Bilkis Bano Case: ಅತ್ಯಾಚಾರ ಅಪರಾಧಿಗಳ ಬಿಡುಗಡೆ ಆದೇಶ ಮರುಪರಿಶೀಲಿಸುವಂತೆ ಕೋರಿ ಬಿಲ್ಕಿಸ್ ಬಾನು ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಬಿಲ್ಕಿಸ್ ಬಾನು (Bilkis Bano) ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಮರುಪರಿಶೀಲನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ. 2002 ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ, ಬಿಲ್ಕಿಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.

Bilkis Bano Case: ಅತ್ಯಾಚಾರ ಅಪರಾಧಿಗಳ ಬಿಡುಗಡೆ ಆದೇಶ ಮರುಪರಿಶೀಲಿಸುವಂತೆ ಕೋರಿ ಬಿಲ್ಕಿಸ್ ಬಾನು ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ
Bilkis Bano
Follow us
TV9 Web
| Updated By: ನಯನಾ ರಾಜೀವ್

Updated on:Dec 17, 2022 | 1:05 PM

ಬಿಲ್ಕಿಸ್ ಬಾನು (Bilkis Bano) ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಮರುಪರಿಶೀಲನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ. 2002 ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ, ಬಿಲ್ಕಿಸ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆಯ ಕುಟುಂಬ ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆದಾಗ್ಯೂ, ಗುಜರಾತ್ ಸರ್ಕಾರವು 15 ವರ್ಷಗಳ ಜೈಲುವಾಸದ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಗುಜರಾತ್ ಸರ್ಕಾರ ತನ್ನ ಕ್ಷಮಾದಾನ ನೀತಿಗೆ ಅನುಗುಣವಾಗಿ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಹೇಳಿದೆ. ಈ ವರ್ಷ ಆಗಸ್ಟ್ 15 ರಂದು ಈ ಅಪರಾಧಿಗಳು ಜೈಲಿನಿಂದ ಬಿಡುಗಡೆಯಾಗಿದ್ದರು. ಗೋಧ್ರಾ ಉಪ ಜೈಲಿನಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ.

ಮತ್ತಷ್ಟು ಓದಿ: Bilkis Bano case ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಎನ್​​ಜಿಒ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ, ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ಮೇ 13ರ ಆದೇಶವನ್ನು ಮರುಪರಿಶೀಲಿಸುವಂತೆ ಆಗ್ರಹ ಮಾಡಲಾಗಿದೆ. ಇದರಲ್ಲಿ 1992ರಲ್ಲಿ ಮಾಡಿದ ನಿಯಮಗಳೇ ಸಾಮೂಹಿಕ ಅತ್ಯಾಚಾರ ಅಪರಾಧಿಗಳ ಬಿಡುಗಡೆಗೆ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇದರ ಆಧಾರದ ಮೇಲೆ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗಲಭೆಯಿಂದ ಓಡಿಹೋಗುವಾಗ 21ರ ಹರೆಯದ ಬಿಲ್ಕಿಸ್ ಬಾನು ಆಗ ಐದು ತಿಂಗಳ ಗರ್ಭಿಣಿಯಾಗಿದ್ದಳು.ಆಕೆಯ ಮೇಲೆ ಸಾಮೂಹಿಕ ಅತ್ಯಾಚರ ನಡೆದಿದ್ದು ಆಕೆಯ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಲಾಗಿತ್ತು.

ಕೊಲೆಯಾದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು. ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಮಂದಿಯನ್ನುಆಗಸ್ಟ್ 15 ರಂದು ಗೋಧ್ರಾ ಉಪ-ಜೈಲಿನಿಂದ ಸನ್ನಡತೆ ಆಧಾರ ಮೇಲೆ ಬಂಧಮುಕ್ತಗೊಳಿಸಲಾಗಿತ್ತು. ಅವರು 15 ವರ್ಷಗಳಿಗೂ ಹೆಚ್ಚು ಜೈಲು ವಾಸವನ್ನು ಪೂರ್ಣಗೊಳಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Sat, 17 December 22

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು