ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ಎಲ್ಲ ಮರುಪರಿಶೀಲನಾ ಅರ್ಜಿಗಳು ವಜಾ
ದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಎಲ್ಲ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಛೇಂಬರ್ನಲ್ಲಿ ವಿಚಾರಣೆ ನಡೆಸಿ ಎಲ್ಲ 18 ಮರುಪರಿಶೀಲನಾ ಅರ್ಜಿಗಳನ್ನು ಸಿಜೆಐ ಎಸ್.ಎ.ಬೊಬ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಅಶೋಕ್‌ಭೂಷಣ್, ಅಬ್ದುಲ್ ನಜೀರ್, ಸಂಜೀವ್ ಖನ್ನಾ ಉಪಸ್ಥಿತರಿದ್ದರು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಬಹುದು ಎಂದು ನ.9ರಂದು ಸುಪ್ರೀಂಕೋರ್ಟ್ನ ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. […]
ದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಎಲ್ಲ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಛೇಂಬರ್ನಲ್ಲಿ ವಿಚಾರಣೆ ನಡೆಸಿ ಎಲ್ಲ 18 ಮರುಪರಿಶೀಲನಾ ಅರ್ಜಿಗಳನ್ನು ಸಿಜೆಐ ಎಸ್.ಎ.ಬೊಬ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಅಶೋಕ್‌ಭೂಷಣ್, ಅಬ್ದುಲ್ ನಜೀರ್, ಸಂಜೀವ್ ಖನ್ನಾ ಉಪಸ್ಥಿತರಿದ್ದರು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಬಹುದು ಎಂದು ನ.9ರಂದು ಸುಪ್ರೀಂಕೋರ್ಟ್ನ ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ತೀರ್ಪನ್ನು ಪುನರ್ ಪರಿಶೀಲನೆ ನಡೆಸಬೇಕೆಂದು 18 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು.
Published On - 4:35 pm, Thu, 12 December 19