AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ

ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ಟಿಎಂಸಿಗೆ ದೊಡ್ಡ ಹಿನ್ನಡೆಯಾಗಿದೆ. ಈ ಮೊದಲು ಕೋಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ
ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ
ಪ್ರಸನ್ನ ಹೆಗಡೆ
|

Updated on:May 02, 2026 | 11:57 AM

Share

ನವದೆಹಲಿ, ಮೇ 02: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕೋಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಕೋರ್ಟ್​​ ಹೇಳಿದ್ದೇನು?

ಮತ ಎಣಿಕೆಯ ಸಂದರ್ಭದಲ್ಲಿ ಪಕ್ಷಗಳ ಪ್ರತಿನಿಧಿಗಳು ಹಾಜರಿರುತ್ತಾರೆ ಮತ್ತು ಚುನಾವಣಾ ಆಯೋಗದ ಸರ್ಕ್ಯುಲರ್ ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಪೀಠ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ. ಟಿಎಂಸಿ ಪರ ವಾದಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಮೀನಾಕ್ಷಿ ಅರೋರ, ಏಪ್ರಿಲ್ 13ರ ಸರ್ಕ್ಯುಲರ್ ಬಗ್ಗೆ ಏಪ್ರಿಲ್ 29ರವರೆಗೆ ಮಾಹಿತಿ ಸಿಗಲಿಲ್ಲ ಎನ್ನುವ ಮೂಲಕ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಪರ ವಾದಿಸಿದ ಹಿರಿಯ ವಕೀಲ ಡಿ.ಎಸ್. ನಾಯ್ಡು, ಮತ ಎಣಿಕೆ ಪ್ರಕ್ರಿಯೆಯ ಮೇಲಿನ ಸಂಪೂರ್ಣ ನಿಯಂತ್ರಣ ರಾಜ್ಯ ಸರ್ಕಾರದ ಅಧಿಕಾರಿಯಾಗಿರುವ ರಿಟರ್ನಿಂಗ್ ಅಧಿಕಾರಿ ಕೈಯಲ್ಲೇ ಇರುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಾಗ್ಚಿ ಅವರಿದ್ದ ಪೀಠ, ಕೌಂಟಿಂಗ್ ಅಧಿಕಾರಿ ಕೇಂದ್ರ ಸರ್ಕಾರದ ಪ್ರತಿನಿಧಿ ಎಂದು ಹೇಳುವುದರಿಂದ ವಿಶೇಷ ವ್ಯತ್ಯಾಸವಿಲ್ಲ. ಇಂತಹ ನಿರ್ಧಾರಗಳು ಚುನಾವಣಾ ಆಯೋಗದ ವ್ಯಾಪ್ತಿಗೆ ಸೇರುತ್ತವೆ. ಜೊತೆಗೆ, ಪಕ್ಷಗಳಿಂದ ನೇಮಕಗೊಂಡ ಕೌಂಟಿಂಗ್ ಏಜೆಂಟ್‌ಗಳು, ಮೈಕ್ರೋ ಅಬ್ಸರ್ವರ್‌ಗಳು ಸೇರಿದಂತೆ ಹಲವಾರು ಮೇಲ್ವಿಚಾರಣಾ ವ್ಯವಸ್ಥೆಗಳು ಈಗಾಗಲೇ ಇವೆ ಎಂಬುದನ್ನು ಉಲ್ಲೇಖಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:43 am, Sat, 2 May 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ