
ಒಳಾಂಗಣ ವಿನ್ಯಾಸಕಾರ ಅನ್ವಯ್ ನಾಯ್ಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಆರ್ನಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
2018ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ನವಂಬರ್ 4ರಂದು ಆರ್ನಬ್ ಬಂಧನವಾಗಿತ್ತು. ಸೋಮವಾರ ಬಾಂಬೆ ಹೈಕೋರ್ಟ್ನಿಂದ ಜಾಮೀನು ಅರ್ಜಿ ವಜಾಗೊಂಡ ಬಳಿಕ, ಆರ್ನಬ್ ಮಂಗಳವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಡಿ.ವೈ. ಚಂದ್ರಚೂಡ್, ಇಂದಿರಾ ಬ್ಯಾನರ್ಜಿ ನೇತೃತ್ವದ ನ್ಯಾಯಪೀಠ ಆರ್ನಬ್ಗೆ ಮಧ್ಯಂತರ ಜಾಮೀನು ನೀಡಿದೆ.
Published On - 6:07 pm, Wed, 11 November 20