ಎಸ್‌ಐಆರ್ ಪ್ರಕ್ರಿಯೆಗೆಂದು ನೇಮಕಗೊಂಡಿರುವ ಬಿಎಲ್‌ಒಗಳ ಸಾವಿನ ಬಗ್ಗೆ ಸುಪ್ರೀಂ ಕಳವಳ, ರಾಜ್ಯಗಳಿಗೆ ನಿರ್ದೇಶನ
ಚುನಾವಣಾ ಆಯೋಗವು 12 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆರಂಭಿಸಿದೆ. ಈ ಸಂದರ್ಭದಲ್ಲಿ ಈ ಪ್ರಕ್ರಿಯೆಗೆಂದು ನೇಮಕಗೊಂಡಿದ್ದ ಬಿಎಲ್‌ಒಗಳು ಒತ್ತಡದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರಿಗೆ ಹೃದಯಾಘಾತವಾದರೆ ಇನ್ನೂ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಪರಿಷ್ಕರಣೆಯನ್ನು ವಿಸ್ತರಣೆ ಮಾಡಿತ್ತು. ಈಗ ಸುಪ್ರೀಂಕೋರ್ಟ್ ಈ ಬಿಎಲ್‌ಒಗಳ ಸಾವಿನ ಕುರಿತು ಕಳವಳ ವ್ಯಕ್ತಪಡಿಸಿದೆ.ಬಿಎಲ್‌ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಅವರ ಕೆಲಸದ ಸಮಯವನ್ನು ಕಡಿಮೆ ಮಾಡಲು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ನಿರ್ದೇಶಿಸಿದೆ.

ನವದೆಹಲಿ, ಡಿಸೆಂಬರ್ 04: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಗೆಂದು ನೇಮಕಗೊಂಡಿದ್ದ ಬಿಎಲ್‌ಒಗಳ ಸಾವಿನ ಕುರಿತು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದೀಗ ಅವರ ಕೆಲಸದ ಹೊರೆ ಕಡಿಮೆ ಮಾಡಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಒತ್ತಡವು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಿಎಲ್‌ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಅವರ ಕೆಲಸದ ಸಮಯವನ್ನು ಕಡಿಮೆ ಮಾಡಲು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ನಿರ್ದೇಶಿಸಿದೆ.
ಯಾವುದೇ ಉದ್ಯೋಗಿಗೆ ಕರ್ತವ್ಯದಿಂದ ವಿನಾಯಿತಿ ಪಡೆಯಲು ನಿರ್ದಿಷ್ಟ ಕಾರಣವಿದ್ದರೆ, ಸಂಬಂಧಪಟ್ಟ ಅಧಿಕಾರಿಗಳು ಅಂತಹ ಮನವಿಗಳನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರಸ್ತುತ 10,000 ಜನರನ್ನು ಮಾತ್ರ ನಿಯೋಜಿಸಲಾಗಿರುವ ಸ್ಥಳಗಳಲ್ಲಿ 20,000 ಅಥವಾ 30,000 ಸಿಬ್ಬಂದಿಯನ್ನು ನಿಯೋಜಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಯಾವುದೇ ಬಿಎಲ್‌ಒ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದರೆ, ರಾಜ್ಯ ಸರ್ಕಾರಗಳು ಎಸ್‌ಐಆರ್ ಕರ್ತವ್ಯಕ್ಕೆ ಪರ್ಯಾಯ ಉದ್ಯೋಗಿಯನ್ನು ನಿಯೋಜಿಸಬಹುದು ಎಂದು ನ್ಯಾಯಾಲಯವು ಹೇಳಿದೆ.
ಮತ್ತಷ್ಟು ಒದಿ: ಉತ್ತರ ಪ್ರದೇಶ: ವಿಷ ಸೇವಿಸಿ ಬಿಎಲ್‌ಒ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಸಹೋದ್ಯೋಗಿಗಳ ಪ್ರತಿಭಟನೆ
ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ 12 ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಹಲವಾರು ಬಿಎಲ್‌ಒಗಳು ಆತ್ಮಹತ್ಯೆ ಹಾದಿಯನ್ನು ತುಳಿಯುತ್ತಿದ್ದಾರೆ, ಅವರ ಕುಟುಂಬ ಸದಸ್ಯರು ತಮ್ಮ ಹಿರಿಯ ಅಧಿಕಾರಿಗಳಿಂದ ಬಂದ ತೀವ್ರ ಕೆಲಸದ ಒತ್ತಡ ಅವರ ನಿಧನಕ್ಕೆ ಕಾರಣ ಎಂದು ಹೇಳಿದ್ದಾರೆ. ಕಾಂಗ್ರೆಸ್, ಟಿಎಂಸಿ ಮತ್ತು ಎಸ್‌ಪಿ ಸೇರಿದಂತೆ ವಿರೋಧ ಪಕ್ಷಗಳು ಕೂಡ ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿವೆ ಮತ್ತು ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಟೀಕಿಸಿವೆ.
ಹಲವಾರು ಬಿಎಲ್‌ಒಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತದೆ, ಇನ್ನು ಕೆಲವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್, ಪಶ್ಚಿಮ ಬಂಗಾಳ, ರಾಜಸ್ಥಾನ, ತಮಿಳುನಾಡು ಮತ್ತು ಕೇರಳದಲ್ಲಿ ಎಸ್‌ಐಆರ್ ಸಂಬಂಧಿತ ಸಾವುಗಳು ವರದಿಯಾಗಿವೆ.
ಮತದಾರರ ಪಟ್ಟಿ ಪರಿಷ್ಕರಣೆ(SIR) ಪ್ರಕ್ರಿಯೆಗಾಗಿ ನೇಮಕಗೊಂಡಿದ್ದ ಬಿಎಲ್‌ಒ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮುನ್ನ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಹೇರಿ ಬ್ರಾಹ್ಮಣನ್ ಗ್ರಾಮದ ನಿವಾಸಿ ಸರ್ವೇಶ್ ಸಿಂಗ್ ಶನಿವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮೊದಲು ಎರಡು ಪುಟಗಳ ಆತ್ಮಹತ್ಯೆ ಪತ್ರ ಬರೆದಿದ್ದಾರೆ. ಅವರ ಸಾವಿನ ನಂತರ ಅವರ ಪತ್ನಿಯ ಹೇಳಿಕೆಯನ್ನು ಸಹ ಬಿಡುಗಡೆ ಮಾಡಲಾಗಿದೆ. ಕೆಲಸದ ಒತ್ತಡದಿಂದಾಗಿ ತಮ್ಮ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ(SIR) ಪ್ರಕ್ರಿಯೆಗಾಗಿ ನೇಮಕಗೊಂಡಿದ್ದ ಬಿಎಲ್‌ಒ ವಿಷ ಸೇವಿಸಿ ಆತ್ಮಹತ್ಯೆ(Suicide)ಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಮುರಳಿಪುರ ನಿವಾಸಿ 25 ವರ್ಷದ ಮೋಹಿತ್ ಚೌಧರಿ ಎಂಬ ಅಧಿಕಾರಿ ಪ್ರಸ್ತುತ ಘರ್ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿಗಳ ಪ್ರಕಾರ, ಕ್ಯಾಂಟ್ ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್‌ಒ ಆಗಿ ನೇಮಕಗೊಂಡಿದ್ದ ಮೋಹಿತ್, ತನ್ನ ಮೇಲ್ವಿಚಾರಕರಿಂದ ಕಿರುಕುಳಕ್ಕೊಳಗಾಗಿದ್ದರಿಂದ ತೀವ್ರ ಒತ್ತಡದಲ್ಲಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




