ಬ್ಯಾಲೆಟ್ ಪೇಪರ್ ಮತದಾನ ಬೇಕು ಎಂಬ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ, ಕಾಂಗ್ರೆಸ್​​​ಗೆ ಶಾಕ್

ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್​​ ಆಗಿದೆ. ಇದಕ್ಕಾಗಿ ಒಂದು ಜನಾಂದೋಲನ ಆಗಬೇಕಿದೆ. ಮತ್ತೆ ಬ್ಯಾಲೆಟ್ ಪೇಪರ್ ಬರಬೇಕು. ಇವಿಎಂ ಹೋಗಬೇಕು, ಹಾಗಾಗಿ ಭಾರತ್ ಜೋಡೋ ಯಾತ್ರೆ' ರೀತಿಯಲ್ಲಿ ಇದಕ್ಕೂ ದೊಡ್ಡ ಆಂದೋಲನ ಆಗಬೇಕಿದೆ ಎಂದು ಕಾಂಗ್ರೆಸ್​​​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದಕ್ಕಾಗಿ ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದೀಗ ಈ ಬಗ್ಗೆ ಸುಪ್ರೀಂ ಕೋರ್ಟ್​​ ಕಾಂಗ್ರೆಸ್​​​ಗೆ ಶಾಕ್​​​ ನೀಡಿದೆ.

ಬ್ಯಾಲೆಟ್ ಪೇಪರ್ ಮತದಾನ ಬೇಕು ಎಂಬ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ, ಕಾಂಗ್ರೆಸ್​​​ಗೆ ಶಾಕ್
ಸಾಂದರ್ಭಿಕ ಚಿತ್ರ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 26, 2024 | 5:59 PM

ದೇಶದ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಮತದಾನಕ್ಕೆ ಹಿಂತಿರುಗುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಸುಪ್ರೀಂ ವಿಚಾರಣೆ ವೇಳೆ ಅರ್ಜಿದಾರರಾದ ಕೆಎ ಪೌಲ್ ಅವರು ಚಂದ್ರಬಾಬು ನಾಯ್ಡು ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಅವರಂತಹ ನಾಯಕರು ಕೂಡ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಟ್ಯಾಂಪರಿಂಗ್ ಬಗ್ಗೆ ಪ್ರಶ್ನೆ ಮಾಡಿದ್ದರು ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸುಪ್ರೀಂ ಕೋರ್ಟ್​​ ನಿಮಗೆ ಚುನಾವಣೆಯಲ್ಲಿ ಗೆದ್ದರೆ, ಇವಿಎಂ ಅಥವಾ ಮತ ಯಂತ್ರಗಳನ್ನು ಟ್ಯಾಂಪರಿಂಗ್ ಮಾಡುವುದಿಲ್ಲ. ಚಂದ್ರಬಾಬು ನಾಯ್ಡು ಅಥವಾ ಶ್ರೀ ರೆಡ್ಡಿ ಸೋತಾಗ ಇವಿಎಂ ಟ್ಯಾಂಪರಿಂಗ್ ಆಗಿದೆ ಎಂದು ಹೇಳುತ್ತೀರಾ. ಇದು ಸರಿಯೇ ಎಂದು ಕೇಳಿದ್ದಾರೆ.

ನಾವು ಇದನ್ನು ಒಪ್ಪುವುದಿಲ್ಲ, ಈ ಅರ್ಜಿಯನ್ನು ತಿರಸ್ಕರಿಸುತ್ತೇವೆ ಎಂದು ಹೇಳಿದರು. ಜತೆಗೆ ಈ ವಿಚಾರವಾಗಿ ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿಬಿ ವರಾಳೆ ಅವರ ಪೀಠ ಅಭಿಪ್ರಾಯಪಟ್ಟಿದೆ.

ಇದರ ಜತೆಗೆ ಚುನಾವಣಾ ಆಯೋಗಕ್ಕೂ ಮಹತ್ವದ ಆದೇಶವನ್ನು ನೀಡಿದೆ. ಮತದಾನದ ಸಮಯದಲ್ಲಿ ಮತದಾರರಿಗೆ ಹಣ, ಮದ್ಯ ಅಥವಾ ಇತರ ವಸ್ತು ಪ್ರಚೋದನೆಗಳನ್ನು ವಿತರಿಸಿದ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಿ ಎಂದು ಹೇಳಿದ್ದಾರೆ.

ಇದರ ಜತೆಗೆ ಅರ್ಜಿದಾರರಿಗೆ ನೀವು ಸಮಾಜಕ್ಕೆ ಒಳ್ಳೆಯ ವಿಚಾರದ ಬಗ್ಗೆ ತಿಳಿಸುವವರು, ರಾಜಕೀಯಕ್ಕೆ ಬರಬೇಡಿ ಎಂದು ಖಡಕ್​​ ಉತ್ತರವನ್ನು ನೀಡಿದೆ. ಅರ್ಜಿದಾರರಾದ ಕೆಎ ಪೌಲ್ ಅವರು ಇವಿಎಂಗಳು ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟು ಮಾಡುತ್ತವೆ, ಎಲೋನ್ ಮಸ್ಕ್ ಅವರಂತಹ ಪ್ರಮುಖ ವ್ಯಕ್ತಿಗಳು ಸಹ ಇವಿಎಂ ಟ್ಯಾಂಪರಿಂಗ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಕೋರ್ಟ್​​ ಮುಂದೆ ವಾದಿಸಿದ್ದಾರೆ.

ನಮಗೆ ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕು ಎಂಬ ಕಾಂಗ್ರೆಸ್​​ ಅಭಿಯಾನಕ್ಕೆ ಶಾಕ್

ಇನ್ನು ಈ ತೀರ್ಪಿಗೂ ಮುನ್ನ ಕಾಂಗ್ರೆಸ್​​​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಭಾರತ್ ಜೋಡೋ ಯಾತ್ರೆ’ಯಂತಹ ಪ್ರಚಾರಕ್ಕೆ ಕರೆ ನೀಡಿದರು. ಈ ಮೂಲಕ ನಮಗೆ ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕು. ಇದಕ್ಕಾಗಿ ‘ಭಾರತ್ ಜೋಡೋ ಯಾತ್ರೆ’ ಮೂಲಕ ಅಭಿಯಾನ ಪ್ರಾರಂಭಿಸುವ ಎಂದು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆದ ಪಕ್ಷದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಹೇಳಿದರು.

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆಲ್ಲುವ ಮೂಲಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ನಂತರ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಚುನಾವಣೆ ದೊಡ್ಡ ದೋಷ ಉಂಟಾಗಿದೆ. ಇವಿಎಂ ಹ್ಯಾಕಿಂಗ್ ಆಗಿದೆ ಎಂದು ಕಾಂಗ್ರೆಸ್‌ನ ಮಹಾರಾಷ್ಟ್ರ ವೀಕ್ಷಕ ಮತ್ತು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಕೂಡ ಹೇಳಿದರು.

ನಾವು ಮಹಾರಾಷ್ಟ್ರ ಚುನಾವಣಾ ಫಲಿತಾಂಶವನ್ನು ಆಳವಾಗಿ ವಿಶ್ಲೇಷಿಸಿದ್ದೇವೆ. ಹಲವು ಸ್ಥಳಗಳಲ್ಲಿ ಇವಿಎಂಗಳನ್ನು ದುರ್ಬಳಕೆ ಮಾಡಲಾಗಿದೆ. ಇದು ಜಾರ್ಖಂಡ್ ಮತ್ತು ಇತರೆಡೆ ಏಕೆ ಸಂಭವಿಸಲಿಲ್ಲ ಎಂಬುದು ಸ್ಪಷ್ಟವಾದ ಪ್ರಶ್ನೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

ಈ (ಇವಿಎಂ ಸಮಸ್ಯೆ) ಬಗ್ಗೆ ಯಾರೂ ಕೇಳುತ್ತಿಲ್ಲ, ನಾವು ಸುಪ್ರೀಂ ಕೋರ್ಟ್‌ಗೆ ಹೋಗಿದ್ದೇವೆ ಎಂದು ಹೇಳಿದ್ದಾರೆ. ಆದರೆ ಇದೀಗ ಈ ಬಗ್ಗೆ ಸುಪ್ರೀಂ ಮಹತ್ವ ಆದೇಶವನ್ನು ನೀಡಿದ್ದು, ಈ ಅರ್ಜಿಯನ್ನು ತಿರಸ್ಕರ ಮಾಡಿದೆ. ಆದರೆ ಈ ಸಮಸ್ಯೆಯನ್ನು ಸರಿಪಡಿಸಲು ಜನಾಂದೋಲ ಮಾಡಬೇಕು ಎಂದು ಖರ್ಗೆ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ