ಚುನಾವಣಾ ಬಾಂಡ್ ಯೋಜನೆ ಕುರಿತು ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಫೆಬ್ರವರಿ 15 ರಂದು, ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು "ಅಸಂವಿಧಾನಿಕ" ಎಂದು ಕರೆದಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯು "ಆರ್ಟಿಕಲ್ 19 (1) (ಎ) ಅಡಿಯಲ್ಲಿ ಮಾಹಿತಿ ಹಕ್ಕು ಉಲ್ಲಂಘನೆಯಾಗಿದೆ" ಎಂದಿತ್ತು.

ಚುನಾವಣಾ ಬಾಂಡ್ ಯೋಜನೆ ಕುರಿತು ಎಸ್‌ಐಟಿ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿ ವಜಾಗೊಳಿಸಿದ ಸುಪ್ರೀಂ
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Aug 02, 2024 | 4:26 PM

ದೆಹಲಿ ಆಗಸ್ಟ್ 02: ಚುನಾವಣಾ ಬಾಂಡ್‌ಗಳನ್ನು (Electoral bonds) ಬಳಸಿಕೊಂಡು ಚುನಾವಣಾ ಹಣಕಾಸು ವ್ಯವಹಾರದಲ್ಲಿ ನಡೆದ ಆರೋಪದ ಹಗರಣದ ಕುರಿತು ನ್ಯಾಯಾಂಗ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (SIT) ತನಿಖೆಗೆ ಒತ್ತಾಯಿಸುವ ಅರ್ಜಿಗಳನ್ನು ಸುಪ್ರೀಂಕೋರ್ಟ್ (Supreme Court) ತಿರಸ್ಕರಿಸಿದೆ. ಫೆಬ್ರವರಿ 15 ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು. ಎರಡು ಸರ್ಕಾರೇತರ ಸಂಸ್ಥೆಗಳು (NGO) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯು (PIL) ರಾಜಕೀಯ ಪಕ್ಷಗಳು, ನಿಗಮಗಳು ಮತ್ತು ತನಿಖಾ ಸಂಸ್ಥೆಗಳ ನಡುವೆ ಪರಸ್ಪರ ಕೊಡು, ಕೊಳ್ಳುವಿಕೆಯ ವಿನಿಮಯ ನಡೆದಿದೆ ಎಂದು ಆರೋಪಿಸಿದೆ.

ಎಲೆಕ್ಟೋರಲ್ ಬಾಂಡ್‌ಗಳ ಯೋಜನೆಯನ್ನು “ಹಗರಣ” ಎಂದು ಕರೆದ ಮನವಿ, ಆ ಮೂಲಕ ಚುನಾವಣಾ ಆಯೋಗ (EC) ಬಿಡುಗಡೆ ಮಾಡಿರುವ ದತ್ತಾಂಶದಿಂದ ಬಹಿರಂಗಪಡಿಸಿದಂತೆ, ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಶೆಲ್ ಕಂಪನಿಗಳು ಮತ್ತು ನಷ್ಟದ ಕಂಪನಿಗಳ ನಿಧಿಯ ಮೂಲವನ್ನು ತನಿಖೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿದೆ.

ಫೆಬ್ರವರಿ 15 ರಂದು, ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು “ಅಸಂವಿಧಾನಿಕ” ಎಂದು ಕರೆದಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯು “ಆರ್ಟಿಕಲ್ 19 (1) (ಎ) ಅಡಿಯಲ್ಲಿ ಮಾಹಿತಿ ಹಕ್ಕು ಉಲ್ಲಂಘನೆಯಾಗಿದೆ” ಎಂದಿತ್ತು.

ರಾಜಕೀಯ ಪಕ್ಷಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಂಬಂಧಿತ ಘಟಕಗಳಾಗಿವೆ. ಚುನಾವಣಾ ಆಯ್ಕೆಗಳಿಗೆ ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯ ಎಂದು ನ್ಯಾಯಾಲಯ ಹೇಳಿದೆ.  ಅರ್ಜಿಯಲ್ಲಿ, “ಚುನಾವಣಾ ಬಾಂಡ್ ಹಗರಣವು 2ಜಿ ಹಗರಣ ಅಥವಾ ಕಲ್ಲಿದ್ದಲು ಹಗರಣಕ್ಕಿಂತ ಭಿನ್ನವಾಗಿ ಹಣದ ಹಾದಿಯನ್ನು ಹೊಂದಿದೆ, ಅಲ್ಲಿ ಸ್ಪೆಕ್ಟ್ರಂ ಮತ್ತು ಕಲ್ಲಿದ್ದಲು ಗಣಿಗಾರಿಕೆ ಗುತ್ತಿಗೆಗಳನ್ನು ನಿರಂಕುಶವಾಗಿ ಹಂಚಿಕೆ ಮಾಡಲಾಗಿದೆ. ಆದರೆ ಹಣದ ಹಾದಿಗೆ ಯಾವುದೇ ಪುರಾವೆಗಳಿಲ್ಲ. ಆದರೂ ಈ ನ್ಯಾಯಾಲಯವು ಆ ಎರಡೂ ಪ್ರಕರಣಗಳಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗಳನ್ನು ಆದೇಶಿಸಿತು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿ ಆ ಪ್ರಕರಣಗಳ ತನಿಖೆಗೆ ವಿಶೇಷ ನ್ಯಾಯಾಲಯಗಳನ್ನು ರಚಿಸಿತು.

ಚುನಾವಣಾ ಬಾಂಡ್‌ಗಳನ್ನು 2018 ರಲ್ಲಿ ಪರಿಚಯಿಸಲಾಯಿತು. ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ತರುವ ಪ್ರಯತ್ನಗಳ ಭಾಗವಾಗಿ ರಾಜಕೀಯ ಪಕ್ಷಗಳಿಗೆ ನೀಡಿದ ನಗದು ದೇಣಿಗೆಯನ್ನು ಬಾಂಡ್ ಮೂಲಕ ನೀಡಲಾಗುತ್ತದೆ.

ಇದನ್ನೂ ಓದಿ: Rahul Gandhi: ಲೋಕಸಭೆಯ ಭಾಷಣದ ನಂತರ ಇಡಿ ದಾಳಿಗೆ ಕಾಯುತ್ತಿದ್ದೇನೆ; ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ತನಿಖೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ಏಜೆನ್ಸಿಗಳ ತನಿಖೆಯಲ್ಲಿರುವ ಹಲವಾರು ಸಂಸ್ಥೆಗಳು ಆಡಳಿತ ಪಕ್ಷಕ್ಕೆ ದೊಡ್ಡ ಮೊತ್ತದ ಹಣವನ್ನು ದೇಣಿಗೆಯಾಗಿ ನೀಡಿವೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್