AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teesta Setalvad: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂಕೋರ್ಟ್ ಜಾಮೀನು

ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.

Teesta Setalvad: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂಕೋರ್ಟ್ ಜಾಮೀನು
ತೀಸ್ತಾ ಸೆಟಲ್ವಾಡ್‌
ರಶ್ಮಿ ಕಲ್ಲಕಟ್ಟ
|

Updated on:Jul 19, 2023 | 4:57 PM

Share

2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್‌ಗೆ(Teesta Setalvad) ಜಾಮೀನು ಮಂಜೂರು ಮಾಡಿದೆ. ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್(Supreme Court) ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್ 2 ರಂದು, ಸುಪ್ರೀಂ ಕೋರ್ಟ್ ಆಕೆಗೆ ಮಧ್ಯಂತರ ಜಾಮೀನು ನೀಡಿದ್ದು, ಆಕೆ ಮಹಿಳೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳು 2002 ರ ಪ್ರಕರಣಕ್ಕೆ ಸಂಬಂಧಿಸಿವೆ. ಈ ಷರತ್ತುಗಳು ಇಂದಿಗೂ ಪ್ರಸ್ತುತವಾಗಿರುವ ಕಾರಣ ಅವರಿಗೆ ಜಾಮೀನು ನೀಡಲು ನಿರ್ಧರಿಸಿದೆ.

ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠ ಸೆಪ್ಟೆಂಬರ್ 2, 2022 ರ ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಅನುಗುಣವಾಗಿ ಸೆಟಲ್ವಾಡ್ ಜಾಮೀನು ಮುಂದುವರಿಸುವುದಾಗಿ ಹೇಳಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಈ ಪ್ರಕರಣದಲ್ಲಿ ಸೆಟಲ್ವಾಡ್ ಅವರನ್ನು ಪೊಲೀಸರು ಒಮ್ಮೆಯೂ ಪ್ರಶ್ನಿಸಿಲ್ಲ ಎಂದು ತ್ರಿಸದಸ್ಯ ಪೀಠ ಹೇಳಿದೆ.

ಪ್ರಕರಣದಲ್ಲಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಸಾಕ್ಷ್ಯಾಧಾರಗಳು ಬಹುತೇಕ ದಾಖಲೆಗಳು ಈಗಾಗಲೇ ತನಿಖಾ ಸಂಸ್ಥೆಯ ಕೈಯಲ್ಲಿವೆ ಎಂದು ಅದು ಹೇಳಿದೆ. ಸಾಕ್ಷ್ಯಗಳು ಹಾನಿಯಾಗುತ್ತದೆ ಎಂಬ ಯಾವುದೇ ಭಯವಿಲ್ಲ, ಇನ್ನು ಮುಂದೆ ಸೆಟಲ್ವಾಡ್ ಅವರ ಬಂಧನದ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಹೈಕೋರ್ಟ್‌ನ ಏಕಸದಸ್ಯ ಪೀಠದ ಜುಲೈ 1 ರ ತೀರ್ಪು  ನಿರಾಕರಣೆಗಳಿಂದ ತುಂಬಿದೆ ಎಂದು ಸುಪ್ರೀಂಕೋರ್ಟ್ ಟೀಕಿಸಿದೆ.

ಇದನ್ನೂ ಓದಿ: ಅಮೆರಿಕದಲ್ಲಿದ್ದ 105 ಪುರಾತನ ವಸ್ತುಗಳು ಮರಳಿ ಭಾರತಕ್ಕೆ, US​ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಮೋದಿ

ಕಳೆದ ವರ್ಷ ಜೂನ್ 25 ರಂದು ಗುಜರಾತ್ ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್.ಬಿ.ಶ್ರೀಕುಮಾರ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರೊಂದಿಗೆ ಅಹಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ಗೋದ್ರಾ ಗಲಭೆಯ ನಂತರ ಅಮಾಯಕರನ್ನು ಇದರಲ್ಲಿ ಸಿಲುಕಿಸಲು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದಲ್ಲಿ ಸೆಟಲ್ವಾಡ್ ಅವರನ್ನು ಬಂಧಿಸಲಾಯಿತು.

ಅಹಮದಾಬಾದ್ ಸೆಷನ್ಸ್ ನ್ಯಾಯಾಲಯವು ಜುಲೈ 30, 2022 ರಂದು ಶ ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು. ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ಕುರಿತು ಹೈಕೋರ್ಟ್ ಆಗಸ್ಟ್ 3, 2022 ರಂದು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಸೆಪ್ಟೆಂಬರ್ 19 ರಂದು ವಿಚಾರಣೆಯನ್ನು ನಿಗದಿಪಡಿಸಿತ್ತು.

2002ರ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಫೋರ್ಜರಿ, ನಕಲಿ ದಾಖಲೆ, ಗಾಯಗೊಳಿಸುವ ಉದ್ದೇಶದಿಂದ ಅಪರಾಧಗಳ ಸುಳ್ಳು ಆರೋಪಗಳನ್ನು ಹೊರಿಸಿ, ಪಿತೂರಿ ಮಾಡಿದ ಆರೋಪ ಸೆಟಲ್ವಾಡ್ ಮೇಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Wed, 19 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ