸಗಾರನ ಅಮಾನತಿನಲ್ಲಿ ಯಾವುದೇ ತನಿಖೆ, ವಿಚಾರಣೆಗಳು ನಡೆದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು. ಹೈಕೋರ್ಟ್​ ತೀರ್ಪನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲಾಯಿತು.

ಈ ಅಹವಾಲಿನ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ನವೀನ್ ಸಿನ್ಹಾ ಹಾಗೂ ಇಂದು ಮಲ್ಹೋತ್ರಾ ನೇತೃತ್ವದ ನ್ಯಾಯಪೀಠವು ಕಾರ್ಮಿಕ ನ್ಯಾಯಾಲಯವು ಇಬ್ಬರು ಕಕ್ಷಿದಾರರಿಗೆ ತಮ್ಮ ಸಾಕ್ಷಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಮತ್ತು ವಿವರಿಸಲು ಪೂರ್ಣ ಅವಕಾಶವನ್ನು ನೀಡಿತ್ತು ಎಂದು ಅಭಿಪ್ರಾಯಪಟ್ಟಿತು. ಕಾರ್ಮಿರನ್ನು ವಜಾ ಮಾಡಲು ವಿಚಾರಣೆ ಪ್ರಕ್ರಿಯೆ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿ, ಅದಕ್ಕೆ ಪೂರಕವಾಗಿ ಹಿಂದಿನ ಕೆಲ ತೀರ್ಪುಗಳನ್ನೂ ಪ್ರಸ್ತಾಪಿಸಿತು.

ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ

Published On - 9:06 pm, Sun, 24 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ