AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ

ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎಂದು ಆರೋಪಿಸಲಾದ ಅಮರಾವತಿ ಭೂ ಹಗರಣದ ಪ್ರಕರಣ ವಿಚಾರಣೆ ಆಂಧ್ರಪ್ರದೇಶದ ಹೈಕೋರ್ಟ್​ ಮೆಟ್ಟಿಲೇರಿದೆ. ಆದರೆ ಇದರ ವಿಚಾರಣೆ ಸರಿಯಾಗಿ ಆಗುತ್ತಿಲ್ಲ ಎಂಬುದು ಈಗಿನ ಸಿಎಂ ಜಗನ್​ ಅವರ ಆರೋಪ.

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ
ಎನ್​.ವಿ.ರಮಣ ಮತ್ತು ಜಗನ್ ಮೋಹನ್​ ರೆಡ್ಡಿ
Lakshmi Hegde
|

Updated on: Mar 24, 2021 | 4:28 PM

Share

ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎನ್​.ವಿ.ರಮಣ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​​ ರೆಡ್ಡಿ ಅವರು ನೀಡಿದ್ದ ದೂರಿನ ಅರ್ಜಿಯನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ. ಈ ಹಿಂದೆ ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯ ನಾಯಮೂರ್ತಿಯೂ ಆಗಿದ್ದ ರಮಣ ಅವರು, ಈಗ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದಾರೆ. ಆದರೆ ಈಗಲೂ ಆಂಧ್ರಪ್ರದೇಶ ಸರ್ಕಾರವನ್ನು ಅಸ್ಥಿರಗೊಳಿಸಲು, ಇಲ್ಲಿನ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಜಗನ್​ ರೆಡ್ಡಿ ದೂರಿನಲ್ಲಿ ತಿಳಿಸಿದ್ದರು. ಇದು ಅಮಾರವತಿ ಭೂ ಹಗರಣಕ್ಕೆ ಸಂಬಂಧ ಪ್ರಕರಣವಾಗಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿದ್ದಾಗಿ ಸುಪ್ರೀಂಕೋರ್ಟ್​ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿಯವರ ದೂರಿನ ಬಗ್ಗೆ ಗೌಪ್ಯ ವಿಚಾರಣೆ ನಡೆಸಲಾಗಿದೆ. ಇಲ್ಲಿ ನಡೆದ ವಿಚಾರಣೆಗಳನ್ನು ಸಾರ್ವಜನಿಕವಾಗಿ ಬಹಿರಂಗ ಮಾಡಲು ಸಾಧ್ಯವಿಲ್ಲ. ಅರ್ಜಿಯಲ್ಲಿ ಉಲ್ಲೇಖವಾದ ವಿಚಾರಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಾಗಿದೆ. ಈ ಬಳಿಕವಷ್ಟೇ ದೂರಿನ ಅರ್ಜಿ ವಜಾಗೊಳಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಏನಿದು ದೂರು? ಪ್ರಕರಣ? ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ ಎಂದು ಆರೋಪಿಸಲಾದ ಅಮರಾವತಿ ಭೂ ಹಗರಣದ ಪ್ರಕರಣ ವಿಚಾರಣೆ ಆಂಧ್ರಪ್ರದೇಶದ ಹೈಕೋರ್ಟ್​ ಮೆಟ್ಟಿಲೇರಿದೆ. ಆದರೆ ಇದರ ವಿಚಾರಣೆ ಸರಿಯಾಗಿ ಆಗುತ್ತಿಲ್ಲ ಎಂಬುದು ಈಗಿನ ಸಿಎಂ ಜಗನ್​ ಅವರ ಆರೋಪ. ಎನ್​.ವಿ.ರಮಣ ಅವರು ಚಂದ್ರಬಾಬು ನಾಯ್ಡು ಅವರಿಗೆ ಆಪ್ತರಾಗಿದ್ದು, ಅಮರಾವತಿ ಭೂಹಗರಣ ವಿಚಾರಣೆ ಪಾರದರ್ಶಕವಾಗಿ ನಡೆಯಲು ಬಿಡುತ್ತಿಲ್ಲ. ಸುಪ್ರೀಂಕೋರ್ಟ್​​ನ ನ್ಯಾಯಮೂರ್ತಿಯಾಗಿದ್ದುಕೊಂಡು, ಆಂಧ್ರಪ್ರದೇಶ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರುಗಳ ಸಭೆಗಳ ಮೇಲೆ ಕೂಡ ಪ್ರಭಾವ ಬೀರುತ್ತಿದ್ದಾರೆ. ಈ ಮೂಲಕ ತಮಗೆ ಬೇಕಾದಂತೆ ಜಡ್ಜ್​​ಮೆಂಟ್​​ಗಳನ್ನು ಹೊರಗೆ ತರುತ್ತಿದ್ದಾರೆ ಎಂದು ಆರೋಪಿಸಿ ಜಗನ್​ 2020 ರ ಆಕ್ಟೋಬರ್​ 6ರಂದು ಸಿಜೆಐ ಬೋಬ್ಡೆ ಅವರಿಗೆ ಪತ್ರ ಬರೆದಿದ್ದರು. ಹೀಗೆ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಯೊಬ್ಬರ ವಿರುದ್ಧ ಸಿಎಂ, ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ದೇಶದ ನ್ಯಾಯಾಂಗ ಇತಿಹಾಸದಲ್ಲೇ ಮಹತ್ವದ ಬೆಳವಣಿಗೆಯಾಗಿತ್ತು.

ಸುಪ್ರೀಂಕೋರ್ಟ್​ನ ಮುಂದಿನ ಸಿಜೆಐ ರಮಣ? ಇನ್ನು ಎನ್​.ವಿ.ರಮಣ ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ. ಏಪ್ರಿಲ್​ 30ರಂದು ಬೋಬ್ಡೆ ನಿವೃತ್ತರಾಗಲಿದ್ದು, ತಮ್ಮ ಉತ್ತರಾಧಿಕಾರಿಯಾಗಿ ಎನ್​.ವಿ.ರಮಣ ಅವರ ಹೆಸರನ್ನೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇನ್ನು ಸುಪ್ರೀಂಕೋರ್ಟ್​ನಲ್ಲಿ ಬೋಬ್ಡೆಯವರನ್ನು ಹೊರತುಪಡಿಸಿದರೆ ಹಿರಿಯ ನ್ಯಾಯಮೂರ್ತಿಯಾಗಿ ಇದ್ದವರೇ ಎನ್​.ವಿ.ರಮಣ. ಇದೀಗ ಜಗನ್​ ಮಾಡಿದ್ದ ಆರೋಪದಿಂದಲೂ ಅವರಿಗೆ ಕ್ಲೀನ್​ಚಿಟ್​ ಸಿಕ್ಕಂತಾಗಿದೆ.

ಇದನ್ನೂ ಓದಿ:ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

 Andhra Pradesh Local Body Election Results: ಆಂಧ್ರ ನಗರಾಡಳಿತ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಜಗನ್ ಮೋಹನ್ ರೆಡ್ಡಿಯ ವೈಎಸ್​ಆರ್​ಸಿಪಿ ಪಕ್ಷ

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್