ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅಧಿಕಾರಾವಧಿ ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಿದ ಸುಪ್ರೀಂಕೋರ್ಟ್

ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಗಳನ್ನು ಪರಿಗಣಿಸಿ, ನಾವು ಸಂಜಯ್ ಮಿಶ್ರಾ ಅಧಿಕಾರವಧಿಯನ್ನು ಮುಂದುವರಿಸಲು ಅವಕಾಶ ನೀಡುತ್ತೇವೆ. ಅವರ ಅಧಿಕಾರ ಅವಧಿಯನ್ನು ಸೆಪ್ಟೆಂಬರ್ 15 2023 ರವರೆಗೆ ಮುಂದುವರಿಸಲು ಅನುಮತಿಸುತ್ತೇವೆ. ಸೆಪ್ಟೆಂಬರ್ 15ಕ್ಕೆ ಅವರ ಸೇವಾ ಅವಧಿ ಮುಕ್ತಾಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದ್ದೆ

ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅಧಿಕಾರಾವಧಿ ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಿದ ಸುಪ್ರೀಂಕೋರ್ಟ್
ಸಂಜಯ್ ಮಿಶ್ರಾ
Follow us
ರಶ್ಮಿ ಕಲ್ಲಕಟ್ಟ
|

Updated on:Jul 27, 2023 | 6:31 PM

ದೆಹಲಿ ಜುಲೈ 27: ಜಾರಿ ನಿರ್ದೇಶನಾಲಯದ (ED) ನಿರ್ದೇಶಕರಾಗಿರುವ ಸಂಜಯ್ ಮಿಶ್ರಾ(Sanjay Mishra) ಅವರ ಅಧಿಕಾರಾವಧಿಯನ್ನು ಸೆಪ್ಟೆಂಬರ್ 15, 2023 ರವರೆಗೆ ವಿಸ್ತರಿಸಲು ಸುಪ್ರೀಂಕೋರ್ಟ್ (Supreme Court) ಗುರುವಾರ ಅನುಮತಿ ನೀಡಿದೆ.ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರ ಪೀಠವು, ಈ ಹಿಂದೆ ನಾವು ಮಿಶ್ರಾಗೆ ನೀಡಲಾದ ವಿಸ್ತರಣೆಯನ್ನು ಕಾನೂನುಬಾಹಿರವೆಂದು ಪರಿಗಣಿಸಿದ್ದರೂ, ಕೆಲಸ ಸುಗಮವಾಗಿ ನಡೆಯುವುದಕ್ಕಾಗಿ  ಅವರನ್ನು ಜುಲೈ 31 ರವರೆಗೆ ಮುಂದುವರಿಸಲು ಅನುಮತಿ ನೀಡಿದ್ದೇವೆ. ಆದರೆ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಗಳನ್ನು ಪರಿಗಣಿಸಿ, ನಾವು ಅವರ ಅಧಿಕಾರವಧಿಯನ್ನು ಇನ್ನೂ ಕೆಲವು ಅವಧಿಗೆ ಮುಂದುವರಿಸಲು ಅವಕಾಶ ನೀಡುತ್ತೇವೆ. ಅವರ ಅಧಿಕಾರ ಅವಧಿಯನ್ನು ಸೆಪ್ಟೆಂಬರ್ 15 2023 ರವರೆಗೆ ಮುಂದುವರಿಸಲು ಅನುಮತಿಸುತ್ತೇವೆ. ಸೆಪ್ಟೆಂಬರ್ 15ಕ್ಕೆ ಅವರ ಸೇವಾ ಅವಧಿ ಮುಕ್ತಾಯವಾಗುತ್ತದೆ ಎಂದಿದೆ.

ಜುಲೈ 11 ರಂದು ಇದೇ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮಿಶ್ರಾ ಅವರಿಗೆ ಮೂರನೇ ಅವಧಿಗೆ ಅಧಿಕಾರ ವಿಸ್ತರಿಸುವ ಕೇಂದ್ರ ಸರ್ಕಾರದ ಆದೇಶವನ್ನು ಕಾನೂನುಬಾಹಿರ ಎಂದು ಹೇಳಿತ್ತು. ಅಲ್ಲದೇ ಜುಲೈ 31ರ ಒಳಗೆ ಇಡಿ ಮುಖ್ಯಸ್ಥರ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಬೇಕು ಎಂದು ಹೇಳಿತ್ತು.

ಇದಾದ ನಂತರ ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅವರ ಸೇವಾವಧಿಯನ್ನು ಅಕ್ಟೋಬರ್ 15, 2023 ರವರೆಗೆ ವಿಸ್ತರಿಸುವಂತೆ ಕೋರಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.  ಗುರುವಾರ ಅರ್ಜಿಯ ವಿಚಾರಣೆ ವೇಳೆ, ಅಧಿಕಾರಾವಧಿ ವಿಸ್ತರಣೆಗೆ ಸರ್ಕಾರ ಅರ್ಜಿ ಸಲ್ಲಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು, ನಿಮ್ಮ ಇಡೀ ಇಲಾಖೆ ಅಸಮರ್ಥರಿಂದ ತುಂಬಿದೆ. ಒಬ್ಬ ವ್ಯಕ್ತಿ ಇಲ್ಲದಿದ್ದರೆ ಇಲಾಖೆ ಕಾರ್ಯನಿರ್ವಹಿಸುವುದಿಲ್ಲ ಎಂಬ ಚಿತ್ರಣವನ್ನು ನೀವು ನೀಡುತ್ತಿಲ್ಲವೇ? ಇದು ಇತರ ಅಧಿಕಾರಿಗಳ ಮೇಲೆ ಪರಿಣಾಮವನ್ನು ಬೀರುವುದಿಲ್ಲವೇ?ಎಂದು ಕೇಳಿದ್ದರು.

ಸರ್ಕಾರದ ಅರ್ಜಿಯನ್ನು ಸಮರ್ಥಿಸಿಕೊಂಡು, ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಎಫ್‌ಎಟಿಎಫ್ ನಿರಂತರ ಪ್ರಕ್ರಿಯೆಯಾಗಿರುವುದೆ. ಮಿಶ್ರಾ ಅವರು ಕಳೆದ ಹಲವು ವರ್ಷಗಳಿಂದ ವಿಭಾಗದ ಮುಖ್ಯಸ್ಥರಾಗಿರುವುದರಿಂದ ಎಫ್‌ಎಟಿಎಫ್ ಪರಿಶೀಲನೆಯ ನಿರಂತರತೆಯನ್ನು ಕಾಪಾಡಿಕೊಳ್ಳಲು ಇದು ಅಗತ್ಯವಾಗಿದೆ. ಅವರು ಇಡಿ ನಿರ್ದೇಶಕರಾಗಿ ಮುಂದುವರಿಯಬೇಕಿದೆ ಎಂದಿದ್ದಾರೆ.

“FATF ವಿಮರ್ಶೆಯು ದೇಶಕ್ಕೆ ಮಹತ್ವದ್ದಾಗಿದೆ, FAFT ವಿಮರ್ಶೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಿತಿಯನ್ನು ನಿರ್ಧರಿಸುತ್ತದೆ. ಇದು ವಿಶ್ವ ಬ್ಯಾಂಕ್, ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ಇತರ ಸಂಸ್ಥೆಗಳಲ್ಲಿ ಭಾರತದ ಕ್ರೆಡಿಟ್ ರೇಟಿಂಗ್‌ಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸಾಲಿಸಿಟರ್ ಜನರಲ್ ವಾದಿಸಿದ್ದಾರೆ.

ಏತನ್ಮಧ್ಯೆ, ಸಂಜಯ್ ಮಿಶ್ರಾ ಅವರ ವಿಸ್ತರಣೆಗಾಗಿ ಕೇಂದ್ರದ ಅರ್ಜಿಯನ್ನು ಇತರ ಪಕ್ಷಗಳು ವಿರೋಧಿಸಿದವು. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ, ಈ ವಿಷಯವನ್ನು ಸುಪ್ರೀಂ ವಿಚಾರಣೆ ನಡೆಸಿದಾಗ ಅರ್ಜಿಯಲ್ಲಿ ಕೇಳಲಾದ ಆಧಾರಗಳು ಸರ್ಕಾರಕ್ಕೆ ಸಾಕಷ್ಟು ಲಭ್ಯವಿವೆ. ಸುಪ್ರೀಂಕೋರ್ಟ್ ತೀರ್ಪನ್ನು ವಿಸ್ತರಣೆ ಕೋರುವ ಸೋಗಿನಲ್ಲಿ ಮರುಪರಿಶೀಲನೆಗೆ ಪ್ರಯತ್ನಿಸುವ ಸರ್ಕಾರದ ಪ್ರಯತ್ನ ಇದಾಗಿದೆ. ಇದಲ್ಲದೆ, ಎಫ್‌ಎಟಿಎಫ್ ಪರಿಶೀಲನೆಯನ್ನು ಎದುರಿಸುವ ಮುಖ್ಯ ಅಧಿಕಾರವು ಹಣಕಾಸು ಸಚಿವಾಲಯದ ಕಂದಾಯ ಕಾರ್ಯದರ್ಶಿಯದ್ದು.ಅರ್ಜಿಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Thu, 27 July 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್