Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ-ವಿವಿಪ್ಯಾಟ್ ಮತಗಳ ಹೋಲಿಕೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​

ವಿದ್ಯುನ್ಮಾನ ಮತ ಯಂತ್ರ ಹಾಗೂ ವಿವಿ ಪ್ಯಾಟ್‌ ತಾಳೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ. ವಿವಿ ಪ್ಯಾಟ್ ವ್ಯವಸ್ಥೆಯಲ್ಲಿ ಸೃಷ್ಟಿಯಾಗುವ ಪೇಪರ್ ಸ್ಲಿಪ್‌ಗಳ ಜತೆಗೆ ಇವಿಎಂನಲ್ಲಿ ಚಲಾವಣೆಗೊಂಡ ಪ್ರತಿಯೊಂದು ಮತವನ್ನೂ ತಾಳೆ ಹಾಕಿ ಪರಿಶೀಲಿಸುವಂತೆ ಆದೇಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಇವಿಎಂ-ವಿವಿಪ್ಯಾಟ್ ಮತಗಳ ಹೋಲಿಕೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Follow us
ನಯನಾ ರಾಜೀವ್
|

Updated on: Jul 30, 2024 | 10:38 AM

ವಿದ್ಯುನ್ಮಾನ ಮತ ಯಂತ್ರ ಹಾಗೂ ವಿವಿ ಪ್ಯಾಟ್‌ ತಾಳೆ ತೀರ್ಪಿನ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ. ವಿವಿ ಪ್ಯಾಟ್ ವ್ಯವಸ್ಥೆಯಲ್ಲಿ ಸೃಷ್ಟಿಯಾಗುವ ಪೇಪರ್ ಸ್ಲಿಪ್‌ಗಳ ಜತೆಗೆ ಇವಿಎಂನಲ್ಲಿ ಚಲಾವಣೆಗೊಂಡ ಪ್ರತಿಯೊಂದು ಮತವನ್ನೂ ತಾಳೆ ಹಾಕಿ ಪರಿಶೀಲಿಸುವಂತೆ ಆದೇಶ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಏಪ್ರಿಲ್​ 26ರಂದು ಸಂಜೀವ್​ ಕುಮಾರ್​ ಹಾಗೂ ದೀಪಾಂಕರ್​ ದತ್ತ ಅವರು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಏಪ್ರಿಲ್​ 26ರ ತೀರ್ಪಿನಲ್ಲಿ ಕೆಲವು ತಪ್ಪುಗಳಿದ್ದವು ಎಂದು ಆರೋಪಿಸಿ ಅರುಣ್​ ಕುಮಾರ್ ಅಗರ್ವಾಲ್​ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಏಪ್ರಿಲ್ 26 ರಂದು  ಎಲ್ಲಾ ವಿವಿಪ್ಯಾಟ್ ಚೀಟಿಗಳನ್ನು ಇವಿಎಂಗಳ ಮೂಲಕ ಚಲಾವಣೆಯಾದ ಮತಗಳೊಂದಿಗೆ ತಾಳೆ ಮಾಡಿ ಇವಿಎಂ ಮತಗಳ ವಿಶ್ವಾಸಾರ್ಹತೆ ಹೆಚ್ಚಿಸಬೇಕು ಎಂದು ಕೋರಿದ್ದ ಮನವಿಯನ್ನು ವಜಾಗೊಳಿಸಿತ್ತು. ಇವಿಎಂಗಳ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆಸುವ ಹಳೆಯ ವಿಧಾನಕ್ಕೆ (ಪೇಪರ್ ಬ್ಯಾಲಟ್‌) ಹಿಂತಿರುಗಲು ಕೋರಿದ್ದ ಅರ್ಜಿದಾರರ ಮನವಿಯನ್ನೂ ಅದು ತಿರಸ್ಕರಿಸಿತ್ತು.

ಮತ್ತಷ್ಟು ಓದಿ: ಇವಿಎಂ ಹೇಗೆ ಕೆಲಸ ಮಾಡುತ್ತೆ? ಸುಪ್ರೀಂಕೋರ್ಟ್​ಗೆ ಮಾಹಿತಿ ಕೊಟ್ಟ ಚುನಾವಣಾ ಆಯೋಗ

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ಎಲ್ಲಾ ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಚೀಟಿಗಳನ್ನು ತಾಳೆ ಮಾಡಲು ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಏಪ್ರಿಲ್​ನಲ್ಲಿ ಸುಪ್ರೀಂಕೋರ್ಟ್​ ವಜಾಗೊಳಿಸಿತ್ತು.

ಚುನಾವಣಾ ಸಮಯದಲ್ಲಿ ಇವಿಎಂಗಳ ಮೂಲಕ ಚಲಾವಣೆಯಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ತಾಳೆ ಮಾಡಲು ನಿರ್ದೇಶನಗಳನ್ನು ಕೋರಿದ್ದ ಮೂರು ಅರ್ಜಿಗಳಿಗೆ ಸಂಬಂಧಿಸಿದಂತೆ ಆ ತೀರ್ಪು ನೀಡಲಾಗಿತ್ತು.

ಆದರೆ, ನ್ಯಾಯಪೀಠವು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದೆ. ಚಿಹ್ನೆಗಳನ್ನು ಲೋಡ್ ಮಾಡಿದ ಬಳಿಕ, ಸಿಂಬಲ್ ಲೋಡಿಂಗ್ ಯುನಿಟ್‌ಗಳನ್ನು ಸೀಲ್ ಮಾಡುವಂತೆ ಮತ್ತು ಈ ಘಟಕವನ್ನು ಕನಿಷ್ಠ 45 ದಿನಗಳವರೆಗೆ ಭದ್ರವಾಗಿ ಇರಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.

ಪ್ರತಿ ಲೋಕಸಭೆ ಕ್ಷೇತ್ರದಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರದ ಕಂಟ್ರೋಲ್ ಯುನಿಟ್, ಬ್ಯಾಲಟ್ ಯುನಿಟ್ ಮತ್ತು ವಿವಿ ಪ್ಯಾಟ್‌ನ ಶೇ 5ರಷ್ಟು ಇವಿಎಂನ ಸೆಮಿ ಕಂಟ್ರೋಲರ್ ಅನ್ನು ಪರೀಕ್ಷಿಸಿ, ಪರಿಶೀಲಿಸಬಹುದಾಗಿದೆ ಎಂದು ನ್ಯಾಯಪೀಠ ಹೇಳಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ