ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ಎಲ್ಲ ಮರುಪರಿಶೀಲನಾ ಅರ್ಜಿಗಳು ವಜಾ

ದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಎಲ್ಲ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಛೇಂಬರ್​ನಲ್ಲಿ ವಿಚಾರಣೆ ನಡೆಸಿ ಎಲ್ಲ 18 ಮರುಪರಿಶೀಲನಾ ಅರ್ಜಿಗಳನ್ನು ಸಿಜೆಐ ಎಸ್​.ಎ.ಬೊಬ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಅಶೋಕ್‌ಭೂಷಣ್, ಅಬ್ದುಲ್ ನಜೀರ್, ಸಂಜೀವ್ ಖನ್ನಾ ಉಪಸ್ಥಿತರಿದ್ದರು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಬಹುದು ಎಂದು ನ.9ರಂದು ಸುಪ್ರೀಂಕೋರ್ಟ್​ನ ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. […]

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ಎಲ್ಲ ಮರುಪರಿಶೀಲನಾ ಅರ್ಜಿಗಳು ವಜಾ
ಸಾಧು ಶ್ರೀನಾಥ್​

Updated on: Dec 12, 2019 | 4:38 PM

ದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಎಲ್ಲ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಛೇಂಬರ್​ನಲ್ಲಿ ವಿಚಾರಣೆ ನಡೆಸಿ ಎಲ್ಲ 18 ಮರುಪರಿಶೀಲನಾ ಅರ್ಜಿಗಳನ್ನು ಸಿಜೆಐ ಎಸ್​.ಎ.ಬೊಬ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಚಂದ್ರಚೂಡ್, ಅಶೋಕ್‌ಭೂಷಣ್, ಅಬ್ದುಲ್ ನಜೀರ್, ಸಂಜೀವ್ ಖನ್ನಾ ಉಪಸ್ಥಿತರಿದ್ದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಬಹುದು ಎಂದು ನ.9ರಂದು ಸುಪ್ರೀಂಕೋರ್ಟ್​ನ ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ ಸರ್ವಾನುಮತದ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ತೀರ್ಪನ್ನು ಪುನರ್ ಪರಿಶೀಲನೆ ನಡೆಸಬೇಕೆಂದು 18 ಮರುಪರಿಶೀಲನಾ ಅರ್ಜಿಗಳು ಸಲ್ಲಿಕೆಯಾಗಿದ್ದವು.

Published On - 4:35 pm, Thu, 12 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us