ಕುರಾನ್​ನಲ್ಲಿನ ಕೆಲವು ಭಾಗಗಳು ದೇಶದ ಕಾನೂನಿಗೆ ವಿರುದ್ಧ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ 50 ಸಾವಿರ ದಂಡ ವಿಧಿಸಿದ ಸುಪ್ರೀಂಕೋರ್ಟ್

ಕುರಾನ್​ನಲ್ಲಿನ ಕೆಲವು ಆಯತ್​ಗಳು ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತವೆ ಎಂದು ವಾಸೀಂ ರಿಜ್ವಿ ದೂರಿದ್ದರು. ಅಲ್ಲದೇ ಪಿಐಎಲ್ ಸಲ್ಲಿಸಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಂ ರಿಜ್ವಿಗೆ 50 ಸಾವಿರ ದಂಡವನ್ನು ಸಹ ಸುಪ್ರೀಂಕೋರ್ಟ್ ವಿಧಿಸಿದೆ.

ಕುರಾನ್​ನಲ್ಲಿನ ಕೆಲವು ಭಾಗಗಳು ದೇಶದ ಕಾನೂನಿಗೆ ವಿರುದ್ಧ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ 50 ಸಾವಿರ ದಂಡ ವಿಧಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್ ಮತ್ತು ಪವಿತ್ರ ಕುರಾನ್
Follow us
guruganesh bhat
|

Updated on:Apr 12, 2021 | 3:00 PM

ದೆಹಲಿ: ಮುಸ್ಲಿಂಮರ ಪವಿತ್ರ ಧಾರ್ಮಿಕ ಗ್ರಂಥ ಕುರಾನ್​ನಲ್ಲಿನ ಕೆಲವು ಭಾಗಗಳು ದೇಶದ ಕಾನೂನಿಗೆ ವಿರುದ್ಧವಾಗಿವೆ ಮತ್ತು ಭಯೋತ್ಪಾದನೆಗೆ ಪ್ರಚೋದನೆ ನಡೆಸುತ್ತವೆ ಎಂದು ದೂರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ಅಲ್ಲದೇ ಪಿಐಎಲ್ ಸಲ್ಲಿಸಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸೀಂ ರಿಜ್ವಿಗೆ 50 ಸಾವಿರ ದಂಡವನ್ನು ಸಹ ಸುಪ್ರೀಂಕೋರ್ಟ್ ವಿಧಿಸಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ  ಫಾಲಿ ನಾರೀಮನ್, ಬಿ ಆರ್, ಗವೈ ಹೃಷಿಕೇಶ್ ರಾಯ್ ಅವರುಗಳಿದ್ದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಕುರಾನ್​ನಲ್ಲಿನ ಕೆಲವು ಆಯತ್​ಗಳು ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತವೆ ಎಂದು ವಾಸೀಂ ರಿಜ್ವಿ ದೂರಿದ್ದರು. ಅಲ್ಲದೇ ಅಂತಹ ಭಾಗಗಳನ್ನು ಅಸಾಂವಿಧಾನಿಕ, ಪರಿಣಾಮಕಾರಿಯಲ್ಲದ, ಯಾವುದೇ ಕಾರ್ಯನಿರ್ವಹಿಸಿದ ಭಾಗಗಳೆಂದು ಘೋಷಿಸಲು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಉತ್ತರ ಪ್ರದೇಶದ ಕೇಂದ್ರೀಯ ವಕ್ಫ್ ಬೋರ್ಡ್​ನ ಮಾಜಿ ಅಧ್ಯಕ್ಷ, ಆಲ್ ಇಂಡಿಯಾ ಶಿಯಾ ಯತೀಮ್ ಖಾನಾದ ಅಧ್ಯಕ್ಷರೂ ಆಗಿರುವ ವಾಸಿಂ ರಿಜ್ವಿ ಕೆಲವು ದಿನಗಳ ಹಿಂದೆಯೇ ಈ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದರು. ಅವರ ವಿರುದ್ಧ ಕೋಪಗೊಂಡಿದ್ದ ಕೆಲವು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಎಫ್ಐಆರ್ ಸಹ ದಾಖಲಿಸಿದ್ದವು. ಅಲ್ಲಾಹುವಿನ ಪವಿತ್ರ ಸಂದೇಶಗಳ ಗ್ರಂಥರೂಪ ಬರೆಯಲ್ಪಟ್ಟಿದ್ದ ಪವಿತ್ರ ಕುರಾನ್ನಲ್ಲಿ ಕೆಲವು ನಕಾರಾತ್ಮಕ ಮತ್ತು ದ್ವೇಷಪೂರಿತ ಅಂಶಗಳಿವೆ ಎಂದು ಅವರು ಅರ್ಜಿಯಲ್ಲಿ ದೂರಿದ್ದರು.

ಇದೀಗ ಈ ಆದೇಶದ ಮೂಲಕ ಸುಪ್ರೀಂಕೋರ್ಟ್ ಕುರಾನ್​ ವಿರುದ್ಧದ ಅರ್ಜಿಯನ್ನು ತಳ್ಳಿಹಾಕಿದಂತಾಗಿದೆ. ಉತ್ತರ ಪ್ರದೇಶದ ಕೇಂದ್ರೀಯ ವಕ್ಫ್ ಬೋರ್ಡ್​ನ ಮಾಜಿ ಅಧ್ಯಕ್ಷ, ವಾಸಿಂ ರಿಜ್ವಿ ಅವರ ಅರ್ಜಿಯನ್ನು ವಜಾಗೊಳಿಸಿ, ಅವರಿಗೆ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ. ಈ ಪ್ರಕರಣದ ಕುರಿತು ದೇಶದ ಮುಸ್ಲಿಂ ಸಮುದಾಯ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ‘ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರೆಸುತ್ತೀರಿ?‘: ಸುಪ್ರೀಂಕೋರ್ಟ್

ಮಹಿಳೆಯರ ಪಾಲಿಗೆ ಸಿಹಿಸುದ್ದಿ ನೀಡಿದ ಸುಪ್ರೀಂಕೋರ್ಟ್; ದೈಹಿಕ ಸಾಮರ್ಥ್ಯ ಆಧರಿತ ಕೆಲಸಗಳಲ್ಲಿ ನಿವೃತ್ತಿ ವಯಸ್ಸಿನವರೆಗೂ ಮುಂದುವರೆಯಲು ಅವಕಾಶ

(Supreme Court dismisses plea seeking deletion of certain verses from the Quran imposes costs of Rs. 50,000 on petitioner Syed Waseem Rizvi)

Published On - 2:37 pm, Mon, 12 April 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ