Asaram Bapu: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ವೈದ್ಯಕೀಯ ಕಾರಣಗಳಿಗಾಗಿ ಮಂಗಳವಾರ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಪ್ರಕರಣದಲ್ಲಿ 2013ರ ಆಗಸ್ಟ್ 31ರಂದು ಜೋಧ್‌ಪುರ ಪೊಲೀಸರು ಅಸಾರಾಂನನ್ನು ಬಂಧಿಸಿದ್ದು, ಅಂದಿನಿಂದ ಜೈಲಿನಲ್ಲಿದ್ದಾರೆ. ಜೋಧ್‌ಪುರ ಸಮೀಪದ ಮನೈ ಗ್ರಾಮದ ಅವರ ಆಶ್ರಮದಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯದವೆಸಗಿರುವ ಆರೋಪ ಅವರ ಮೇಲಿತ್ತು.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಸಾಕ್ಷ್ಯವನ್ನು ಹಾಳು ಮಾಡದಂತೆ ಮತ್ತು ಅವರ ಭೇಟಿ ಮಾಡದಂತೆ ಸುಪ್ರೀಂ ಕೋರ್ಟ್ ಅಸಾರಾಂ ಬಾಪುಗೆ ಜಾಮೀನು ನೀಡಿದೆ.
ಬಾಪು ಸದ್ಯ ಜೋಧಪುರದ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೋಧಪುರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಬಾಪು ಹೃದ್ರೋಗಿಯಾಗಿದ್ದು, ಈ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರ ಜಾಮೀನಿನ ಅವಧಿಯಲ್ಲಿ ಅವರ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಆಶ್ರಮದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದರು, ಜೋಧ್‌ಪುರ ನ್ಯಾಯಾಲಯವು ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಶಿಷ್ಯೆಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಗುಜರಾತ್ ನ್ಯಾಯಾಲಯವು ಅವರನ್ನು ಅಪರಾಧಿ ಎಂದು ಘೋಷಿಸಿತು.
ಮತ್ತಷ್ಟು ಓದಿ: Asaram Bapu: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ
ಕಳೆದ ತಿಂಗಳು ಡಿಸೆಂಬರ್ 18 ರಂದು 17 ದಿನಗಳ ಪೆರೋಲ್ ಮಂಜೂರು ಮಾಡಿದ ಕೆಲವು ದಿನಗಳ ನಂತರ ಬಾಪು ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ಬಂದಿದೆ. ಅವರು ಜನವರಿ 1 ರಂದು ಜೋಧ್‌ಪುರ ಜೈಲಿಗೆ ಮರಳಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ರಾಜಸ್ಥಾನ ಹೈಕೋರ್ಟ್‌ನಿಂದ ಏಳು ದಿನಗಳ ಪೆರೋಲ್ ಕೂಡ ನೀಡಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:43 pm, Tue, 7 January 25