ಭಾರತೀಯ ಸಂಸ್ಥೆಗಳು ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವುದನ್ನು ನಿರ್ಬಂಧಿಸಬೇಕು ಎಂಬ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಉನ್ನತ ನ್ಯಾಯಾಲಯದ ಪೀಠವು ವಕೀಲ ಪ್ರಶಾಂತ್ ಭೂಷಣ್ ಮೂಲಕ ಅಶೋಕ್ ಕುಮಾರ್ ಶರ್ಮಾ ಮತ್ತು ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಭಾರತೀಯ ಸಂಸ್ಥೆಗಳು ಇಸ್ರೇಲ್‌ಗೆ ಮಿಲಿಟರಿ ನೆರವು ನೀಡುವುದನ್ನು ನಿರ್ಬಂಧಿಸಬೇಕು ಎಂಬ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್ ಪೀಠ
Follow us
ರಶ್ಮಿ ಕಲ್ಲಕಟ್ಟ
|

Updated on: Sep 09, 2024 | 4:14 PM

ದೆಹಲಿ ಸೆಪ್ಟೆಂಬರ್ 09: ಗಾಜಾದಲ್ಲಿ ಭಾರತ ಮತ್ತು ಭಾರತೀಯ ಕಂಪನಿಗಳು ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ನೆರವು ನೀಡುವುದನ್ನು ತಡೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.  ರಾಷ್ಟ್ರದ ವಿದೇಶಾಂಗ ನೀತಿಯ ಅಖಾಡಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  “ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳ ರಫ್ತಿನಲ್ಲಿ ತೊಡಗಿರುವ ಭಾರತೀಯ ಸಂಸ್ಥೆಗಳು ರಫ್ತಿನ ಮೇಲೆ ಹಿಡಿತ ಸಾಧಿಸಿದರೆ ಒಪ್ಪಂದದ ಬಾಧ್ಯತೆಗಳ ಉಲ್ಲಂಘನೆಗಾಗಿ ಮೊಕದ್ದಮೆ ಹೂಡಬಹುದು” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಉನ್ನತ ನ್ಯಾಯಾಲಯದ ಪೀಠವು ವಕೀಲ ಪ್ರಶಾಂತ್ ಭೂಷಣ್ ಮೂಲಕ ಅಶೋಕ್ ಕುಮಾರ್ ಶರ್ಮಾ ಮತ್ತು ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಇತರ ಮಿಲಿಟರಿ ಉಪಕರಣಗಳನ್ನು ರಫ್ತು ಮಾಡುವ ಭಾರತೀಯ ಸಂಸ್ಥೆಗಳಿಗೆ ಪರವಾನಗಿಗಳನ್ನು ರದ್ದುಗೊಳಿಸಲು ಮತ್ತು ಹೊಸದನ್ನು ನೀಡದಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಗಾಜಾದಲ್ಲಿ ಇಸ್ರೇಲ್ ನರಮೇಧವನ್ನು ನಡೆಸುತ್ತಿದೆ. ಆದ್ದರಿಂದ ಭಾರತೀಯ ಶಸ್ತ್ರಾಸ್ತ್ರ ರಫ್ತುಗಳು ಜನಾಂಗೀಯ ಹತ್ಯೆಯ ಅಪರಾಧದ ತಡೆಗಟ್ಟುವಿಕೆ ಮತ್ತು ಶಿಕ್ಷೆಯ ಮೇಲಿನ ಒಪ್ಪಂದದ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಸುಪ್ರೀಂ ಆದೇಶದಲ್ಲಿ ಏನು ಹೇಳಿದೆ?

ವೆಬ್‌ಸೈಟ್ ಪ್ರಕಾರ, ವಿದೇಶಾಂಗ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ಮತ್ತು ನ್ಯಾಯವ್ಯಾಪ್ತಿ ಇದೆ ಎಂದು ಸುಪ್ರೀಂಕೋರ್ಟ್ ಗಮನಿಸಿದೆ. ಅರ್ಜಿದಾರರು ಕೋರಿದ ಪರಿಹಾರಗಳನ್ನು ನೀಡಲು, ಸ್ವತಂತ್ರ ಸಾರ್ವಭೌಮ ರಾಷ್ಟ್ರವಾದ ಮತ್ತು ಭಾರತೀಯ ನ್ಯಾಯಾಲಯಗಳ ಅಧಿಕಾರ ವ್ಯಾಪ್ತಿಗೆ ಒಳಪಡದ ಇಸ್ರೇಲ್ ವಿರುದ್ಧದ ಆರೋಪಗಳ ಕುರಿತು ಸುಪ್ರೀಂಕೋರ್ಟ್ ಸಂಶೋಧನೆಗಳನ್ನು ನೋಡಬೇಕಾಗುತ್ತದೆ ಎಂದು ಅದು ಗಮನಿಸಿದೆ.

ವಿಶ್ವಸಂಸ್ಥೆಯ ನರಮೇಧ ತಡೆ ಸಮಾವೇಶದ ಅಡಿಯಲ್ಲಿ ನೀವು ಇಸ್ರೇಲ್‌ಗೆ ರಫ್ತು ಮಾಡುವುದನ್ನು ನಿಷೇಧಿಸಬೇಕೆಂದು ನಾವು ನಿರ್ದೇಶಿಸಬಹುದೇ?. ಏಕೆ ಈ ನಿರ್ಬಂಧ?. ಇದು ವಿದೇಶಾಂಗ ನೀತಿಯ ಮೇಲೆ ಪರಿಣಾಮ ಬೀರುತ್ತದೆ. ಅದರ ಪರಿಣಾಮ ಏನೆಂದು ನಮಗೆ ತಿಳಿದಿಲ್ಲ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಭಾರತ-ಇಸ್ರೇಲ್ ನಿಕಟ ಕಾರ್ಯತಂತ್ರದ ಪಾಲುದಾರರು

ಅತ್ಯಾಧುನಿಕ ರಕ್ಷಣಾ ತಂತ್ರಜ್ಞಾನಗಳು ಮತ್ತು ಮಿಲಿಟರಿ ಹಾರ್ಡ್ ವೇರ್ನಲ್ಲಿ ಬೆಳೆಯುತ್ತಿರುವ ಸಹಯೋಗದೊಂದಿಗೆ ಭಾರತ ಮತ್ತು ಇಸ್ರೇಲ್ ನಿಕಟ ಕಾರ್ಯತಂತ್ರದ ಪಾಲುದಾರರಾಗಿದ್ದಾರೆ.  ಕಣ್ಗಾವಲು ಮತ್ತು ಸೈಬರ್ ಭದ್ರತಾ ವ್ಯವಸ್ಥೆಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ ಸಾಧನಗಳನ್ನು ಇಸ್ರೇಲ್ ಭಾರತಕ್ಕೆ ಪೂರೈಸುತ್ತದೆ.

ಇದನ್ನೂ ಓದಿ: ಭಾರತದ ಮರ್ಯಾದೆ ತೆಗೆಯಲೆಂದೇ ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿದ್ದಾರೆ; ಬಿಜೆಪಿ ತಿರುಗೇಟು

ಗಾಜಾದ ಮೇಲೆ ಇಸ್ರೇಲ್‌ನ ಯುದ್ಧವು ಸಾವಿರಾರು ಪ್ಯಾಲೆಸ್ಟೀನಿಯಾದವರ ಹತ್ಯೆಗೆ ಕಾರಣವಾಯಿತು. ಇದಕ್ಕೂ ಮೊದಲು ನಡೆದ ದಾಳಿಯಲ್ಲಿ ಅಕ್ಟೋಬರ್ 7, 2023 ರಂದು ಹಮಾಸ್ ಬಂದೂಕುಧಾರಿಗಳು ಗಾಜಾದ ಗಡಿಯುದ್ದಕ್ಕೂ ಇಸ್ರೇಲ್‌ಗೆ ನುಗ್ಗಿ ಸುಮಾರು 1,200 ಜನರನ್ನು ಹತ್ಯೆ ಮಾಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್