ಮದ್ರಾಸ್ ಹೈಕೋರ್ಟ್‌ನಲ್ಲಿರುವ ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್

ಆಶ್ರಮಕ್ಕೆ ಸೇರಿದಾಗ ಅವರಿಬ್ಬರಿಗೂ 27 ಮತ್ತು 24 ವರ್ಷ. ಹೆಣ್ಣುಮಕ್ಕಳಿಬ್ಬರೂ ಅಪ್ರಾಪ್ತ ವಯಸ್ಸಿನವರಾಗಿರಲಿಲ್ಲ. ಅವರು ಹೈಕೋರ್ಟಿಗೆ ಹಾಜರಾಗುವ ಮೂಲಕ ಹೇಬಿಯಸ್ ಕಾರ್ಪಸ್ ಅರ್ಜಿಯ ಉದ್ದೇಶವನ್ನು ಪೂರೈಸಲಾಗಿದೆ. ಮುಂದೆ ಯಾವುದೇ ನಿರ್ದೇಶನಗಳ ಅಗತ್ಯವಿಲ್ಲ ಎಂದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಮದ್ರಾಸ್ ಹೈಕೋರ್ಟ್‌ನಲ್ಲಿರುವ ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್
ಸದ್ಗುರು
Follow us
ರಶ್ಮಿ ಕಲ್ಲಕಟ್ಟ
| Updated By: ಸುಷ್ಮಾ ಚಕ್ರೆ

Updated on:Oct 18, 2024 | 9:47 PM

ದೆಹಲಿ ಅಕ್ಟೋಬರ್ 18: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಆಧ್ಯಾತ್ಮಿಕ ನಾಯಕ ಸದ್ಗುರುವಿನ ಆಶ್ರಮವನ್ನು ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು “ಬ್ರೈನ್ ವಾಶ್” ಮಾಡಲಾಗಿದೆ ಎಂದು ವ್ಯಕ್ತಿಯೊಬ್ಬರ  ಹೇಳಿಕೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ನಲ್ಲಿರುವ ಇಶಾ ಫೌಂಡೇಶನ್ (Isha Foundation)ವಿರುದ್ಧದ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ (Supreme Court) ಶುಕ್ರವಾರ ರದ್ದುಗೊಳಿಸಿದೆ. ಗೀತಾ ಮತ್ತು ಲತಾ ಇಬ್ಬರೂ ವಯಸ್ಕರಾಗಿದ್ದು, ಅವರ ಸ್ವಂತ ಇಚ್ಛೆಯ ಆಶ್ರಮದಲ್ಲಿ ವಾಸಿಸುತ್ತಿರುವ ಕಾರಣ ಕಾನೂನುಬಾಹಿರ ಬಂಧನದ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ತೀರ್ಪು ನೀಡಿದೆ.

ಆದಾಗ್ಯೂ, ಆದೇಶವು ಈ ಪ್ರಕರಣಕ್ಕೆ ಮಾತ್ರ. ಆಶ್ರಮದಲ್ಲಿ ವೈದ್ಯರೊಬ್ಬರ ಮೇಲೆ ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯದ ಆರೋಪವಿದೆ ಎಂದು ನ್ಯಾಯಾಲಯವು ಹೇಳಿದೆ.ಬ್ರೈನ್ ವಾಶ್  ವಿಷಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್, ಆಶ್ರಮದ ಮೇಲೆ ದಾಳಿ ನಡೆಸಿದ ನಂತರ, “ಸಂಪೂರ್ಣವಾಗಿ ಅನುಚಿತ” ರೀತಿಯಲ್ಲಿ ವರ್ತಿಸಿದೆ ಎಂದಿದೆ.

ಆಶ್ರಮಕ್ಕೆ ಸೇರಿದಾಗ ಅವರಿಬ್ಬರಿಗೂ 27 ಮತ್ತು 24 ವರ್ಷ. ಹೆಣ್ಣುಮಕ್ಕಳಿಬ್ಬರೂ ಅಪ್ರಾಪ್ತ ವಯಸ್ಸಿನವರಾಗಿರಲಿಲ್ಲ. ಅವರು ಹೈಕೋರ್ಟಿಗೆ ಹಾಜರಾಗುವ ಮೂಲಕ ಹೇಬಿಯಸ್ ಕಾರ್ಪಸ್ ಅರ್ಜಿಯ ಉದ್ದೇಶವನ್ನು ಪೂರೈಸಲಾಗಿದೆ. ಮುಂದೆ ಯಾವುದೇ ನಿರ್ದೇಶನಗಳ ಅಗತ್ಯವಿಲ್ಲ ಎಂದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ರೀತಿಯ ಪ್ರಕ್ರಿಯೆಗಳನ್ನು “ಜನರು ಮತ್ತು ಸಂಸ್ಥೆಗಳಿಗೆ ಹಾನಿ ಮಾಡಲು” ಬಳಸಲಾಗುವುದಿಲ್ಲ ಎಂದು ಮುಖ್ಯ ನ್ಯಾಯಾಧೀಶರು ಈ ಪ್ರಕರಣದ ಮೌಖಿಕ ಹೇಳಿಕೆಗಳಲ್ಲಿ ಹೇಳಿದರು ಎಂದು ಕಾನೂನು ಸುದ್ದಿ ವೆಬ್‌ಸೈಟ್ ಲೈವ್ ಲಾ ವರದಿ ಮಾಡಿದೆ.

ಈ ತಿಂಗಳ ಆರಂಭದಲ್ಲಿ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ಗೆ ವರ್ಗಾಯಿಸಿದ್ದು  ವ್ಯಕ್ತಿಯ ಆರೋಪಗಳನ್ನು ತನಿಖೆ ಮಾಡಲು ಪೊಲೀಸರಿಗೆ ನಿರ್ದೇಶನ ನೀಡುವ ಆದೇಶವನ್ನು ಸ್ಥಗಿತಗೊಳಿಸಿತು.

ಹೈಕೋರ್ಟಿನ ಆದೇಶದ ನಂತರ ನೂರಾರು ಪೊಲೀಸರು ಇಶಾ ಫೌಂಡೇಶನ್ ಮೇಲೆ ದಾಳಿ ನಡೆಸಿತ್ತು.  ಪೊಲೀಸ್ ವಿಚಾರಣೆಯ ವಿರುದ್ಧ ಇಶಾ ಫೌಂಡೇಶನ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆಗ ಹೈಕೋರ್ಟ್ ಸದ್ಗುರು ಜಗ್ಗಿ ವಾಸುದೇವ್ ಅವರ ಕಾರ್ಯಗಳನ್ನು ಪ್ರಶ್ನಿಸಿತ್ತು.

ಇಶಾ ಫೌಂಡೇಶನ್ ಆಗಲೂ ಆ ಆರೋಪಗಳನ್ನ ನಿರಾಕರಿಸಿತ್ತು. ಮಹಿಳೆಯರಿಗೆ 42 ಮತ್ತು 39. ಅವರು ಅಲ್ಲಿಯ ನಿವಾಸಿಗಳು ಎಂದು ಹೇಳಿದ್ದು, ಆ ಮಹಿಳೆಯರು ಹೈಕೋರ್ಟ್‌ನ ಮುಂದೆ ಹಾಜರಾಗಿ ಫೌಂಡೇಶನ್‌ನ ಹೇಳಿಕೆಯನ್ನು ದೃಢಪಡಿಸಿದ್ದರು. ತನ್ನ ಸಹೋದರಿ ಮತ್ತು ತಾನು ಇಲ್ಲಿಯ ನಿವಾಸಿಗಳಾಗಿದ್ದು, ಅವರ ತಂದೆ ಎಂಟು ವರ್ಷಗಳಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಅವರ ತಾಯಿಯೂ ಇದೇ ರೀತಿ ಕಿರುಕುಳ ನೀಡಿದ್ದರು ಎಂದು ಅವರು ಹೇಳಿದ್ದಾರೆ.

ಇಶಾ ಫೌಂಡೇಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ತಮಿಳುನಾಡು ಪೊಲೀಸರ ಸ್ಥಿತಿ ವರದಿಯಲ್ಲಿ ಮಹಿಳೆಯರು ಸ್ವಯಂಪ್ರೇರಣೆಯಿಂದ ಆಶ್ರಮದಲ್ಲಿ ವಾಸವಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.ತಮ್ಮ ಬೆಳೆದ ಮಕ್ಕಳ ಬದುಕನ್ನು “ನಿಯಂತ್ರಿಸಲು” ಸಾಧ್ಯವಿಲ್ಲ. ಅರ್ಜಿಗಳನ್ನು ಸಲ್ಲಿಸುವ ಬದಲು ಅವರ ವಿಶ್ವಾಸ ಗಳಿಸುವಂತೆ ಮಹಿಳೆಯರ ಅಪ್ಪನಿಗೆ ನ್ಯಾಯಾಲಯ ಹೇಳಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಒಂದು ಕ್ಷೇತ್ರದಿಂದ ಅಭ್ಯರ್ಥಿ ಘೋಷಿಸಿದ ಠಾಕ್ರೆ, ಶಿವಸೇನೆ ಕಾಂಗ್ರೆಸ್​ ನಡುವೆ ಹೆಚ್ಚಿದ ಉದ್ವಿಗ್ನತೆ

ಹಲವು ಜನರು ಕಾಣೆಯಾಗಿದ್ದಾರೆ

ಇದಕ್ಕೂ ಮೊದಲು, ತಮಿಳುನಾಡು ಪೊಲೀಸರು ಪ್ರತಿ ಅರ್ಜಿಯಲ್ಲಿ, ಇಶಾ ಫೌಂಡೇಶನ್ ಗೆ ಬಂದ ಅನೇಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅರ್ಜಿಯು ಪೋಕ್ಸೊ ಅಥವಾ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ವಿವರಗಳನ್ನು ನೀಡಿತು, ಇದರಲ್ಲಿ ದೆಹಲಿ ಮಹಿಳೆಯೊಬ್ಬರು ಸಲ್ಲಿಸಿದ ಲೈಂಗಿಕ ದೌರ್ಜನ್ಯದ ದೂರಿನ ಉಲ್ಲೇಖವೂ ಇತ್ತು. ಅವರು 2021 ರಲ್ಲಿ ಆಶ್ರಮದಲ್ಲಿ ಯೋಗ ಕೋರ್ಸ್‌ಗೆ ಹಾಜರಾಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Fri, 18 October 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!