AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬನಿಗೆ ಗಲ್ಲು ಫಿಕ್ಸ್​ ಆಯ್ತು: ಉಳಿದವರಿಗೆ ಏನಾಯ್ತು?

ದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣ ಸಂಬಂಧ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅಪರಾಧಿ ಮುಖೇಶ್​ಗಿದ್ದ ಎಲ್ಲ ಕಾನೂನು ಹಾದಿಗಳು ಬಂದ್ ಆಗಿವೆ. ಅಪರಾಧಿ ಅರ್ಜಿಯಲ್ಲಿ ಹುರುಳಿಲ್ಲ: ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದ ತೀರ್ಮಾನ ಪ್ರಶ್ನಿಸಿ ಮುಖೇಶ್​ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಅಪರಾಧಿ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಈ ಪ್ರಕರಣದಲ್ಲಿ ಕೋರ್ಟ್‌ ಮಧ್ಯಪ್ರವೇಶ ಅಗತ್ಯವಿಲ್ಲ. ರಾಷ್ಟ್ರಪತಿಗಳು ಆತುರದಲ್ಲಿ ನಿರ್ಧಾರವನ್ನು ಕೈಗೊಂಡಿಲ್ಲ. ಅಲ್ಲದೆ, ಅಪರಾಧಿ ಮುಖೇಶ್ ಅರ್ಜಿಯಲ್ಲಿ ಯಾವುದೇ […]

ಒಬ್ಬನಿಗೆ ಗಲ್ಲು ಫಿಕ್ಸ್​ ಆಯ್ತು: ಉಳಿದವರಿಗೆ ಏನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 29, 2020 | 12:17 PM

Share

ದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣ ಸಂಬಂಧ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅಪರಾಧಿ ಮುಖೇಶ್​ಗಿದ್ದ ಎಲ್ಲ ಕಾನೂನು ಹಾದಿಗಳು ಬಂದ್ ಆಗಿವೆ.

ಅಪರಾಧಿ ಅರ್ಜಿಯಲ್ಲಿ ಹುರುಳಿಲ್ಲ: ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದ ತೀರ್ಮಾನ ಪ್ರಶ್ನಿಸಿ ಮುಖೇಶ್​ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಅಪರಾಧಿ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಈ ಪ್ರಕರಣದಲ್ಲಿ ಕೋರ್ಟ್‌ ಮಧ್ಯಪ್ರವೇಶ ಅಗತ್ಯವಿಲ್ಲ. ರಾಷ್ಟ್ರಪತಿಗಳು ಆತುರದಲ್ಲಿ ನಿರ್ಧಾರವನ್ನು ಕೈಗೊಂಡಿಲ್ಲ. ಅಲ್ಲದೆ, ಅಪರಾಧಿ ಮುಖೇಶ್ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಕ್ಷಮಾದಾನ ನೀಡಲು ಯಾವುದೇ ಪೂರಕ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಗಲ್ಲು ಶಿಕ್ಷೆ ತಡ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ಅಪರಾಧಿಗಳಿಗೆ ಗಲ್ಲುಶಿಕ್ಷೆ ತಡ ಮಾಡುವಂತಿಲ್ಲ. ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಕ್ಕೆ ಕ್ಷಮಾದಾನ ನೀಡಲಾಗುವುದಿಲ್ಲ ಎಂದು ಮುಖೇಶ್​ ಅರ್ಜಿ ವಜಾ ಮಾಡಲು ಸುಪ್ರೀಂಕೋರ್ಟ್ ಕಾರಣ ನೀಡಿದೆ. ಹೀಗಾಗಿ ನಿರ್ಭಯಾ ಅಪರಾಧಿ ಮುಖೇಶ್​ ಸಿಂಗ್​ಗೆ ಗಲ್ಲುಶಿಕ್ಷೆ ಫಿಕ್ಸ್ ಆಗಿದೆ.

ಫೆ.1ರಂದು ಗಲ್ಲಿಗೇರಿಸುವುದು ಅನುಮಾನ: ನಿರ್ಭಯಾ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಅಪರಾಧಿಗಳಿಗೂ ಡೆತ್​ ವಾರಂಟ್ ಹೊರಡಿಸಲಾಗಿದೆ. ಇಂದು ಮುಖೇಶ್​ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಕಾನೂನಿನ ಎಲ್ಲಾ ಬಾಗಿಲುಗಳು ಬಂದ್ ಆಗಿವೆ. ಆದ್ರೆ ನಾಲ್ವರು ಸೇರಿ ಕೃತ್ಯೆಸಗಿರುವ ಕಾರಣ ಓರ್ವನನ್ನು ಮಾತ್ರ ಗಲ್ಲಿಗೇರಿಸಲು ಸಾಧ್ಯವಿಲ್ಲ. ಹೀಗಾಗಿ ಫೆ.1ರಂದು ಅಪರಾಧಿಗಳನ್ನು ಗಲ್ಲಿಗೇರಿಸುವುದು ಅನುಮಾನವಾಗಿದೆ. ಇನ್ನೂ ಮೂವರ ಕ್ಷಮಾದಾನ ಅರ್ಜಿಗಳು ಬಾಕಿಯಿದ್ದು, ಎಲ್ಲವೂ ಕ್ಲಿಯರ್ ಆದ ಬಳಿಕ ಗಲ್ಲಿಗೇರಿಸುವ ಸಾಧ್ಯತೆಯಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್