ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೊಯ್ ನಾಮನಿರ್ದೇಶನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

| Updated By: ರಮೇಶ್ ಬಿ. ಜವಳಗೇರಾ

Updated on: Nov 09, 2022 | 8:50 PM

ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೊಯ್ ನಾಮನಿರ್ದೇಶನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
Supreme Court And Ranjan Gogoi
Follow us on

ನವದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ (Ranjan Gogoi) ಅವರನ್ನು ರಾಜ್ಯಸಭೆಗೆ (Rajya Sabha) ನೇಮಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌  (Supreme Cour) ವಜಾ ಮಾಡಿದೆ.

ಗೊಗೊಯ್ ಅವರು ಸುಪ್ರೀಂಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ಮಾರ್ಚ್ 2020 ರಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. ನಾಮನಿರ್ದೇಶನದ ಸಮಯದಲ್ಲಿ ಹಲವಾರು ಸಾಂವಿಧಾನಿಕ ತಜ್ಞರು, ಹಕ್ಕುಗಳ ಕಾರ್ಯಕರ್ತರು ಮತ್ತು ಇತರರು ನಿರ್ಧಾರವನ್ನು ಟೀಕಿಸಿದ್ದರು.

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ರಂಜನ್ ಗೊಗೊಯಿ ನಾಮನಿರ್ದೇಶನ ಪ್ರಶ್ನಿಸಿ ಸುಪ್ರೀಂಕೋರ್ಟ್​​ಗೆ ಅರ್ಜಿ

ಯಾವ ಅಧಿಕಾರ, ಅರ್ಹತೆ ಮತ್ತು ಶೀರ್ಷಿಕೆಯಿಂದ ಗೊಗೊಯ್ ಅವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸತೀಶ್ ಎಸ್ ಪ್ರಶ್ನಿಸಿದ್ದರು.

2019ರ ನವೆಂಬರ್‌ 17ರಂದು ಗೊಗೊಯ್‌ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು. ಗೊಗೊಯಿ ಅವರು 2001ರಲ್ಲಿ ಗುವಾಹಟಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 2010ರಲ್ಲಿ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗ ಮಾಡಲಾಗಿತ್ತು. 2011ರಲ್ಲಿ ಇದೇ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಹೊಂದಿದ್ದರು. 2012ರ ಏ.23ರಿಂದ 2019ರ ನವೆಂಬರ್‌ವರೆಗೂ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ